Uncategorized
ಯೋಗಿ ಸರ್ಕಾರದಿಂದ ಮುಂದುವರಿದ ರಾಜೀನಾಮೆ ಪರ್ವ -3 ದಿನದಲ್ಲಿ 11ಕ್ಕೆ ಏರಿಕೆ : ಪ್ರಭಾವಿ ಓಬಿಸಿ ನಾಯಕ ಮೌರ್ಯ ಬಿಜೆಪಿ ಸೇರುವ ಮೊದಲಿನ ಪ್ರಕರಣಕ್ಕೆ ಬಿಜೆಪಿ ತೊರೆದಾಗ ಅರೆಸ್ಟ್ ವಾರಂಟ್..!
ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಅಪ್ನಾ ದಳದ ಶಾಸಕ ಚೌಧರಿ ಅಮರ್ ಸಿಂಗ್ ಗುರುವಾರ ಸಂಜೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಗೆ ಬೆರಳೆಣಿಕೆಯ ವಾರಗಳಿರುವಾಗ ಸಿಎಂ ಯೋಗಿ ಆದಿತ್ಯನಾಥ್ ತಂಡದಿಂದ ಹೊರಬಿದ್ದ ಶಾಸಕರ ಸಂಖ್ಯೆ ಕೇವಲ 3 ದಿನಗಳಲ್ಲಿ 11ಕ್ಕೆ ಏರಿಕೆಯಾಗಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿರುವ ಅಖಿಲೇಶ್ ಯಾದವ್ ಇವರನ್ನೂ ಬುಟ್ಟಿಗೆ ಹಾಕಿಕೊಂಡು ಮತ್ತಷ್ಟು ಬಲಶಾಲಿಯಾಗಿದ್ದಾರೆ.ಮಂಗಳವಾರದ ಬಳಿಕ ಇಲ್ಲಿಯವರೆಗೆ ಮೂವರು ಸಚಿವರು ಸೇರಿ 10 ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಂಗಳವಾರ ಪ್ರಭಾವಿ ರಾಜಕಾರಣಿ ಎಸ್ಪಿ ಮೌರ್ಯ ರಾಜೀನಾಮೆಯೊಂದಿಗೆ ಈ ಪರ್ವ ಆರಂಭವಾಗಿತ್ತು. ಅಂದೇ ಅವರ ಬೆನ್ನಿಗೆ ಭಗ್ವತಿ ಸಾಗರ್, ರೌಶಾನ್ ಲಾಲ್ ವರ್ಮಾ ಮತ್ತು ಬ್ರಿಜೇಶ್ ಪ್ರಜಾಪತಿ ಶಾಸಕ ಸ್ಥಾನ ತೊರೆದಿದ್ದರು. ಈ ಮೂಲಕ ರಾಜೀನಾಮೆ ಪರ್ವಕ್ಕೆ ವೇಗ ನೀಡಿದ್ದರು. ಅಲ್ಲಿಂದ ಆರಂಭವಾದ ಈ ವಲಸೆ ಸರಣಿ ಗುರುವಾರ ರಾತ್ರಿಯಾದರೂ ನಿಲ್ಲುವಂತೆ ಕಾಣಿಸುತ್ತಿಲ್ಲ.
ನಿನ್ನೆ ಅಂದರೆ ಬುಧವಾರ ಇನ್ನೋರ್ವ ಸಹಾಯಕ ಸಚಿವ ದಾರಾ ಸಿಂಗ್ ಚೌಹಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇವರ ಬೆನ್ನಿಗೆ ಅವತಾರ್ ಸಿಂಗ್ ಭಂದನ ಕೂಡ ರಾಜೀನಾಮೆ ನೀಡಿದ್ದರು. ಭಂದನ ಅವರು ಅಖಿಲೇಶ್ ಯಾದವ್ ಪಕ್ಷದ ಮಿತ್ರ ಪಕ್ಷ ಆರ್ಎಲ್ಡಿಯತ್ತ ಮುಖ ಮಾಡಿದ್ದಾರೆ.ಇಂದು ಇನ್ನೋರ್ವ ಉತ್ತರ ಪ್ರದೇಶ ಸಚಿವ ಧರಂ ಸಿಂಗ್ ಸೈನಿ ಯೋಗಿ ಆದಿತ್ಯನಾಥ್ಗೆ ತಮ್ಮ ರಾಜೀನಾಮೆ ಪತ್ರ ಕಳುಹಿಸಿದ್ದರು.
ಅವರ ಜತೆಗೆ ಶಾಸಕರಾದ ವಿನಯ್ ಶಾಕ್ಯ, ಮುಕೇಶ್ ವರ್ಮಾ ಮತ್ತು ಬಾಲ ಅವಸ್ಥಿಯೂ ಪಕ್ಷ ತೊರೆದಿದ್ದಾರೆ. ಇದೀಗ ಚೌಧರಿ ಅಮರ್ ಸಿಂಗ್ ರಾಜೀನಾಮೆಯೊಂದಿಗೆ ಗುರುವಾರ ಒಂದೇ ದಿನ ಐದು ಶಾಸಕರು ಯೋಗಿ ತಂಡ ತೊರೆದಂತಾಗಿದೆ.
ಬಿಜೆಪಿ ಸೇರುವ ಮೊದಲಿನ ಪ್ರಕರಣಕ್ಕೆ ಬಿಜೆಪಿ ತೊರೆದಾಗ ಜಾಮೀನು ರಹಿತ ಪ್ರಕರಣ ದಾಖಲು: ಯೋಗಿ ಆದಿತ್ಯನಾಥ್ ( Yogi Adityanath ) ಸರ್ಕಾರದಲ್ಲಿ ಕಾರ್ಮಿಕ, ಉದ್ಯೋಗ, ಸಮನ್ವಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ವಿರುದ್ಧ ಅರೆಸ್ಟ್ ವಾರಂಟ್ (Arrest Warrant)ಜಾರಿಯಾಗಿದೆ.
2014ರಲ್ಲಿ ದ್ವೇಷಭಾಷಣ (hate speech) ನಡೆಸಿದ್ದ ಕುರಿತಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದಾಗಿ ಎಂಟು ವರ್ಷದ ಬಳಿಕ ಅವರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ವಿಶೇಷವೆಂದರೆ, ಬಿಜೆಪಿ (BJP) ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷವನ್ನು ಸೇರುವ ಹಾದಿಯಲ್ಲಿರುವ ಅವರ ವಿರುದ್ಧ ಈ ವಾರಂಟ್ ಬಂದಿದೆ. ಸುಲ್ತಾನ್ ಪುರದಲ್ಲಿ (Sulthanpur) ಬಂಧನ ವಾರಂಟ್ ಜಾರಿಯಾಗಿದ್ದರೂ, ಅವರು ಈವರೆಗೂ ಹಾಜರಾಗದ ಕಾರಣ ಇನ್ನೂ ಬಂಧನವಾಗಿಲ್ಲ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೌರ್ಯ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ಹಾಜರಾಗಲಿಲ್ಲ.
ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಪ್ರಕರಣದಲ್ಲಿ ಜನವರಿ 24 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ. 2014ರಲ್ಲಿ ಅವರು ದ್ವೇಷಭಾಷಣ ನಡೆಸುವ ವೇಳೆ ಮಾಯವತಿ (Mayawati) ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ನಾಯಕರಾಗಿದ್ದರು.
“ಮದುವೆಯ ಸಂದರ್ಭದಲ್ಲಿ ಗೌರಿ ಅಥವಾ ಗಣೇಶನನ್ನು ಪೂಜಿಸಬಾರದು. ಇದು ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದಾರಿತಪ್ಪಿಸಲು ಮತ್ತು ಗುಲಾಮರನ್ನಾಗಿ ಮಾಡಲು ಮೇಲ್ಜಾತಿ ಮಾಡಿರುವ ಪಿತೂರಿಯಾಗಿದೆ” ಎಂದು ಸ್ವಾಮಿ ಪ್ರಸಾದ್ ಮೌರ್ಯ 2014ರಲ್ಲಿ ತಾವು ಭಾಗವಹಿಸಿದ್ದ ಸಭೆಯಲ್ಲಿ ಹೇಳಿದ್ದರು. 2016 ರಲ್ಲಿ ಅಲಹಾಬಾದ್ ಹೈಕೋರ್ಟ್ ಇವರ ವಿರುದ್ಧ ಹೊರಡಿಸಲಾಗಿದ್ದ ಅರೆಸ್ಟ್ ವಾರಂಟ್ ಗೆ ತಡೆ ನೀಡಿತ್ತು. ಅಂದಿನಿಂದ ಈ ಪ್ರಕರಣದಲ್ಲಿ ಸಾಕಷ್ಟು ಬಾರಿ ವಿಚಾರಣೆಗಳು ನಡೆದಿವೆ. ಜನವರಿ 6 ರಂದು ಸುಲ್ತಾನ್ ಪುರ ಕೋರ್ಟ್, ಜನವರಿ 12 ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಆದರೆ, ಅವರು ಹಾಜರಾಗದ ಹಿನ್ನಲೆಯಲ್ಲಿ ಅವರ ವಾರಂಟ್ ಅನ್ನು ಪರಿಷ್ಕರಣೆ ಮಾಡಲಾಗಿದೆ.
ಮೌರ್ಯ ಅವರು ಎರಡು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರನ್ನು ಭೇಟಿಯಾಗಿ ಯೋಗಿ ಆದಿತ್ಯನಾಥ್ ಅವರ ಕಾರ್ಯಶೈಲಿಯ ಬಗ್ಗೆ ದೂರು ನೀಡಿದ್ದರು ಎಂದು ವರದಿಯಾಗಿದೆ. ಆದರೆ, ಹೈಕಮಾಂಡ್ ನಿಂದ ಯಾವುದೇ ರೀತಿಯ ಸೂಚನೆಗಳನ್ನು ಯೋಗಿ ಆದಿತ್ಯನಾಥ್ ಅವರಿಗೆ ನೀಡಲಾಗಿರಲಿಲ್ಲ ಎನ್ನುವುದು ತಿಳಿದುಬಂದಿದೆ.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
ಕ್ರೈಂ17 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ17 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು16 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ15 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ11 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್17 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ11 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ15 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















