Connect with us

ಸ್ಥಳೀಯ

Bus falls-ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಡ್ಡ ಏರಿದ ಬಸ್ಸು – ಅಪಘಾತದಲ್ಲಿ 17 ಜನರಿಗೆ ಗಾಯ

Published

on



Ad Widget

Ad Widget

Ad Widget

Ad Widget

ಮಿನಿ ಬಸ್‌ ವೊಂದು ಚಾಲಕನ ಹತೋಟಿ ಕಳಕೊಂಡು ಹೆದ್ದಾರಿಯ ಬದಿಯ ಗುಡ್ಡ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಕಾಪು ಚಡಾವು ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಡ್ಡ ಏರಿದ ಬಸ್ಸು – ಅಪಘಾತದಲ್ಲಿ 17 ಮಂದಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಮಂಗಳೂರು ಕಡೆ ಬಸ್ಸು ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೆಂಗಳೂರು ಮೂಲದ ವೆಂಕಟ ಸ್ವಾಮಪ್ಪ (45) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಗೊಂಡಿರುವ ಕೀರ್ತನಾ (15), ತನಿಷ್ಕಾ (7), ಯಶವಂತ (21), ರೂಪಾ (37), ಹಂಸಾ (39), ತನುಶ್ರೀ (21), ವಿಕಾಸ್(13), ಅಖಿಲಾ (23), ರತ್ನಮ್ಮ (47), ಬಾಲಕೃಷ್ಣ (33), ಯಲ್ಲಮ್ಮ (62), ರೂಪಾ (33), ಪ್ರೀತಮ್ (11) ಯಲ್ಲಮ್ಮ, ಪಾವನಾ, ಮಂಜುಳಾ, ಬಿಂದುಶ್ರೀ, ಮಿಥುನ್ ರವರು ಚಿಕಿತ್ಸೆ ಪಡೆದಿದ್ದಾರೆ.

Ad Widget

Ad Widget <> Ad Widget

ಸ್ಥಳೀಯರಾದ ಸಚಿನ್ ಭಿಡೆ ಹಾಗೂ ಜಗದೀಶ ನಾಯ್ಕ ಅಪಘಾತವಾದ ತಕ್ಷಣ ಸ್ಥಳಕ್ಕೆ ಧಾವಿಸಿ ಇತರ ವಾಹನ ಚಾಲಕರ ಸಹಕಾರದಿಂದ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.



Ad Widget

ಖಾಸಗಿ ವಿದ್ಯುತ್ ಲೈನ್‌ನ ಕಂಬ ಬಸ್ ಗುಡ್ಡ ಏರಿದ ಸ್ಥಳದಲ್ಲಿದ್ದ ಕಾರಣ ಬಸ್‌ ಅದಕ್ಕೆ ಬಡಿದು ನಿಂತಿದೆ. ವಿದ್ಯುತ್‌ ಕಂಬ ಇರದಿದ್ದರೆ ಕೆಳಭಾಗದಲ್ಲಿ ಹರಿಯುವ ಮೃತ್ಯುಂಜಯ ನದಿಗೆ ಮಿನಿ ಬಸ್ ಬೀಳುವ ಸಾಧ್ಯತೆ ಇತ್ತು. ಇದೇ ಸ್ಥಳದಿಂದ ಸುಮಾರು 50 ಮೀ ಕೆಳಭಾಗದಲ್ಲಿ ಕಳೆದ ವರ್ಷ ರಿಕ್ಷಾವೊಂದು ನದಿಗೆ ಉರುಳಿದ್ದು ಮಹಿಳೆ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದರು. ಆ ನಂತರ ಇಲ್ಲಿ ಮಣ್ಣಿನ ದಿಬ್ಬ ನಿರ್ಮಿಸಲಾಗಿತ್ತು.

Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ ಪರಿಚಯಗೈದರು. 9ನೇ ತರಗತಿಯ ಕುವೀರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಡಾಟಾಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಸ್ವಾಗತಿಸಿ, ನಿಹಾರಿಕಾ ಅತಿಥಿಗಳನ್ನು ಪರಿಚಯಿಸಿದರು. ಆಶ್ಲೇಷ್ ವಂದನಾರ್ಪಣೆಗೈದರು. ಶ್ರೇಯಾ ಎಮ್. ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading