ಚಿನ್ನ-ಬೆಳ್ಳಿ ದರ
Gold Rate Today-ಗೋಲ್ಡ್‌ಪ್ರಿಯರಿಗೆ ಸಿಹಿ ಸುದ್ದಿ; ಮತ್ತೆ ಇಳಿಕೆಯಾದ ಚಿನ್ನದ ದರ – ಇಲ್ಲಿದೆ ಇವತ್ತಿನ ರೇಟ್
ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯು ಪ್ರಮುಖ ವಿಚಾರವಾಗಿರುವುದರಿಂದ ಈ ಏರಿಳಿತ ಸಹಜವಾಗಿದೆ.ಒಮ್ಮೆ ಚಿನ್ನ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯೇ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಜನ ಸಾಮಾನ್ಯರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೀಗಿದೆ.
ಒಂದು ಗ್ರಾಂ ಚಿನ್ನ:
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,244
ಎಂಟು ಗ್ರಾಂ ಚಿನ್ನ :
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,120
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,952
ಹತ್ತು ಗ್ರಾಂ ಚಿನ್ನ :
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,400
ನೂರು ಗ್ರಾಂ ಚಿನ್ನ :
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,64,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,24,400
ಬೆಂಗಳೂರು ಹಾಗೂ ಇತರೆಡೆ ಇಂದಿನ ಚಿನ್ನದ ಬೆಲೆ:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 72,440 ಆಗಿದ್ದರೆ ಚೆನ್ನೈ 72,550 ಮುಂಬೈ 72,440 ಹಾಗೂ ಕೋಲ್ಕತ್ತಾದಲ್ಲಿ 72,440 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 72,590 ರೂ. ಆಗಿದೆ.
ಇಂದಿನ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಬೆಳ್ಳಿ ರೇಟ್:
ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 925 ರೂ. 9250 ಹಾಗೂ ರೂ. 92500 ರೂ.ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 96,500 ಆಗಿದ್ದರೆ, ಮುಂಬೈನಲ್ಲಿ ರೂ. 92,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 92,000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 92,000 ಆಗಿದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized23 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized9 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
Uncategorized7 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ8 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ7 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ6 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















