Connect with us

ಶಿಕ್ಷಣ

Viveka Chetana-ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ-ವಿವೇಕ ಚೇತನ 2024; ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಆಳ್ವಾಸ್ ಕಾಲೇಜು

Published

on

Ad Widget

Ad Widget

Ad Widget

Ad Widget
ಪುತ್ತೂರು. ಮೇ,16: ಇಂದು ಇಡೀ ವಿಶ್ವದಲ್ಲಿಯೇ ಭಾರತ ಅದ್ಭುತ ಸ್ಥಾನಕ್ಕೆ ಏರುತಿದೆ. ಹೀಗಿರುವಾಗ ಮಾಧ್ಯಮಗಳಿಗೆ ದೇಶದಲ್ಲಿ ಕಂಡುಬರುವ ಎಲ್ಲಾ ಒಳ್ಳೆಯ ವಿಚಾರಗಳನ್ನು ಜಗತ್ತಿಗೆ ಪರಿಚಯಿಸಿ ರಾಷ್ಟ್ರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಇದೆ. ಪತ್ರಕರ್ತರು ಯಾರ ಪರವಾಗಿಯೂ ನಿಲ್ಲದೆ, ಸತ್ಯದ ಪರ ಹಾಗೂ ರಾಷ್ಟ್ರದ ಪರ ನಿಲ್ಲಬೇಕು. ಸಮಾಜದಲ್ಲಿ ಕಂಡುಬರುವ ಒಳ್ಳೆತನವನ್ನು ಗಮನಿಸಿ ಅವುಗಳನ್ನು ಗುರುತಿಸುವ ಜವಾಬ್ದಾರಿ ಪತ್ರಕರ್ತರಿಗಿದೆ. ಇದರ ಜೊತೆಗೆ ಯುವ ಜನರಿಗೆ ಅಧಮ್ಯವಾದ ತಿಳುವಳಿಕೆ, ಬುದ್ಧಿವಂತಿಕೆ ಇರುತ್ತದೆ. ಅದನ್ನು ರಾಷ್ಟ್ರದ ಅಭಿವೃದ್ಧಿಗೆ ಬಳಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿಯ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ ರಾಷ್ಟ್ರಮಟ್ಟದ ಫೆಸ್ಟ್ ‘ವಿವೇಕ ಚೇತನ್ 2024' ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಟ,ಹಿನ್ನೆಲೆ ಧ್ವನಿ ಕಲಾವಿದ, ಬಿಗ್ ಬಾಸ್ ಧ್ವನಿಯ ಖ್ಯಾತಿಯ ಬಡೆಕ್ಕಿಲ ಪ್ರದೀಪ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಕ್ಷೇತ್ರದಲ್ಲಿಯೂ ಹೊಸತನವನ್ನು ಹುಡುಕಿಕೊಂಡು ಹಾಗೂ ಮೈಗೂಡಿಸಿಕೊಂಡು ಬಾಳುವುದು ಬಹಳ ಮುಖ್ಯ ಹೊಸ ಅಲೆಯೊಂದಿಗೆ ಹಳೆಯ ವಿಚಾರಗಳನ್ನು ಜೋಡಿಸಿಕೊಂಡು ಅದಕ್ಕೆ ನಾವು ಹೇಗೆ ಹೊಂದಿಕೊಳ್ಳುತ್ತೇವೆ ಎನ್ನುವುದು ಮಹತ್ತರವಾದ ಸಂಗತಿ. ಬದುಕಿನಲ್ಲಿ ಕಹಿಯ ಸಂಗತಿಗಳು ಉಂಟಾದಾಗ ನಾವು ಕುಗ್ಗಿ ಹೋಗದೆ, ಅದನ್ನು ಧೈರ್ಯದಿಂದ ಎದುರಿಸಿ ಮುಂದುವರಿಯಬೇಕು ಎಂದರು.

Ad Widget

Ad Widget

Ad Widget

Ad Widget

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಶುಭಾಶಯದ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ ಎನ್, ಕಾಲೇಜಿನ ವಿಶೇಷ ಅಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್, ಪಿಜಿ ವಿಭಾಗದ ಡೀನ್ ಡಾ.ವಿಜಯ ಸರಸ್ವತಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ರೀಪ್ರಿಯಾ ಉಪಸ್ಥಿತರಿದ್ದರು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮವನ್ನು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಆರ್ ನಿಡ್ಪಳ್ಳಿ ಸ್ವಾಗತಿಸಿ, ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ್ಯಕ್ರಮದ ಸಂಯೋಜಕ ಶರತ್ ಕೆ.ಎನ್ ವಂದಿಸಿ, ಹರಿಪ್ರಸಾದ್ ಈಶ್ವರಮಂಗಲ ಹಾಗೂ ಚೈತ್ರಾ ಭಟ್ ನಿರ್ವಹಿಸಿದರು

Ad Widget

Ad Widget <> Ad Widget

ಸಮಾರೋಪ ಸಮಾರಂಭ:
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಆರ್‌ಜೆ ಕಾಜಲ್, ನಮ್ಮ ಬಾಳಿನಲ್ಲಿ ನೋವುಂಟು ಮಾಡುವವರು ಹಲವರಿದ್ದಾರೆ. ಆದರೆ ಅದಕ್ಕೆ ಧೃತಿಗೆಡದೆ ನಮ್ಮ ಬದುಕಿನಲ್ಲಿ ಬರುವ ಸವಾಲನ್ನು ಸ್ವೀಕರಿಸಿ ಮುಂದುವರೆಯಬೇಕು ಹಾಗೂ ಸೋಲಾಗಲಿ ಗೆಲುವಾಗಲಿ ಎಲ್ಲವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ ನಿಭಾಯಿಸಿಕೊಂಡು ಹೋಗಬೇಕು ಎಂದು ಅಭಿಪ್ರಾಯಪಟ್ಟರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯದರ್ಶಿ ಡಾ.ಕೃಷ್ಣ ಭಟ್ ಕೆ.ಎಂ ಮಾತನಾಡಿ, ಭಾರತ ವಿಶ್ವಗುರುವಾಗುತ್ತ ಹೆಜ್ಜೆ ಇಟ್ಟಿದೆ. ಈ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ. ಮಾಧ್ಯಮಕ್ಕೆ ಸಂಬಂಧಿಸಿದ ನೀತಿ ಸಂಹಿತೆಗಳನ್ನು ಚೆನ್ನಾಗಿ ಅರಿತುಕೊಂಡು ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿಡಬೇಕು ಎಂದರು.

Ad Widget

Ad Widget

ಸಮಾರೋಪ ಸಮಾರಂಭದಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಾಶ್ರೀ ಪಾಲ್ತಾಡಿ ಸ್ವಾಗತಿಸಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಸುತನ್ ಕೇವಳ ವಂದಿಸಿ, ಅಕ್ಷಯ್ ರೈ ಸಹಕರಿಸಿದರು. ವಿವೇಕ ಚೇತನ 2024 ಸ್ಪರ್ಧೆಯ ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು, ದ್ವಿತೀಯ ರನ್ನರ್ ಪ್ರಶಸ್ತಿಯನ್ನು ಎಸ್‌ಡಿಎಂ ಕಾಲೇಜು ಪಡೆದುಕೊಂಡಿತು. ಕಾರ‍್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ವಿನೂತನ ಪಾಕ್ಷಿಕ ಹಾಗೂ ವಿಕಸನ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವಿಶೇಷವಾಗಿ ಸುಮಾರು 2500ಕ್ಕೂ ಅಧಿಕ ಹೆರಿಗೆಯನ್ನು ಮಾಡಿಸಿದ ಸೂಲಗಿತ್ತಿ ವೆಂಕಮ್ಮ ಮತ್ತು ಸಮಾಜ ಸೇವಕ, ಶ್ವಾನಪ್ರಿಯ ರಾಜೇಶ್ ಬನ್ನೂರು ಅವರನ್ನು ಸನ್ಮಾನಿಸಲಾಯಿತು. ವಿಭಾಗದಲ್ಲಿ ಸಾಧನೆ ಮಾಡಿದ ಶರತ್ ಕೆ.ಎನ್, ದೀಪ್ತಿ ಅಡ್ಡಂತಡ್ಕ, ಜೀವನ್ ಕಲ್ಲೇಗ, ಲಾವಣ್ಯ ಇವರನ್ನು ಸನ್ಮಾನಿಸಲಾಯಿತು.

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!