Connect with us

Uncategorized

St. Philomena’s PU College ಸಂತ ಫಿಲೋಮಿನಾ ಪ.ಪೂ ಕಾಲೇಜು ಭೌತಶಾಸ್ತ್ರ ವಿಭಾಗದ ಪ್ರಯೋಗಾಲಯ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

St. Philomena’s PU College ಪುತ್ತೂರು : ಸಂತ ಫಿಲೋಮಿನಾ ಪದವಿ  ಪೂರ್ವ ಕಾಲೇಜು ಪುತ್ತೂರು ಇಲ್ಲಿನ ಭೌತಶಾಸ್ತ್ರ ವಿಭಾಗದ ಪ್ರಯೋಗಾಲಯ ಮತ್ತು ಕಾಲೇಜಿನ ಕಚೇರಿಯ ಉದ್ಘಾಟನೆಯು ಮೇ17 ರಂದು ನಡೆಯಿತು.

Ad Widget

Ad Widget

Ad Widget

Ad Widget

 ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿಗಳಾದ ರೆ.ಫಾ. ಆ್ಯಂಟನಿ ಮೈಕೇಲ್ ಶೇರ ಅವರು ಪವಿತ್ರ ಜಲವನ್ನು ಸಿಂಪಡಿಸುವ ಮೂಲಕ  ಆಶೀರ್ವಾಚನವನ್ನು ನೀಡಿ ಉದ್ಘಾಟನೆಯನ್ನು ನೆರವೇರಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ.ರೆ.ಫಾ.ಲಾರೆನ್ಸ್ ಮಸ್ಕರೇನಸ್, ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ  ರೆ.ಫಾ.ಸ್ಟ್ಯಾನಿ ಪಿಂಟೋ, ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾI ಆ್ಯಂಟನಿ ಪ್ರಕಾಶ್ ಮೊಂತೇರೊ , ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ’ ಕೋಸ್ಟಾ , ವಿದ್ಯಾರ್ಥಿ ವಸತಿ ನಿಲಯದ ಪಾಲಕರಾದ ಫಾ. ರೂಪೇಶ್ ತಾವ್ರೋ ಹಾಗೂ ಕಾಲೇಜಿನ ಬೋಧಕ ಬೋಧಕೇತರ  ವರ್ಗದವರು ಉಪಸ್ಥಿತರಿದ್ದರು.

Ad Widget

Ad Widget <> Ad Widget

 ಉಪನ್ಯಾಸಕಿ ಸುಮನಾ ರಾವ್ ಪ್ರಾರ್ಥಿಸಿ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ.ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕಿ ಸುಮ ಡಿ ಕಾರ್ಯಕ್ರಮ ನಿರೂಪಿಸಿದರು.



Ad Widget
Ad Widget

Uncategorized

Lawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್

Published

on



Ad Widget

Ad Widget

Ad Widget

Ad Widget

ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂದು ಹೇಳಿದರು.

Ad Widget

Ad Widget

Ad Widget

Ad Widget

ಬೆಂಗಳೂರು: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದ ಮರುತನಿಖೆ, ಸಂತೋಷ್ ರಾವ್ ಪಾತ್ರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂಬುದು ತಮ್ಮ ವಾದವಾಗಿದೆ ಎಂದು ಹೇಳಿದರು. ಸಿಬಿಐ ತನಿಖೆಯ ವೇಳೆ ಫೋರೆನ್ಸಿಕ್ ವರದಿಗಳಲ್ಲಿ ಸಂತೋಷ್ ರಾವ್ ಅವರ ದೇಹದಲ್ಲಿದ್ದ ಗಾಯಗಳ ಬಗ್ಗೆ ಉಲ್ಲೇಖವಾಗಿತ್ತು ಎಂದು ತಿಳಿಸಿದರು.



Ad Widget

ಸಿಬಿಐನ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಬಿ.ಆರ್. ಶಿವಾನಂದ ಅವರು ಪ್ರಕರಣದ ವಿಚಾರದಲ್ಲಿ ನಿರ್ದಿಷ್ಟ ಸಂಘಟನೆಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸ್ವತಂತ್ರವಾಗಿ ದೃಢೀಕರಿಸಿದ ಮಾಹಿತಿ ಲಭ್ಯವಿಲ್ಲ.

Ad Widget

Ad Widget

ಕ್ಷೇತ್ರದ ವಿರುದ್ಧ ಅಪಪ್ರಚಾರದ ಆರೋಪ
ಸೌಜನ್ಯಾ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಲವರು ಹಣ ಸಂಪಾದಿಸಿದ್ದಾರೆ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವ ಉದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಪ್ರಕರಣದ ಹಿಂದೆ ಎಡಪಂಥೀಯರು ಹಾಗೂ ನಗರ ನಕ್ಸಲರ ಕೈವಾಡವಿದೆ ಎಂಬ ಆರೋಪವನ್ನೂ ಅವರು ಮಾಡಿದರು.

ಬುರುಡೆ ಪ್ರಕರಣದ ಅಂತಿಮ ವರದಿ ಬಹಿರಂಗಪಡಿಸಲು ಆಗ್ರಹ
ಸೌಜನ್ಯಾ ಪ್ರಕರಣದಲ್ಲಿ ಹಿನ್ನಡೆಯಾದ ಬಳಿಕ ಕೆಲವು ಗುಂಪುಗಳು ಬುರುಡೆ ಪ್ರಕರಣವನ್ನು ಮುನ್ನೆಲೆಗೆ ತಂದವು ಎಂದು ಅಮೃತೇಶ್ ಹೇಳಿದರು. ಸರ್ಕಾರದ ವೆಚ್ಚದಲ್ಲಿ ನಡೆದಿದ್ದ ಅನಧಿಕೃತ ಶವಗಳ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದ ತನಿಖೆಯ ಅಂತಿಮ ವರದಿ ಇನ್ನೂ ಬಹಿರಂಗವಾಗಿಲ್ಲ ಎಂದು ಅವರು ಆಕ್ಷೇಪಿಸಿದರು.

ಚಿನ್ನಯ್ಯ ಆರೋಪಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗದಿರುವುದರ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.

ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವುದು ಕಷ್ಟ
ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಕೆಲವು ಗ್ಯಾಂಗ್ ಹಣ ಮಾಡುವ ಉದ್ದೇಶದಿಂದ ಕ್ಷೇತ್ರದ ವಿರುದ್ಧ ಕುತಂತ್ರ ನಡೆಸುತ್ತಿದೆ. ಕೆಲವು ವಿಷಯ ಮುಚ್ಚಿಟ್ಟು ಅವರು ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಸುಪ್ರಿಂಕೋರ್ಟ್ ಸಂಪೂರ್ಣವಾಗಿ ಹೊಸದಾಗಿ ತನಿಖೆ ಮಾಡಲು ಎಸ್‌ಐಟಿ ರಚನೆ ಮಾಡಲು ಸೂಚಿಸಿದೆ. ಆದರೆ ಮೂರು ತಿಂಗಳಲ್ಲಿ ಪ್ರಕರಣದ ತೀರ್ಪು ಬರಲು ಸಾಧ್ಯವಿಲ್ಲ. 14 ವರ್ಷದ ಸಾಕ್ಷ್ಯಾಧಾರಗಳು ಈಗ ಸಿಗಲು ಸಾಧ್ಯವಿಲ್ಲ. ಈ ಗ್ಯಾಂಗ್‌ನ ನಿಜವಾದ ಟಾರ್ಗೆಟ್ ಮಲ್ಲಿಕ್ ಜೈನ್, ಧೀರಜ್ ಜೈನ್, ಉದಯ್ ಜೈನ್ ಅಲ್ಲ. ಬದಲಾಗಿ ಕ್ಷೇತ್ರವೇ ಆಗಿದೆ ಎಂದು ಅಮೃತೇಶ್ ತಿಳಿಸಿದ್ದಾರೆ.

ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ವಕೀಲ
ಸೌಜನ್ಯಾ ಪ್ರಕರಣ ನಡೆದು 14 ವರ್ಷಗಳಾಗಿವೆ ಎಂದು ತಿಳಿಸಿದ ಅಮೃತೇಶ್, ಆರಂಭದಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಮೃತದೇಹ ಪತ್ತೆಯಾದ ನಂತರ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು ಎಂದು ವಿವರಿಸಿದರು.

ಘಟನೆಯ ಬಳಿಕ ಸೌಜನ್ಯಾ ಅವರ ಕುಟುಂಬದವರು ಬೆಳ್ತಂಗಡಿಯಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಧರ್ಮಸ್ಥಳದಿಂದ ಯಾವುದೇ ಒತ್ತಡ ಅಥವಾ ಬೆದರಿಕೆ ಇರಲಿಲ್ಲ ಎಂದು ಹೇಳಿದ್ದರೆಂದು ಅಮೃತೇಶ್ ಉಲ್ಲೇಖಿಸಿದರು. ಬಳಿಕ ಕೆಲವು ಗುಂಪುಗಳು ಧಾರ್ಮಿಕ ಗುರುಗಳು ಹಾಗೂ ಮಠಾಧೀಶರನ್ನು ಗುರಿಯಾಗಿಸಿಕೊಂಡು ಕ್ಷೇತ್ರದ ವಿರುದ್ಧ ಆರೋಪಗಳನ್ನು ಹರಡಿವೆ ಎಂದು ದೂರಿದರು.
ಸಂತೋಷ್ ರಾವ್ ಅವರನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ಸಾಕಷ್ಟು ಹಣ ಖರ್ಚು ಮಾಡಿರುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರೇ ಹೇಳಿದ್ದಾರೆ ಎಂದೂ ಅಮೃತೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಕೀಲ ಸದಾನಂದ ಗೌಡ ಉಪಸ್ಥಿತರಿದ್ದರು.

Ad Widget
Continue Reading

Uncategorized

Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು, ಬಂಧನದ ಭೀತಿ ಹುಟ್ಟಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ₹1.31 ಕೋಟಿ ವಂಚಿಸಿರುವ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿದ ವಂಚಕರು, ವಾಟ್ಸ್‌ಆ್ಯಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿದ್ದಾರೆ. ಬ್ಯಾಂಕ್ ಖಾತೆಗಳ ಪರಿಶೀಲನೆ ಮತ್ತು ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇದನ್ನು ನಂಬಿದ ದೂರುದಾರರು 2026ರ ಸೆ.2ರಿಂದ ಅ.6ರವರೆಗೆ ಹಂತ ಹಂತವಾಗಿ ಒಟ್ಟು ₹1,31,50,000 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.

Ad Widget

Ad Widget <> Ad Widget

ನಂತರ ಇದು ಸೈಬರ್ ವಂಚನೆ ಎಂಬುದನ್ನು ಅರಿತ ದೂರುದಾರರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ನಡೆಸಲಾಗುತ್ತಿದೆ.



Ad Widget

ಗಮನಿಸಿ: ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ ಬಂಧನದ ಬೆದರಿಕೆ ಒಡ್ಡಿ ಹಣ ವರ್ಗಾಯಿಸುವಂತೆ ಸೂಚಿಸುವುದು ಸೈಬರ್ ವಂಚನೆಯ ವಿಧಾನವಾಗಿದೆ. ಇಂತಹ ಕರೆಗಳನ್ನು ನಂಬದೆ, ತಕ್ಷಣವೇ 1930 ಸಹಾಯವಾಣಿಗೆ ದೂರು ನೀಡಬೇಕು.

Continue Reading

Uncategorized

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟಿçಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ನೀವು ವಿದ್ಯಾರ್ಥಿಯಾಗಿರಲಿ ಅಥವಾ ವೃತ್ತಿಪರರಾಗಿರಲಿ ಐಇಇಇ ಸದಸ್ಯತ್ವವು ನಿಮ್ಮನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಸಮುದಾಯಗಳೊಂದಿಗೆ ನೇರವಾಗಿ ಜೋಡಿಸುತ್ತದೆ ಎಂದು ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

Ad Widget

Ad Widget <> Ad Widget

ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಯಾವುದನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಈ ಸಮ್ಮೇಳನವೇ ಸಾಕ್ಷಿ, ನಿಗದಿತ ಸಮಯದಲ್ಲಿ ಪ್ರತಿಯೊಂದು ಕೆಲಸಗಳು ಸಂಪನ್ನಗೊಂಡವು ಇದರ ಹಿಂದೆ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ನುಡಿದರು.



Ad Widget

ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಐಇಇಇ ಬೆಂಗಳೂರು ವಿಭಾಗದ ತಾಂತ್ರಿಕ ಮತ್ತು ಸಮ್ಮೇಳನ ಪ್ರಾಯೋಜಕತ್ವ ಸಮಿತಿಯ ಸಹ ಅಧ್ಯಕ್ಷ ಡಾ.ವಾಸುದೇವ ಆಚಾರ್ಯ ಮಾತನಾಡಿ ಈ ಅಂತಾರಾಷ್ಟ್ರೀಯ ಸಮ್ಮೇಳನವು ಅತ್ಯಂತ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿದ್ದತೆಗಳು ಯಾವರೀತಿಯಲ್ಲಿ ನಡೆಯುತ್ತಿತ್ತು ಎನ್ನುವುದಕ್ಕೆ ಇದರ ಯಶಸ್ಸೇ ಸಾಕ್ಷಿ ಎಂದರು. ಕರ್ನಾಟಕದ ಎಲ್ಲಾ ಜಿಲ್ಲೆಗಳನ್ನು ಐಇಇಇಯ ವ್ಯಾಪ್ತಿಗೆ ತರುವ ಮಿಷನ್-31 ಎನ್ನುವ ಪರಿಕಲ್ಪನೆಗೆ ಎಲ್ಲರೂ ಕೈಜೋಡಿಸಿ ಇದರ ಯಶಸ್ಸಿನಲ್ಲಿ ಪಾಲುದಾರರಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ ಮಾತನಾಡಿ ಇಂಜಿನಿಯರಿಂಗ್ ಕಾಲೇಜಿನ ಇತಿಹಾಸದಲ್ಲಿ ಇದೊಂದು ಮುಖ್ಯ ಕಾರ್ಯಕ್ರಮವಾಗಿ ಗುರುತಿಸಲ್ಪಡುವಂತಾಯ್ತು ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಔನ್ನತ್ಯಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವುದಕ್ಕೆ ಉತ್ಸುಕವಾಗಿದೆ ಎಂದರು.

Ad Widget

Ad Widget

ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿಯರಲ್ಲೊಬ್ಬರಾದ ಡಾ.ರಜನಿ ರೈ.ಬಿ ಎರಡು ದಿನಗಳ ಕಾಲ ನಡೆದ ಈ ಸಮ್ಮೇಳನದ ವರದಿಯನ್ನು ವಾಚಿಸಿದರು. ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ರೇಶ್ಮಾ ಪೈ ಅತಿಥಿಗಳನ್ನು ಪರಿಚಯಿಸಿದರು.

ಒಟ್ಟು ಆರು ವಿಭಾಗಗಳಲ್ಲಿ ನಡೆದ ಪ್ರಬಂಧ ಮಂಡನೆಯಲ್ಲಿ ಪ್ರತಿ ವಿಭಾಗದಲ್ಲಿಯೂ ಉತ್ತಮವಾದ ಪ್ರಬಂಧಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜೋತಿಮಣಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಡಾ.ಜೀವಿತಾ.ಬಿ.ಕೆ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಶ್ರೀಶರಣ್ಯ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading