ಬಿಗ್ ನ್ಯೂಸ್
Ullala ISIS Terrorist Activity | ‘ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ’ – ಎನ್ಐಎ ಬಂಧನದಲ್ಲಿರುವ ಉಳ್ಳಾಲದ ಮಾಜಿ ಶಾಸಕ ದಿ.ಇದ್ದಿನಬ್ಬ ಮೊಮ್ಮಗನ ಐಸಿಸ್ ನಂಟು ಕೇಸ್ ನಲ್ಲಿ ಮಹತ್ವದ ಬೆಳವಣಿಗೆ – ದೆಹಲಿ ಹೈಕೋರ್ಟ್ ಜಾಮೀನು – ಆರೋಪ ಸಾಬೀತು ಮಾಡುವಲ್ಲಿ ಎನ್ಐಎ ಗೆ ತೀವ್ರ ಹಿನ್ನಡೆ – ಹೈಕೋರ್ಟ್ ಹೇಳಿದ್ದೇನೂ..? : ಇದಿನಬ್ಬ ಸೊಸೆ ದೀಪ್ತಿ ಮಾರ್ಲಗೆ ಮುಂದುವರಿದ ಶಿಕ್ಷೆ ..!
ನವದೆಹಲಿ : ‘ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ’ ಎಂದು ಎನ್ಐಎ ಬಂಧನದಲ್ಲಿರುವ ದಕ್ಷಿಣ ಕನ್ನಡದ ಉಳ್ಳಾಲದ ಮಾಜಿ ಶಾಸಕ ದಿ.ಇದ್ದಿನಬ್ಬ ಮೊಮ್ಮಗನ (Ullala ISIS Terrorist Activity) ಐಸಿಸ್ ನಂಟು ಕೇಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ದಿ.ಇದ್ದಿನಬ್ಬ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಯುಎಪಿಎ ಕಾಯ್ದೆಯಡಿ ಬಂಧಿಸಿದ್ದ ರಾಷ್ಟ್ರೀಯ ತನಿಖಾ ದಳ 2021ರ ಆಗಸ್ಟ್ 21ರಂದು ಐಸಿಸ್ ನಂಟಿನ ಆರೋಪದಡಿ ದಿ.ಇದ್ದಿನಬ್ಬ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಬಂಧಿಸಿತ್ತು.
ಆದರೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೈದಿಯಾಗಿರುವ ಅಮ್ಮರ್ ಅಬ್ದುಲ್ ರೆಹಮಾನ್ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ.ವಿಚಾರಣಾಧೀನ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ. ಸದ್ಯ ಸುಧೀರ್ಘ ವಿಚಾರಣೆ ಬಳಿಕ ದೆಹಲಿ ಹೈ ಕೋರ್ಟ್ ಅಮ್ಮರ್ ಅಬ್ದುಲ್ ರೆಹಮಾನ್ ಜಾಮೀನು ಆದೇಶದಲ್ಲಿ ಹಲವು ಅಂಶ ಉಲ್ಲೇಖಿಸಿ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನ ಉಗ್ರ ನಂಟು ಎನ್ನಲು ಆಗಲ್ಲ , ಐಸಿಸ್ ಪರ ವಿಡಿಯೋ ಡೌನ್ ಲೋಡ್, ಭಾಷಣ ಆಲಿಸೋದು ಯುಎಪಿಎ ಕಾಯ್ದೆಯಡಿ ತರಲು ಆಗಲ್ಲ ಎಂದ ಹೈಕೋರ್ಟ್ ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39 ರಡಿ ತರಲು ಬರಲ್ಲ ಎಂದಿದೆ.
ಆರೋಪಿ ಮೊಬೈಲ್ ನಲ್ಲಿ ಲಾಡೆನ್, ಐಸಿಸ್ ಬಾವುಟಗಳು, ಐಸಿಸ್ ಪರ ಭಾಷಣಗಳ ತುಣುಕು ಸಿಕ್ಕಿದೆ. ಆದರೆ ಇದೆಲ್ಲದರ ಮೂಲಕ ಆತನಿಗೆ ಐಸಿಸ್ ನಂಟಿದೆ ಎನ್ನಲು ಆಗಲ್ಲ. ಇವುಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು ಎಂದು ಹೈಕೋರ್ಟ್ ಹೇಳಿದೆ.
ಹಾಗಾಗಿ ಇದನ್ನು ಇಟ್ಟುಕೊಂಡು ಐಸಿಸ್ ನಂಟನ್ನು ಸಾಬೀತು ಪಡಿಸಲು ಆಗಲ್ಲ. ಐಸಿಸ್ ನಂಟಿನ ಆರೋಪ ಕೇಸ್ ನಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ಇದಾಗಿದೆ. ಈ ಮೂಲಕ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಎನ್ಐಎ ಗೆ ಬಾರಿ ಹಿನ್ನಡೆಯಾಗಿದೆ.
ಈಗಾಗಲೇ ಪ್ರಕರಣ ಸಂಬಂಧ ಹಲವು ಜನರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿರು ಎನ್ ಐಎ, ಅಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ದಿ.ಇದಿನಬ್ಬ ಸೊಸೆ ದೀಪ್ತಿ ಮಾರ್ಲಳನ್ನೂ ಬಂಧಿಸಿದೆ. ಉಳ್ಳಾಲದ ಮಾಜಿ ಶಾಸಕ ದಿ.ಇದಿನಬ್ಬ ಕುಟುಂಬದ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಜನವರಿ 4 ರಂದು ಉಳ್ಳಾಲದಲ್ಲಿ ಎನ್ ಐಎ ಬಂಧಿಸಿತ್ತು.
ಅಮ್ಮರ್ ಅಬ್ದುಲ್ ರೆಹಮಾನ್ ಬಂಧನದ ಬಳಿಕ ದೀಪ್ತಿ ಮಾರ್ಲಳ ಅರೆಸ್ಟ್ ಆಗಿತ್ತು. ದೀಪ್ತಿ ಮಾರ್ಲ, ಮಾಜಿ ಶಾಸಕ ಇದಿನಬ್ಬ ಮಗ ಬಿ.ಎಂ.ಭಾಷಾರ ಮಗ ಅನಾಸ್ ಅಬ್ದುಲ್ ಪತ್ನಿ. ಇದಿನಬ್ಬ ಮೊಮ್ಮಗ ಅನಾಸ್ ಅಬ್ದುಲ್ ರೆಹಮಾನ್ ಮದುವೆಯಾಗಿ ಇಸ್ಲಾಂಗೆ ಮತಾಂತರಗೊಂಡಿದ್ದ ದೀಪ್ತಿ ಮಾರ್ಲ, ಅಮ್ಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದ ಎಂದು ಎನ್ಐಎ ಆರೋಪ ಮಾಡಿತ್ತು.
ಐಸಿಸ್ ಇಸ್ಲಾಮಿಕ್ ಸ್ಟೇಟ್ ಐಡಿಯಾಳಜಿಗೆ ಪ್ರಭಾವಿತಳಾಗಿದ್ದಳು ಎಂದು ದೀಪ್ತಿ ಮಾರ್ಲ ಭಾಗಿಧಾರಿಕೆ ಬಗ್ಗೆ ಎನ್ ಐಎ ಚಾರ್ಚ್ ಶೀಟ್ ಸಲ್ಲಿಸಿತ್ತು. 2021ರ ಮಾರ್ಚ್ 5ರಂದು ದೆಹಲಿ ಎನ್ ಐಎ ಸ್ವಯಂಪ್ರೇರಿತ ಎಫ್ ಐಆರ್ ದಾಖಲಿಸಿತ್ತು.
ಇದೀಗ ಐಸಿಸ್ ನಂಟಿನ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆ ಅಮ್ಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಸಿಕ್ಕಿದೆ. ಇನ್ನೂ ಕೂಡ ಎನ್ ಐಎ ವಶದಲ್ಲೇ ದೀಪ್ತಿ ಮಾರ್ಲ ಇದ್ದಾಳೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್23 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್15 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ21 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು23 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized22 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್24 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ22 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















