Connect with us

ಶಿಕ್ಷಣ

Ambika Degree College-ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಸ್ಕಿಲ್ ಎಡ್ಜ್ ಕಾರ್ಯಾಗಾರಕ್ಕೆ ಚಾಲನೆ; ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು : ಡಾ.ಶ್ರೀಶ ಭಟ್

Published

on



Ad Widget

Ad Widget

Ad Widget

Ad Widget

ಪುತ್ತೂರು: ಕಲೆ, ವಾಣಿಜ್ಯ, ವಿಜ್ಞಾನ ಹೀಗೆ ಎಲ್ಲಾ ಕೋರ್ಸ್‌ ಗಳಿಗೂ ಅತ್ಯುತ್ತಮ ಉದ್ಯೋಗಾವಕಾಶಗಳಿವೆ. ಆದರೆ ಆ ಅವಕಾಶಗಳು ಎಲ್ಲಿವೆ ಮತ್ತು ಹೇಗಿವೆ ಎಂಬುದನ್ನು ವಿದ್ಯಾರ್ಥಿಗಳು ಸಾಕಷ್ಟು ಪೂರ್ವದಲ್ಲಿಯೇ ತಿಳಿದುಕೊಳ್ಳಬೇಕು ಮಾತ್ರವಲ್ಲದೆ ಆ ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ ನ ಸ್ಥಾಪಕ ಡಾ. ಶ್ರೀಶ ಭಟ್ ಹೇಳಿದರು.

Ad Widget

Ad Widget

Ad Widget

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಒಂದು ವಾರದ ಸ್ಕಿಲ್ ಎಡ್ಜ್ ಅನ್ನುವ ಕಾರ್ಯಾಗಾರವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಕಲಾ ವಿಷಯದಿಂದ ತೊಡಗಿ ವಿಜ್ಞಾನದವರೆಗೆ ಯಾವುದನ್ನು ಓದಿದವರಿಗೂ ಅರವತ್ತರಿಂದ ಎಪ್ಪತ್ತು ಸಾವಿರದಷ್ಟು ಸಂಪಾದನೆ ತರುವ ಉದ್ಯೋಗಗಳಿವೆ. ಆದರೆ ಆ ಉದ್ಯೋಗಗಳಿಗೆ ಹೇಗೆ ತಯಾರಾಗಬೇಕು ಎಂಬುದನ್ನು ಮೊದಲೇ ಅರಿತು ಸಿದ್ಧರಾಗಬೇಕು. ಕೌಶಲ್ಯವಿರದ ಯಾರೂ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಗಳಿಸುವುದಕ್ಕೆ ಸಾಧ್ಯವಿಲ್ಲ. ಆದರೆ ತೊಂಬತ್ತೆöÊದು ಶೇಕಡಾಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಅಂತಿಮ ವರ್ಷದ ಪದವಿ ಹಂತದಲ್ಲೂ ಸ್ಪಷ್ಟ ಗುರಿಯನ್ನೇ ನಿರ್ಧರಿಸಿರುವುದಿಲ್ಲ. ಹೀಗಾಗಿ ಔದ್ಯೋಗಿಕ ಜಗತ್ತಿಗೆ ಅಡಿಯಿಡುವಾಗ ಎಡವಿ ಬೀಳುತ್ತಿದ್ದಾರೆ ಎಂದರು.

Ad Widget

Ad Widget <> Ad Widget

ಆಧುನಿಕ ದಿನಗಳಲ್ಲಿ ಉದ್ಯೋಗ ಪಡೆಯುವುದಕ್ಕೆ ಸಾಕಷ್ಟು ಹಂತಗಳನ್ನು ದಾಟಬೇಕಾಗುತ್ತದೆ. ಅಂಕಗಳ ಮಾನದಂಡದಿAದ ತೊಡಗಿ ಬೌದ್ಧಿಕ ಸಾಮರ್ಥ್ಯದವರೆಗೆ ನಾನಾ ಬಗೆಯ ಪರೀಕ್ಷೆಗಳನ್ನು, ಸಂದರ್ಶನಗಳನ್ನು ಎದುರಿಸಿ ಯಶಸ್ಸು ಗಳಿಸಬೇಕಾಗುತ್ತದೆ. ಈ ನಡುವೆ ಸಾಕಷ್ಟು ಸ್ಪರ್ಧೆಯೂ ಇದೆ. ದೇಶದಲ್ಲಿ ಸರಿ ಸುಮಾರು 18 ಲಕ್ಷ ಜನ ವಿದ್ಯಾರ್ಥಿಗಳು ಪ್ರತಿ ವರ್ಷ ಇಂಜಿನಿಯರಿಂಗ್ ಕಾಲೇಜುಗಳಿಂದ ಹೊರಬಂದರೆ ಐದರಿಂದ ಆರು ಲಕ್ಷ ಜನ ಮಾತ್ರ ಉದ್ಯೋಗ ಪಡೆಯುತ್ತಿದ್ದಾರೆ. ಇನ್ನು ಪದವಿ ಕಾಲೇಜುಗಳಿಂದ ಹೊರಬರುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಿಂತ ಐದಾರು ಪಟ್ಟು ಜಾಸ್ತಿ ಇದೆ. ಇಷ್ಟೊಂದು ಅಗಾಧ ಸಂಖ್ಯೆಯ ಮಧ್ಯೆ ನಾವು ಯಶಸ್ಸು ಗಳಿಸಬೇಕಾದರೆ ಸರಿಯಾದ ಸಿದ್ಧತೆ ಅಗತ್ಯ ಎಂದು ನುಡಿದರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ವಿವಿಧ ಕಾರ್ಯಾಗಾರಗಳಲ್ಲಿ ಭಾಗಿಯಾಗುವುದರಿಂದ ನಮ್ಮೊಳಗಿನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ಆಯಾ ಕ್ಷೇತ್ರದಲ್ಲಿ ತಜ್ಞರಾದವರೇ ಬಂದು ಒದಗಿಸಿಕೊಡುವ ಮಾಹಿತಿ ನಮ್ಮ ಮುಂದಿನ ಬದುಕಿಗೆ ದೀವಿಗೆಯೆನಿಸುತ್ತದೆ ಎಂದರು.

Ad Widget

Ad Widget

ವೇದಿಕೆಯಲ್ಲಿ ಅಂಬಿಕಾ ಮಹಾವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗಣೇಶ ಪ್ರಸಾದ್ ಎ, ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತೃಪ್ತಿ ಪ್ರಾರ್ಥಿಸಿ, ವಿದ್ಯಾರ್ಥಿನಿ ಮಾನ್ಯ ಸ್ವಾಗತಿಸಿದರು. ವಿದ್ಯಾರ್ಥಿನಿ ದೀಪ ವಂದಿಸಿ, ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಕಾರ್ಯಕ್ರಮ ನಿರ್ವಹಿಸಿದರು.

Ad Widget

ಶಿಕ್ಷಣ

Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಸಾನಿಧ್ಯ ಎಸ್. ರಾವ್‌ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್‌ಜಿಎಫ್‌ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.



Ad Widget

ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್‌ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.



Ad Widget

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

Ad Widget

Ad Widget

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್‌ಅಪ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.



Ad Widget

ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

Ad Widget

Ad Widget

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.

ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.

‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading