Connect with us

ಸ್ಥಳೀಯ

Prajwal Revanna-ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ವಿಡಿಯೋ ಮಾಡದಂತೆ ಪರಿಪರಿಯಾಗಿ ಬೇಡಿಕೊಂಡರೂ ಆತ ಬಿಡುವುದಿಲ್ಲ- ತಮ್ಮ ಮಕ್ಕಳನ್ನೇ ಎದುರಿಸಲಾಗದ ಸ್ಥಿತಿಯಲ್ಲಿ ಸಂತ್ರಸ್ತೆಯರು

Published

on



Ad Widget

Ad Widget

Ad Widget

Ad Widget

ಹಾಸನ: ಏ. 22 ರಂದು ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ನಡೆಯಿತೆನ್ನಲಾದ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಕ್ಲಿಪಿಂಗ್‌, ಚಿತ್ರಗಳು ಮತ್ತು ವಿಡಿಯೊ ಕರೆಗಳ ಸ್ಕ್ರೀನ್‌ ಶಾಟ್‌ಗಳು ಬಹಿರಂಗಗೊಂಡ ಬಳಿಕ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹಲವು ಮಹಿಳೆಯರು ಇನ್ನೂ ಆಘಾತದ ಸ್ಥಿತಿಯಲ್ಲೇ ಇದ್ದಾರೆ. ಈ ಘೋರ ಕೃತ್ಯ ಮಾನವೀಯತೆ ಮತ್ತು ಸಮಾಜದ ಅಡಿಪಾಯವನ್ನೇ ಅಲುಗಾಡಿಸಿದೆ.

Ad Widget

Ad Widget

Ad Widget

Ad Widget

ಪ್ರಜ್ವಲ್‌ ರೇವಣ್ಣ ಅವರಿಂದ ನಡೆಯಿತೆನ್ನಲಾದ ಲೈಂಗಿಕ ದೌರ್ಜನ್ಯದ ಪ್ರಕರಣಗಳ ಹಲವು ಸಂತ್ರಸ್ತೆಯರ ಮನೆಗಳು ಮುರಿದಿದ್ದು, ಅಸಂಖ್ಯಾತ ಮಹಿಳೆಯರು ಮತ್ತು ಅವರ ಮಕ್ಕಳ ಭವಿಷ್ಯ ಗಂಡಾಂತರಕ್ಕೆ ಸಿಲುಕಿದೆ. ಮನೆಯಿಂದ ಹೊರಬಂದು ತಲೆ ಎತ್ತಿ ಓಡಾಡುವ ಸ್ಥಿತಿಯಲ್ಲೂ ಸಂತ್ರಸ್ತೆಯರು ಇಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಅಲ್ಲದೆ ಇಡೀ ಹಾಸನದ ಸಾಮಾಜಿಕ ನೈತಿಕತೆಗೆ ಆಳವಾದ ಪೆಟ್ಟುಬಿದ್ದಿದ್ದು, ವಿಡಿಯೊಗಳಲ್ಲಿ ಮಹಿಳೆಯರ ಗುರುತನ್ನು ಮರೆಮಾಚಿಲ್ಲ. ಚಿಕ್ಕಪ್ರಾಯದ ಮತ್ತು ವಯಸ್ಸಾದ ಮಹಿಳೆಯರ ದೃಶ್ಯಗಳು ಹರಿದಾಡಿವೆ. ಇವರಲ್ಲಿ ಬಹುತೇಕರು ಹಾಸನದಲ್ಲಿ ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಪರಿಚಿತರು. ರಾಜಕೀಯ ಪಕ್ಷಗಳ ಕಾರ್ಯಕರ್ತೆಯರು, ಮನೆಗೆಲಸದವರು, ಅಧಿಕಾರಿಗಳು ಮತ್ತು ವೃತ್ತಿಪರರೂ ಇದ್ದಾರೆ. ಇವರ ಸ್ಥಿತಿಯಂತೂ ಹೇಳ ತೀರದಾಗಿದೆ.

Ad Widget

Ad Widget <> Ad Widget

ದೌರ್ಜನ್ಯಕ್ಕೆ ಒಳಗಾದ ಮಹಿಳೆಯೊಬ್ಬರು ನನ್ನ ಕುಟುಂಬದವರೇ ನನ್ನನ್ನು ಅಣಕಿಸುತ್ತಾರೆ. ತಿರಸ್ಕಾರದಿಂದ ನೋಡುತ್ತಿದ್ದಾರೆ’ ಎಂದು ತಮ್ಮ ಅಳಲು ತೋಡಿಕೊಂಡರು.



Ad Widget

ವ್ಯಕ್ತಿಗತ ನೆಲೆಯಲ್ಲಿ ಮಾನಹಾನಿ ಒಂದು ಕಡೆಯಾದರೆ, ಮತ್ತೊಂದು ಕಡೆ ಸಹೋದ್ಯೋಗಿಗಳೇ ‘ವೃತ್ತಿ ಸಾಮರ್ಥ್ಯ’ವನ್ನೂ ಪ್ರಶ್ನಿಸಲಾರಂಭಿಸಿದ್ದಾರೆ. ಅಷ್ಟೇ ಅಲ್ಲ; ವೃತ್ತಿಗೆ ಸಂಬಂಧಿಸಿದ ಸಂಘಟನೆಯ ಪದಾಧಿಕಾರಿ ಹುದ್ದೆಗೂ ರಾಜೀನಾಮೆ ನೀಡುವಂತೆ ಮಹಿಳಾ ಸಹೋದ್ಯೋಗಿಗಳೇ ಸಂದೇಶ ಕಳುಹಿಸಿದ್ದಾರೆ’ ಎಂದು ತಮಗೆ ಬಂದ ಸಂದೇಶವನ್ನು ತೋರಿಸಿ, ಸಿಟ್ಟು ಮತ್ತು ಅಸಹಾಯಕತೆಯಿಂದ ಅವುಡುಗಚ್ಚಿದ ಅವರು ಕೋಪದಿಂದ ಕಂಪಿಸಿದರು.

Ad Widget

Ad Widget

ಕುಟುಂಬದ ಸದಸ್ಯರು ಮತ್ತು ಬಂಧು– ಬಳಗದವರೂ ಈಗ ಮಾತನಾಡುವುದನ್ನು ನಿಲ್ಲಿಸಿದ್ದಾರೆ. ತಾಯಿ ಮತ್ತು ಸಹೋದರಿಯ ಮೂಲಕ ಎಚ್ಚರಿಕೆಯ ಹಾಗೂ ಕುಹಕದ ಮಾತುಗಳನ್ನು ಹೇಳಿಸುತ್ತಿದ್ದಾರೆ. ನನಗೆ ಮಾತ್ರವಲ್ಲ, ನನ್ನ ಮನೆಯವರಿಗೂ ಕಾರ್ಯಕ್ರಮಗಳಿಗೆ ಆಹ್ವಾನ ನೀಡುವುದನ್ನೂ ನಿಲ್ಲಿಸಿ ಬಿಟ್ಟಿದ್ದಾರೆ’ ಎಂದು ಸಂತ್ರಸ್ತೆ ನಿಡುಸುಯ್ದರು.

ಈ ಹಗರಣ ಹೊರಬಂದಾಗ ಆದ ಅವಮಾನ ಮತ್ತು ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಬಂದಿತ್ತು. ಆದರೆ, ಮಕ್ಕಳ ಮುಖ ನೋಡಿಕೊಂಡು ಆ ಮನಃಸ್ಥಿತಿಯಿಂದ ಹೊರಬಂದೆ. ಅಗ್ನಿಪರೀಕ್ಷೆಯ ಈ ಸಂದರ್ಭದಲ್ಲಿ ಕೆಲ ಹಿತೈಷಿಗಳು ನನ್ನ ಜತೆಗೆ ಗಟ್ಟಿಯಾಗಿ ನಿಂತರು’ ಎಂದು ಅವರು ಸ್ಮರಿಸಿಕೊಂಡರು.

ಒಪ್ಪಿಕೊಂಡೇ ಆತನ ಕೃತ್ಯಕ್ಕೆ ಸಹಕರಿಸಿದ್ದಾರೆ ಎಂಬ ಕಳಂಕವನ್ನೂ ದೌರ್ಜನ್ಯಕ್ಕೆ ಒಳಗಾದವರಿಗೆ ಅಂಟಿಸಲಾಗಿದೆ. ಕಳಂಕ ತೊಡೆದುಕೊಂಡು ಮುಖ್ಯವಾಹಿನಿಗೆ ಬರುವುದಕ್ಕೆ ಸಹಾಯ ಹಸ್ತವನ್ನು ಚಾಚುವವರೂ ಇಲ್ಲ’ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮಮತಾ ಶಿವು.

ಕೆಲವೇ ಸೆಕೆಂಡುಗಳ ವಿಡಿಯೊ ದೃಶ್ಯವನ್ನು ನೋಡಿ ಒಪ್ಪಿದ ಕ್ರಿಯೆ ಎಂದು ಹೇಗೆ ತೀರ್ಮಾನಕ್ಕೆ ಬರಲು ಸಾಧ್ಯ? ಕೆಲವು ವಿಡಿಯೊಗಳಲ್ಲಿ ದೃಶ್ಯವನ್ನು ಚಿತ್ರೀಕರಿಸದಂತೆ ಪರಿಪರಿಯಾಗಿ ಬೇಡಿಕೊಳ್ಳುವ ದೃಶ್ಯಗಳೂ ಇವೆ. ಆದರೂ ಆತ ಬಿಡುವುದಿಲ್ಲ. ದೃಶ್ಯವನ್ನು ನಂತರ ಡಿಲಿಟ್‌ ಮಾಡುವುದಾಗಿ ಆತ ಹೇಳುತ್ತಾನೆ’ ಎಂದು ಮಮತಾ ವಿವರಿಸುತ್ತಾರೆ.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ತಮ್ಮ ಪತಿ ಮತ್ತು ಮನೆಯ ಇತರರ ಸದಸ್ಯರಿಗಿಂತ ತಮ್ಮ ಮಕ್ಕಳಿಗೆ ವಿವರಿಸುವುದು ಕಷ್ಟವಾಗಿದೆ. ಯಾವ ಕಾರಣಕ್ಕೆ ದೌರ್ಜನ್ಯಕ್ಕೆ ಒಳಗಾಗಿದ್ದು ಮತ್ತು ಸನ್ನಿವೇಶ ಎಂತಹದ್ದು ಎಂಬುದನ್ನು ಹೇಳುವುದು ಕಷ್ಟ. ಅಷ್ಟು ಮಾತ್ರವಲ್ಲ, ಪರಿಣಾಮಗಳನ್ನೂ ಎದುರಿಸಬೇಕಾಗಿದೆ. ಕೆಲವು ಮಹಿಳೆಯರು ತಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದೂರು ನೀಡಲು ಮುಂದೆ ಬರುತ್ತಿಲ್ಲ. ಇಡೀ ಜಗತ್ತನ್ನಾದರೂ ಎದುರಿಸಬಹುದು. ಆದರೆ, ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯಾಗಿ ತಮ್ಮ ಮಕ್ಕಳನ್ನು ಎದುರಿಸಲು ಅವರು ತಯಾರಿಲ್ಲ’ ಎಂದು ಲೇಖಕಿ ರೂಪಾ ಹಾಸನ ಹೇಳುತ್ತಾರೆ.

ಇದೊಂದು ಅತ್ಯಂತ ಸಂಕೀರ್ಣ ಸನ್ನಿವೇಶ. ಸಂತ್ರಸ್ತೆಯರಿಗೆ ಮಾನಸಿಕ ಶಾಂತಿ ಮತ್ತು ದೈಹಿಕ ಸುರಕ್ಷತೆ ಸಿಗಲಿ ಎಂಬುದನ್ನು ಹಾರೈಸುತ್ತೇವೆ. ಧೈರ್ಯದಿಂದ ಸತ್ಯವನ್ನು ಹೇಳುವ ಆತ್ಮವಿಶ್ವಾಸ ಅವರಲ್ಲಿ ಬರಲಿ. ಆರೋಪಿಗಳ ಬಂಧನವಾಗಿ, ಶಿಕ್ಷೆಯಾದರೆ ಸಂತ್ರಸ್ತೆಯರಲ್ಲಿ ಆತ್ಮವಿಶ್ವಾಸ ಮೂಡಲು ಸಾಧ್ಯ’ ಎಂದು ಅವರು ಅಭಿಪ್ರಾಯಪಡುತ್ತಾರೆ.

ಮುರಿದುಬಿದ್ದ ನಿಶ್ಚಿತಾರ್ಥ
ದೌರ್ಜನ್ಯಕ್ಕೆ ಒಳಗಾದ ಮೂವರು ವಿದ್ಯಾರ್ಥಿನಿಯರು ತಮ್ಮ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಕೆಲವು ನಿಶ್ಚಿತಾರ್ಥಗಳು ಮುರಿದುಹೋಗಿವೆ.

Ad Widget
Click to comment

Leave a Reply

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading