ಉಡುಪಿ
Raghupathi Bhatt-24 ಗಂಟೆಯೊಳಗೆ ಚುನಾವಣ ಕಣದಿಂದ ರಘುಪತಿ ಭಟ್ ಹಿಂದೆ ಸರಿಯದಿದ್ದರೆ ಶಿಸ್ತುಕ್ರಮ : ಸುನೀಲ್ ಕುಮಾರ್ ಎಚ್ಚರಿಕೆ
ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಮುಂದಿನ 24 ಗಂಟೆಯೊಳಗೆ ಕಣದಿಂದ ಹಿಂದೆ ಸರಿಯದಿದ್ದರೆ ಪಕ್ಷದ ಶಿಸ್ತು ಉಲ್ಲಂಘಿಸಿದ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಘುಪತಿ ಭಟ್ ಅವರ ಗೆಳೆಯನಾಗಿ ಅವರಲ್ಲಿ 24 ಗಂಟೆಯೊಳಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡುತ್ತೇನೆ. ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಇದ್ದರು ಕೂಡ ಅವರ ಮೇಲೆ ಪಕ್ಷ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತದೆ ಎಂದರು.
ಇವತ್ತು ಅಥವಾ ನಾಳೆ ರಘುಪತಿ ಭಟ್ ಸ್ಪರ್ಧೆಗೆ ನಿವೃತ್ತಿ ಘೋಷಿಸಬಹುದು ಎಂಬ ವಿಶ್ವಾಸವಿದೆ. ಈ ಬಗ್ಗೆ ಮಾತುಕತೆಯೂ ಮುಂದುವರಿದಿದೆ. ನಿವೃತ್ತಿ ಘೋಷಿಸದಿದ್ದರೆ, ರಘುಪತಿ ಭಟ್ ಅಲ್ಲ, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಕ್ರೈಂ13 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ13 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು12 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ11 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್13 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಸ್ಥಳೀಯ6 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ7 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ11 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















