ಶಿಕ್ಷಣ
Ambika Vidyalaya-ಸಿಬಿಎಸ್‌ಇ ಹತ್ತನೆಯ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಅಮೋಘ ಸಾಧನೆ; ತಾಲೂಕಿನ ಮೊದಲ ಎಂಟು ಸ್ಥಾನಗಳನ್ನು ಬಾಚಿಕೊಂಡ ಅಂಬಿಕಾ ವಿದ್ಯಾರ್ಥಿಗಳು; ನೂರು ಶೇಕಡಾ ಫಲಿತಾಂಶ, 17 ಮಂದಿಗೆ ವಿಶಿಷ್ಟ ಶ್ರೇಣಿ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023-24ನೇ ಸಾಲಿನ ಹತ್ತನೆಯ ತರಗತಿ ಪರೀಕ್ಷೆಗಳಲ್ಲಿ ದಾಖಲೆಯ ಫಲಿತಾಂಶ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ 36 ಮಂದಿ ವಿದ್ಯಾರ್ಥಿಗಳೂ ತೇರ್ಗಡೆಯಾಗಿ ಸಂಸ್ಥೆ ನೂರು ಶೇಕಡಾ ಫಲಿತಾಂಶಕ್ಕೆ ಭಾಜನವಾಗಿದೆ. ಒಟ್ಟು 17 ಮಂದಿ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾದರೆ 17 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಫಲಿತಾಂಶವನ್ನು ಪಡೆದಿದ್ದಾರೆ. ತಾಲೂಕಿನ ಮೊದಲ ಎಂಟು ರಾಂಕ್‌ಗಳನ್ನು ಅಂಬಿಕಾ ವಿದ್ಯಾಲಯ ತನ್ನದಾಗಿಸಿಕೊಂಡು ನೂತನ ದಾಖಲೆ ಮೆರೆದಿದೆ.

ಪುತ್ತೂರಿನ ಸೇಡಿಯಾಪಿನ ಚೈತ್ರನಾರಾಯಣ ಹಾಗೂ ಸ್ವಪ್ನ ಎಸ್.ಸಿ ದಂಪತಿ ಪುತ್ರಿ ಶ್ರೀಲಕ್ಷಿ ಎಸ್.ಸಿ. 96.2% ಫಲಿತಾಂಶವನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪುತ್ತೂರಿನ ಮುರ ನಿವಾಸಿಗಳಾದ ಕೇಶವ ಮತ್ತು ವನಿತಾ ದಂಪತಿ ಪುತ್ರ ಜಸ್ವಿತ್ 95.4 ಶೇಕಡಾದೊಂದಿಗೆ ತಾಲೂಕಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಹಾರಾಡಿಯ ಅಶೋಕ್ ಭಟ್ ಎ.ಕೆ ಹಾಗೂ ನಯಾನಾ ಭಟ್ ದಂಪತಿ ಪುತ್ರ ಅಭಿನವ ವಸಿಷ್ಟ 94.8 ಶೇಕಡಾ ದಾಖಲಿಸಿದರೆ, ಮಾಡಾವಿನ ವೆಂಕಟಕೃಷ್ಣ ಶರ್ಮ ಮತ್ತು ಸಾವಿತ್ರಿ ಎಂ ದಂಪತಿ ಪುತ್ರ ಅವನೀಶ ಕೃಷ್ಣ ಎಂ 94.8 ಶೇಕಡಾ ಗಳಿಸಿದ್ದಾರೆ.

ಪುತ್ತೂರಿನ ಸಾಲ್ಮರದ ನಿವಾಸಿಗಳಾದ ಪದ್ಮಯ್ಯ ಗೌಡ ಮತ್ತು ಜಯಲಕ್ಷ್ಮೀ ದಂಪತಿ ಪುತ್ರಿ ಯಶಸ್ವೀ ಸುರುಳಿ 94.6, ಪುತ್ತೂರಿನ ಹರೀಶ್ ಪಣಂಬು ಮತ್ತು ಸಂಧ್ಯಾ ಕುಮಾರಿ ದಂಪತಿ ಪುತ್ರಿ ಸಿಂಚನ ಹರೀಶ್ ಪಣಂಬು 94.6, ಸಾಮೆತಡ್ಕದ ದಿನೇಶ್ ಕುಮಾರ್ ಪಿ ಮತ್ತು ಪೂರ್ಣಿಮ ಬಿ ದಂಪತಿ ಪುತ್ರಿ ಕುಶಿ ಪಿ.ಡಿ 94.4, ಮುಕ್ರಂಪಾಡಿಯ ಡಾ. ಅವನೀಶ್ ಕಲ್ಲುರಾಯ ಪಿ.ಜಿ ಮತ್ತು ಡಾ. ಪ್ರತಿಭಾ ಕಲ್ಲುರಾಯ ದಂಪತಿ ಪುತ್ರ ಅದ್ವಿಕ್ ಕಲ್ಲುರಾಯ 94.2, ತೆಂಕಿಲದ ಡಾ. ಪ್ರಶಾಂತ್ ಬಿ.ಎನ್ ಮತ್ತು ಅಶ್ವಿನಿ.ಪಿ ದಂಪತಿ ಪುತ್ರ ಅಂಶಕ ಬಿ.ಜಿ 93.2, ಕೊಂಬೆಟ್ಟಿನ ಲಕ್ಷ್ಮಿಕಾಂತ್ ಬಿ ಆಚಾರ್ಯ ಮತ್ತು ವೇದ ಲಕ್ಷ್ಮಿಕಾಂತ್ ಅಚಾರ್ಯ ದಂಪತಿ ಪುತ್ರಿ ಆರುಂಧತಿ ಎಲ್.ಆಚಾರ್ಯ 92.8, ಪುಣಚದ ಪ್ರಶಾಂತ ಕೆ. ಎನ್ ಮತ್ತು ವೈಶಾಲಿ ಎಮ್ ದಂಪತಿ ಪುತ್ರ ಪ್ರವರ್ಧನ್ ಕೆ.ಪಿ 91.8, ಸಾಲ್ಮರದ ಡಾ. ಪ್ರಸನ್ನ ಕುಮಾರ್ ಹೆಬ್ಬಾರ್ ಮತ್ತು ಸೀಮಾ ಪಿ. ಹೆಬ್ಬಾರ್ ದಂಪತಿ ಪುತ್ರ ದೈವಿಕ್ ಹೆಬ್ಬಾರ್ 91.8, ಕಲ್ಲಿಮಾರ್‌ನ ಸುಧಾಕರ ಕೆ.ಪಿ ಮತ್ತು ರೇಶ್ಮಾ ಎಸ್ ನಾಯ್ಕ್ ಪುತ್ರ ಶ್ರೀಶಾಮ್ ಎಸ್ ನಾಯ್ಕ್ 91, ಬನ್ನೂರಿನ ಚಂದ್ರಶೇಖರ, ಹರ್ಷಲತಾ. ಕೆ.ಪಿ ದಂಪತಿ ಪುತ್ರ ಶ್ಲೇಶ್ ಅಲೆಕ್ಕಾಡಿ ಚಂದ್ರಶೇಖರ 90.8, ಮೊಟ್ಟೆತ್ತಡ್ಕದ ಈರದಾಸಪ್ಪ ಇ ಹಾಗೂ ಆರ್.ಕರಿಯಮ್ಮ ದಂಪತಿ ಪುತ್ರಿ ಚಂದನ ಇ 90.4, ವಿಟ್ಲದ ಗಿರೀಶ್ ಭಟ್ ಮತ್ತು ಸೌಮ್ಯ ಸಾವಿತ್ರಿ.ಎಸ್ ದಂಪತಿ ಪುತ್ರ ಆತ್ರೇಯ ಭಟ್ ಎ.ಜಿ 90, ಸುಬ್ಬಣ್ಣ ಬಿ. ಮತ್ತು ಪ್ರೇಮಲತಾ ಎಸ್ ದಂಪತಿ ಪುತ್ರ ಸ್ವಸ್ತಿಕ್ ಎಸ್. ನಾಯ್ಕ್ 86.2 ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಹಾಗೂ ಪ್ರಾಂಶುಪಾಲೆ ಮಾಲತಿ ಡಿ ಅಭಿನಂದನೆ ಸಲ್ಲಿಸಿದ್ದಾರೆ.
ತಾಲೂಕಿನ ಮೊದಲ ಎಂಟು ರಾಂಕ್‌ಗಳು ಅಂಬಿಕಾಕ್ಕೆ
ಈ ಬಾರಿಯ ಸಿಬಿಎಸ್‌ಇ ಫಲಿತಾಂಶದಲ್ಲಿ ತಾಲೂಕಿನ ಮೊದಲ ರ‍್ಯಾಂಕ್‌ನಿAದ ತೊಡಗಿ ೮ನೆಯ ರ‍್ಯಾಂಕ್‌ವರೆಗೆ ಎಲ್ಲಾ ರ‍್ಯಾಂಕ್‌ಗಳೂ ಅಂಬಿಕಾ ವಿದ್ಯಾಲಯಕ್ಕೆ ದೊರಕಿರುವುದು ವಿದ್ಯಾರ್ಥಿಗಳ ಸಾಧನೆಗೆ ಹಿಡಿದ ಕೈಗನ್ನಡಿ. ಅಂಬಿಕಾದ ಶಿಕ್ಷಣದ ಗುಣಮಟ್ಟಕ್ಕೆ ಈ ಫಲಿತಾಂಶ ಕೈಗನ್ನಡಿಯೆನಿಸಿದೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್20 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ




















