ಉದ್ಯೋಗ
BMTC-ಪಿಯುಸಿ ಪಾಸಾದವರಿಗೆ ಬಿಎಂಟಿಸಿಯಲ್ಲಿ 2286 ಕಂಡಕ್ಟರ್ ಹುದ್ದೆ ನೇಮಕಾತಿ
ಪಿಯುಸಿ ಪಾಸ್ ಮಾಡಿ ಸರ್ಕಾರಿ ಹುದ್ದೆಗೆ ಸೇರಬೇಕು ಎನ್ನುವವರಿಗೆ ಹಾಗೂ ಪಿಯುಸಿ ಪಾಸಾಗಿಯೂ ನಿರುದ್ಯೋಗಿಗಳಾಗಿರುವವರಿಗೆ ಉದ್ಯೋಗಾವಕಾಶ ಇಲ್ಲಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಿಕ್ಕಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆಗಳು, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ನಿರ್ವಾಹಕ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವರ್ಗೀಕರಣ
ಮಿಕ್ಕಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆಗಳು.
ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ನಿರ್ವಾಹಕ ಹುದ್ದೆಗಳು.
ವರ್ಗಾವಾರು ಹುದ್ದೆಗಳ ವರ್ಗೀಕರಣ ಚೆಕ್ ಮಾಡಬೇಕಾದಲ್ಲಿ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಎರಡು ವೃಂದಕ್ಕೂ ಪ್ರತ್ಯೇಕ ಅಧಿಸೂಚನೆ ಚೆಕ್ ಮಾಡಿಕೊಳ್ಳಬಹುದು.
ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ವಿದ್ಯಾರ್ಹತೆ ಹಾಗೂ ಇತರೆ ಅರ್ಹತೆಗಳು
ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್. ಅಥವಾ 3 ವರ್ಷಗಳ ಡಿಪ್ಲೊಮ ಪಾಸ್.
ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿಯನ್ನು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳು ಮಾನ್ಯವಿಲ್ಲ. ಇವರು ಅರ್ಜಿ ಹಾಕಲು ಅರ್ಹರಲ್ಲ.
ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.
ಪುರುಷರ ಎತ್ತರ 160 CM, ಮಹಿಳೆಯರ ಎತ್ತರ 150 CM ಇರಬೇಕು.
ಅಪ್ಲಿಕೇಶನ್ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ 18-05-2024 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು ವರ್ಗಾವಾರು ಕೆಳಗಿನಂತೆ ಮೀರಿರಬಾರದು.
ಸಾಮಾನ್ಯ ವರ್ಗದವರಿಗೆ – 35 ವರ್ಷ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷ.
ಬಿಎಂಟಿಸಿ ನಿರ್ವಾಹಕ ತರಬೇತಿ ಅವಧಿ ಭತ್ಯೆ ಮತ್ತು ವೇತನ ಶ್ರೇಣಿ:
ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿಯಾಗಿ ನಿಯೋಜಿಸಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ ರೂ.9,100 ನೀಡಲಾಗುವುದು. ನಂತರ ಎರಡು ವರ್ಷ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ ಅಂತಹವರನ್ನು ಸದರಿ ಹುದ್ದೆಯ ಸೇವೆಯಲ್ಲಿ ಖಾಯಂಗೊಳಿಸಲಾಗುವುದು.
ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಏಪ್ರಿಲ್ 19 ರಂದು ಆನ್‌ಲೈನ್ ಲಿಂಕ್ ಆಕ್ಟಿವೇಟ್ ಮಾಡಲಾಗುತ್ತದೆ. ಅದನ್ನು ಬಳಸಿಕೊಂಡು, ಮೊದಲು ರಿಜಿಸ್ಟ್ರೇಷನ್ ಪಡೆದು, ನಂತರ ಅರ್ಜಿ ಸಲ್ಲಿಸಬಹುದು.
ಬಿಎಂಟಿಸಿ ನಿರ್ವಾಹಕ ಹುದ್ದೆಗಳಿಗೆ ವೇತನ ಶ್ರೇಣಿ : ರೂ.18660-25300.
ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಅವಧಿ
ಆನ್‌ಲೈನ್ ಮುಖಾಂತರ ಅಪ್ಲಿಕೇಶನ್ ಸ್ವೀಕಾರ ಪ್ರಾರಂಭಿಕ ದಿನಾಂಕ: 19-04-2024
ಆನ್‌ಲೈನ್ ಮುಖಾಂತರ ಅರ್ಜಿ ಸ್ವೀಕಾರ ಮಾಡುವ ಕೊನೆ ದಿನಾಂಕ: 18-05-2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 19-05-2024
ಅಪ್ಲಿಕೇಶನ್ ಶುಲ್ಕ ವಿವರ
ಸಾಮಾನ್ಯ ವರ್ಗದವರು ಹಾಗೂ ಇತರೆ ಹಿಂದುಳಿದ ಪ್ರವರ್ಗಗಳಿಗೆ ಅರ್ಜಿ ಶುಲ್ಕ ರೂ.750.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.
ಬಿಎಂಟಿಸಿ ನಿರ್ವಾಹಕರ ಪರೀಕ್ಷಾ ವಿಧಾನ
ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ 100 ಗಳಿಗೆ ನಡೆಸಿ, ನಂತರ ಇದರಲ್ಲಿನ ಶೇಕಡ.75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆಯ ಶೇಕಡ.25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ವಿವರ
INR 18660 to 25300 /Month
ಹುದ್ದೆಯ ಹೆಸರು:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಂಡಕ್ಟರ್
ವಿವರ:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಪ್ರಕಟಣೆ ದಿನಾಂಕ:2024-04-19
ಕೊನೆ ದಿನಾಂಕ:2024-05-18
ಉದ್ಯೋಗ ವಿಧ:ಪೂರ್ಣಾವಧಿ
ಉದ್ಯೋಗ ಕ್ಷೇತ್ರ:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸರ್ಕಾರಿ ಉದ್ಯೋಗ
ಕೌಶಲ ಮತ್ತು ಶೈಕ್ಷಣಿಕ ಅರ್ಹತೆ:
ವಿದ್ಯಾರ್ಹತೆ:ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ಕಾರ್ಯಾನುಭವ:0 Years
ನೇಮಕಾತಿ ಸಂಸ್ಥೆ
ಸಂಸ್ಥೆಯ ಹೆಸರು :ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೆಬ್‌ಸೈಟ್ ವಿಳಾಸ:https://mybmtc.karnataka.gov.in/english
ಉದ್ಯೋಗ ಸ್ಥಳ
ವಿಳಾಸ:ಬೆಂಗಳೂರು
ಸ್ಥಳ: ಬೆಂಗಳೂರು
ಪ್ರದೇಶ:ಕರ್ನಾಟಕ
ಅಂಚೆ ಸಂಖ್ಯೆ : 560001
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
ನಿಧನ ವಾರ್ತೆ22 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ22 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ22 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ21 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ16 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಸ್ಥಳೀಯ22 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ22 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ21 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















