ಉಡುಪಿ
Raghupati Bhat: ಅಡ್ಡ ಮತದಾನ ಮಾಡಿದ ಶಾಸಕರನ್ನು ಏನು ಮಾಡಿದ್ದೀರಿ ? ಉಚ್ಚಾಟಿಸಿದ್ದೀರಾ ? : ರಘುಪತಿ ಭಟ್
ಬಿಜೆಪಿ ಶಿಸ್ತು ಸಮಿತಿಗೆ ನನ್ನಲ್ಲಿ ಹಲವು ಪ್ರಶ್ನೆಗಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ಮೇಲೆ ಏನು ಶಿಸ್ತು ಕ್ರಮವಾಗಿದೆ? ವಜಾ ಮಾಡಿದ್ದೀರಾ?. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ? ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಆಗಿದೆ. ಪಕ್ಷದ ನಾಯಕರ ವಿರುದ್ದ ಭ್ರಷ್ಟಚಾರದ ಆರೋಪ ಮಾಡಿದವರ ವಿರುದ್ದ ಏನು ಕ್ರಮ ಕೈಗೊಂಡಿದ್ದೀರಿ ? ಎಂದು ಅವರು ಪ್ರಶ್ನಿಸಿದರು.

ಉಡುಪಿ : ಮೇ 26: “ನನ್ನನ್ನು ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡಿರುವುದಾಗಿ ಬಿಜೆಪಿ ಹೈಕಮಾಂಡ್ ತಿಳಿಸಿದೆ. ಆದರೇ ಪಕ್ಷ ನನಗೆ ಯಾವ ಹುದ್ದೆಯನ್ನೂ ಕೊಟ್ಟಿಲ್ಲ. ಟಿಕೆಟ್ ತಪ್ಪಿದಾಗ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು. ಪಕ್ಷ ನನ್ನನ್ನು ಕನಿಷ್ಟ ರಾಜ್ಯ ಕಾರ್ಯಕಾರಿ ಸದಸ್ಯ ಕೂಡ ಮಾಡಿಲ್ಲ. ನನ್ನದು ಕಾರ್ಯಕರ್ತ ಹುದ್ದೆಯಾಗಿದೆ. ಹೀಗಾಗಿ ಬಿಜೆಪಿ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಯಾರಿಗೂ ವಜಾ ಮಾಡಲು ಸಾಧ್ಯವಿಲ್ಲ “ ಎಂದು ಮಾಜಿ ಶಾಸಕ, ವಿಧಾನ ಪರಿಷತ್ʼನ ನೈಋತ್ಯ ಪದವಿಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ (Raghupati Bhat) ಹೇಳಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಬಿಜೆಪಿಯಿಂದ ಉಚ್ಚಾಟಿಸಿದ ಸುದ್ದಿ ಮಾಧ್ಯಮಗಳ ಮೂಲಕ ತಿಳಿಯಿತು. ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ದ ಕಣಕ್ಕಿಳಿದ ಹಿನ್ನಲೆಯಲ್ಲಿ ಪಾರ್ಟಿ ನೋಟಿಸ್ ಕಳುಹಿಸಿದೆ, 24 ಗಂಟೆಯಲ್ಲಿ ಅದಕ್ಕೆ ಉತ್ತರಿಸಬೇಕೆಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ, ಯಾವ ನೊಟೀಸ್ ನನ್ನ ಕೈಸೇರಿರಲಿಲ್ಲ. ಯಾವ ಕಾರಣಕ್ಕಾಗಿ ಬಿಜೆಪಿ ಅಭ್ಯರ್ಥಿ ವಿರುದ್ದ ಕಣಕ್ಕಿಳಿಯುವ ನಿರ್ಧಾರ ತೆಗೆದುಕೊಳ್ಲಬೇಕಾಯಿತು ಎಂದು ನಾನು ಉತ್ತರಿಸುತ್ತಿದೆ. ನನಗೆ ನೊಟೀಸ್ ತಲುಪುವ ಮುನ್ನವೇ, ನನ್ನನ್ನು ಪಕ್ಷದಿಂದ ಉಚ್ಚಾಟಿಸಲಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಈವರೆಗೂ ಪಕ್ಷದ ಯಾವ ನಾಯಕರಿಗೂ ನಾನು ಬೈದಿಲ್ಲ. ವ್ಯವಸ್ಥೆ ಸರಿಯಾಗಬೇಕು ಎಂದಷ್ಟೆ ಹೇಳಿದ್ದೇನೆ. ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ವ್ಯವಸ್ಥೆ ಸರಿಯಾಗಬೇಕು ಎಂದಷ್ಟೆ ಹೇಳಿದ್ದೇನೆ. ಆದರೆ, ಈ ಹಿಂದೆ ಪಕ್ಷಕ್ಕೆ ಮುಜುಗರ ಆಗುವಂತೆ ಬೈದಿದ್ದ ಜಗದೀಶ್ ಶೆಟ್ಟರ್ ಅವರು ಒಂದೇ ವರ್ಷದಲ್ಲಿ ಬಿಜೆಪಿ ಸೇರಿದರು ಮತ್ತು ಸಂಸದರಾಗಿ ಸ್ಪರ್ಧಿಸಲು ಟಿಕೆಟ್ ಕೂಡ ನೀಡಿದ್ದಾರೆ. ಈ ಮಾದರಿ ನಮ್ಮ ಕಣ್ಣ ಮುಂದೆಯೇ ಇದೆ. ಚುನಾವಣೆಯಲ್ಲಿ ಗೆದ್ದು ಪಕ್ಷಕ್ಕೆ ಹೋಗುವೆ ಅಥವಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಇರುವೆ ಎಂದರು.
ಬಿಜೆಪಿ ಶಿಸ್ತು ಸಮಿತಿಗೆ ನನ್ನಲ್ಲಿ ಹಲವು ಪ್ರಶ್ನೆಗಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ಮೇಲೆ ಏನು ಶಿಸ್ತು ಕ್ರಮವಾಗಿದೆ? ವಜಾ ಮಾಡಿದ್ದೀರಾ?. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ? ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಆಗಿದೆ. ಪಕ್ಷದ ನಾಯಕರ ವಿರುದ್ದ ಭ್ರಷ್ಟಚಾರದ ಆರೋಪ ಮಾಡಿದವರ ವಿರುದ್ದ ಏನು ಕ್ರಮ ಕೈಗೊಂಡಿದ್ದೀರಿ ? ಎಂದು ಅವರು ಪ್ರಶ್ನಿಸಿದರು.
ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಸೋಲಿಸಲು ಯಾರಿಗೆ ಎಷ್ಟು ಹಣ ಹೋಗಿದೆ, ಯಾರು ಕೆಲಸ ಮಾಡಿದ್ದಾರೆ ಎಂದು ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳೇ ಆರೋಪ ಮಾಡುತ್ತಿದ್ದಾರೆ. ವಿಪ್ ಉಲ್ಲಂಘನೆ ಮಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ? ನಾನೊಬ್ಬ ಪಾಪ, ಬಡಪಾಯಿ ಮಾತ್ರ ನಿಮಗೆ ವಜಾ ಮಾಡಲು ಸಿಕ್ಕಿರುವುದೇ? ಎಂದರು
ಉಡುಪಿಯಲ್ಲಿ 2004ರ ವಿಧಾನಸಭೆ ಚುನಾವಣೆಯಲ್ಲಿ ಯಶ್‌ಪಾಲ್ ಸುವರ್ಣ ಅವರು ಪಕ್ಷೇತರ ಅಭ್ಯರ್ಥಿ ಪರವಾಗಿ ನೇತೃತ್ವ ವಹಿಸಿ ಕೆಲಸ ಮಾಡಿದ್ದರು. ಅನಂತರ ಅವರು ಬಿಜೆಪಿಗೆ ಸೇರಿಲ್ಲವೇ? ಈಗ ನನ್ನ ವೈಯಕ್ತಿಕ ಸ್ವಾತಂತ್ರ್ಯದಂತೆ ಸ್ಪರ್ಧೆ ಮಾಡುತ್ತಿದ್ದೇನೆ. ಆದರೆ ನಮ್ಮ ಮನೆಗೆ ಬಂದ ಯಾರಿಗೂ ಆತಿಥ್ಯ ನೀಡಿಲ್ಲ ಎಂದಿಲ್ಲ ಎಂದರು.
ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ ಹಾಗೂ ಶಿಕ್ಷೆಯೂ ಜಾಸ್ತಿ. ಉಡುಪಿಯಲ್ಲಿ ನಾಲ್ವರು ಸಿಟ್ಟಿಂಗ್ ಎಂಎಲ್‌ಎಗಳನ್ನು ಬದಲಿಸಲಾಯಿತು. ಇದನ್ನು ಶಿವಮೊಗ್ಗ, ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿಯಲ್ಲಿ ಇವರಿಗೆ ಮಾಡಲು ಸಾಧ್ಯವೇ?. ಉಡುಪಿಯ ಕಾರ್ಯಕರ್ತರು ಸಂಘ, ಪಕ್ಷ ಎಂದು ಕೆಲಸ ಮಾಡುತ್ತಾರೆ. ಕರಾವಳಿ ವಿಚಾರದದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತಿದೆ. ಕರಾವಳಿಗೆ ಮೀಸಲಿಟ್ಟ ಸ್ಥಾನವನ್ನು ಶಿವಮೊಗ್ಗಕ್ಕೆ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಅದಕ್ಕೆ ಸರಿಯಾದ ಉತ್ತರ ಕೊಡುತ್ತಾರೆ.
ಉಡುಪಿ ಬಿಜೆಪಿ ಜಿಲ್ಲಾ ಘಟಕ ನನ್ನ ವಿರುದ್ದ ಶಿಸ್ತು ಕ್ರಮದ ನಿರ್ಣಯವನ್ನು ತೆಗೆದುಕೊಂಡಿತು. ಜಿಲ್ಲಾ ಘಟಕದ ಎಲ್ಲಾ ಸದಸ್ಯರು ಬಹುತೇಕ ನಾವು ಬೆಳೆಸಿದ ನಾಯಕರು. ನನಗೆ ಅವರ ಮೇಲೆ ಬೇಸರವಿಲ್ಲ, ಅವರು ಅವರ ಕೆಲಸವನ್ನು ಮಾಡಿದ್ದಾರೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ13 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು16 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್16 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ14 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















