ರಾಜಕೀಯ
ದಕ್ಷಿಣ ಕನ್ನಡದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತಭೇಟೆ – ಬೆಳ್ತಂಗಡಿಯ ಘಟನೆಗೆ ಖಂಡನೆ
ಮಂಗಳೂರು : ಶಿಕ್ಷಕರು ಸಮಾಜವನ್ನು ತಿದ್ದವವರು ಹಾಗೂ ಪದವೀದರರು ಪ್ರಜ್ಞಾವಂತರು. ಜನಸಾಮಾನ್ಯರು ಮಾಡುವ ತಪ್ಪುಗಳನ್ನು ಶಿಕ್ಷಕರು, ಪದವೀಧರರು ಮಾಡುವುದಿಲ್ಲ, ಮೈತ್ರಿಯ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸುತ್ತಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣೀಕ್ ಹೇಳಿದರು.
ಮಂಗಳೂರು ನಗರ ಉತ್ತರ ಬಿಜೆಪಿ ಕಾರ್ಯಾಲಯದಲ್ಲಿ ನೈರುತ್ಯ ಪದವೀಧರ ಮ್ತತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪರಿಷತ್ ಚುನಾವಣೆಯನ್ನು ನಾವೆಲ್ಲರೂ ಇದು ನಮ್ಮ ಚುನಾವಣೆ ಎಂದು ಸ್ವೀರಿಸಬೇಕು, ಗ್ರಾಮ, ವಾರ್ಡ್, ಬೂತ್ ಮಟ್ಟದಲ್ಲಿ ಚುರುಕಾಗಿ ಕಲಸ ಮಾಡಬೇಕು, ಪ್ರತಿ ಶಿಕ್ಷಕರು ಹಾಗೂ ಪದವೀಧರರನ್ನು ತಲುಪಿ ಅಭ್ಯರ್ಥಿಗಳ ಬಗ್ಗೆ ಮನವರಿಕೆ ಮಾಡಿ ಮತ ನೀಡುವಂತೆ ಮನವೊಲಿಸಬೇಕು ಎಂದು ಹೇಳಿದರು.
ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡುವ ಶಕ್ತಿ ಮಂಗಳೂರು ಜಿಲ್ಲೆಗಿದೆ, ಇವತ್ತಿನಿಂದ ಚುನಾವಣೆ ತನಕ ಮತದಾರರ ಸಂಪರ್ಕ ಮತ್ತು ಸಂಬಂಧವನ್ನು ಬೆಳೆಸಿ ಮತಗಳಾಗಿ ಪರಿವರ್ತಿಸಬೇಕು, ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಕಾರ್ಯಕರ್ತರು ಗೆಲುವಿಗೆ ಶ್ರಮಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ, ಇದೊಂದು ಪವಿತ್ರವಾದ ಚುನಾವಣೆ, ಸಂಘಟನೆಯನ್ನು ಮತ್ತಷ್ಟು ಬಲಗೊಳಿಸಿದ ಚುನಾವಣೆ, ಕಾಂಗ್ರೆಸ್ ನ ಜನ ವಿರೋಧಿ ನೀತಿಯನ್ನ ಖಂಡಿಸಲಿಕ್ಕೆ ಪರಿಷತ್ತು ಒಂದೊಳ್ಳೆಯ ವೇದಿಕೆ, ನಮ್ಮ ಪ್ರಾಬಲ್ಯವನ್ನು ಉಳಿಸಿಕೊಳ್ಳಬೇಕೆಂದರೆ ಗೆಲ್ಲಲೇಬೇಕಿದ್ದು, ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡು ಕಾರ್ಯಾನ್ಮುಖರಾಗಬೇಕಿದೆ ಎಂದರು. ಮಂಗಳೂರು ನಗರ ಉತ್ತರ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಮಾತನಾಡಿ, ಮಂಗಳೂರು ನಗರ ಉತ್ತರದಲ್ಲಿ ಒಟ್ಟು ಏಳು ಮಹಾಶಕ್ತಿ ಕೇಂದ್ರ, 69 ಶಕ್ತಿ ಕೇಂದ್ರಗಳಿವೆ, ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಕ್ಕೆ ಸಂಚಾಲಕರು, ಸಹ ಸಂಚಾಲಕರನ್ನು ನೇಮಕ ಮಾಡಿದ್ದು, ತಂಡವಾಗಿ ಮತದಾರರನ್ನು ತಲುಪಲು ಶ್ರಮಿಸುವಂತೆ ಕರೆ ನೀಡಿದರು.
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಚುನಾವಣೆಗೆ ಇನ್ನು ಕೇವಲ 12 ದಿನಗಳು ಮಾತ್ರ ಬಾಕಿ ಇವೆ, ಇದು ಕಾರ್ಯಕರ್ತರ ಚುನಾವಣೆ, ಹಾಗಾಗಿ ಯುದ್ಧೋಪಾದಿಯಲ್ಲಿ ಮುನ್ನುಗ್ಗಿದರೆ ಗೆಲುವು ಸುಲಭವಾಗಲಿದೆ, ತಾವೇ ಅಭ್ಯರ್ಥಿ ಎಂದು ತಿಳಿದು ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಶಿಕ್ಷಕರ ನೈರುತ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೇಗೌಡ ಮಾತನಾಡಿ, ಬಿಜೆಪಿ ಶಿಸ್ತು ಮತ್ತು ಸಂಘಟನೆಯಲ್ಲಿ ಇಡೀ ದೇಶದಲ್ಲೇ ಅತ್ಯಂತ ಬಲಿಷ್ಠವಾದುದು, ಪ್ರಧಾನಿ ನರೇಂದ್ರ ಮೋದಿ ಜೀ ಅವರು ಮತ್ತೊಮ್ಮೆ ಪ್ರಧಾನಿ ಆಗುವ ಕಾಲಸನ್ನಿಹಿತವಾಗಿದೆ, ಪಕ್ಷದ ಚಿಹ್ನೆ ಇಲ್ಲದೇ ನಡೆಯುವ ಈ ಚುನಾವಣೆಯಲ್ಲಿ ಮತದಾರರನ್ನು ಮತ ಹಾಕುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು.
ಮಂಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್ ಪುತ್ತೂರ್, ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪ್ರಶಾಂತ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ , ಮುಖಂಡರಾದ ಆರ್.ಸಿ. ನಾರಾಯಣ ಮತ್ತಿತರರು ಹಾಜರಿದ್ದರು.
ಬೆಳ್ತಂಗಡಿಯ ಘಟನೆಗೆ ಖಂಡನೆ : ಡಾ.ಧನಂಜಯ ಸರ್ಜಿ ಬೆಳ್ತಂಗಡಿಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನವನ್ನು ಖಂಡಿಸಿದರು. ಕಾಂಗ್ರೇಸ್ ಸರ್ಕಾರ ಅಕ್ರಮ ಬಂಧನ ನಡೆಸಿದೆ ಎಂದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
ಕ್ರೈಂ23 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ17 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ23 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ21 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ18 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್23 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ22 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















