ಉದ್ಯೋಗ
kptcl recruitment 2024 :902 ಹುದ್ದೆಗಳ ಭರ್ತಿಗೆ ಕೆಪಿಟಿಸಿಎಲ್ ನಿಂದ ನೇಮಕ ಆದೇಶ
ಬೆಂಗಳೂರು: 902 ಹುದ್ದೆಗಳ ಭರ್ತಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.
ಬುಧವಾರ ಮತ್ತು ಗುರುವಾರ 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ ಅಭ್ಯರ್ಥಿಗಳು ಇತರೆ ವೃಂದದವರು.
ಮೇ 24 , ಶುಕ್ರವಾರ 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.
“ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು”. – ಕೆ.ಜೆ ಜಾರ್ಜ್, ಇಂಧನ ಸಚಿವ
“902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರಿಸಲಿದೆ. ಆಯ್ಕೆ ಪ್ರಕ್ರಿಯೆಯನ್ನುಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಂತರ ರಾಜ್ಯ
Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್
ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.
ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.
ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
ಉದ್ಯೋಗ
Job opportunities-ಪುತ್ತೂರು-ಸುಳ್ಯದಲ್ಲಿ ಉದ್ಯೋಗಾವಕಾಶ; ಸೆ.13ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ
ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪುತ್ತೂರು: ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪ್ರತಿಷ್ಠಿತ NGO ಒಂದರ ‘ಪ್ರಾಜೆಕ್ಟ್ ಆಫೀಸರ್’ (Project Officer) ಹುದ್ದೆಗೆ MSW ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಸಂಸ್ಥೆಯ ‘ಕಚೇರಿ ಸಿಬ್ಬಂದಿ’ (Office Staff) ಹುದ್ದೆಗೆ ಅತ್ಯುತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಸಂದರ್ಶನದ ವಿವರ:
ದಿನಾಂಕ: 13 ಸೆಪ್ಟೆಂಬರ್ 2026, ಭಾನುವಾರ
ಸಮಯ: ಬೆಳಿಗ್ಗೆ 10:00 ಗಂಟೆಗೆ
ಸ್ಥಳ: ವಿದ್ಯಾಮಾತಾ ಅಕಾಡೆಮಿ, APMC ರಸ್ತೆ, ಪುತ್ತೂರು, ದ.ಕ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅಪ್‌ಡೇಟೆಡ್ ಬಯೋಡೇಟಾ (Resume) ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ (Photo) ನೇರ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
-
Uncategorized18 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ19 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ6 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ6 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ6 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ4 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















