ಬಿಗ್ ನ್ಯೂಸ್
Ramanath Rai | ಜಿಲ್ಲೆಯ ಪ್ರಭಾವಿ ರಾಜಕಾರಣಿ ರಮಾನಾಥ ರೈ ವಿಧಾನ ಷರಿಷತ್ ಗೆ..? ಪಟ್ಟಿಯಲ್ಲಿ ಹೆಸರು ಬರಲು ಕಾರಣವಾಯ್ತು ಎಂಪಿ ಚುನಾವಣೆಯ ಒಗ್ಗಟ್ಟಿನ ಹೋರಾಟ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂ. 13ರಂದು ನಡೆಯಲಿ ರುವ ಚುನಾವಣೆಗೆ ಸೋಮವಾರ ಅಧಿಸೂಚನೆ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ಗೆ ವಿಧಾನಸಭೆಯಲ್ಲಿ ಹೊಂದಿರುವ ಸಂಖ್ಯಾಬಲದ (137) ಆಧಾರದ ಮೇಲೆ 11ರಲ್ಲಿ 7 ಸ್ಥಾನಗಳು ಸುಲಭ ವಾಗಿ ಲಭ್ಯವಾಗಲಿವೆ. ಹೀಗಾಗಿ ವಿಧಾನ ಪರಿಷತ್ತಿನ ಸ್ಥಾನದ ಮೇಲೆ ಹಾಲಿ ಸಚಿವ ಎನ್.ಎಸ್.ಬೋಸರಾಜ್ ಹಾಗೂ ಹಾಲಿ ಸದಸ್ಯರಾಗಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಸಹಿತ 70 ಮಂದಿ ಆಕಾಂಕ್ಷಿಗಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಸಂಭನೀಯರ ಪಟ್ಟಿ ಸಿದ್ಧಪಡಿಸಿ ಈಗಾಗಲೇ ಎಐಸಿಸಿಗೆ ಕಳುಹಿಸಿಕೊಟ್ಟಿದೆ.
ಈ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾಜಿ ಸಚಿವ ಬಿ ರಮಾನಾಥ ರೈ (Ramanath Rai) ಹೆಸರು ಕೂಡ ಸೇರಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಈ ಬಾರಿ ಆಕಾಂಕ್ಷಿಗಳ ದಂಡು ದೊಡ್ಡದಾಗಿರುವುದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಕೇವಲ ಒಂದು ಸ್ಥಾನವಷ್ಟೇ ಲಭಿಸುವ ಸಾಧ್ಯತೆ ಇದು ಉಭಯ ಜಿಲ್ಲೆಗಳ ನಾಡಿಮಿಡಿತ ಅರಿತಿರುವ ಹಿರಿಯ ಕಾಂಗ್ರೆಸ್ ಮುಖಂಡನಿಗೆ ಒಲಿಯುವ ಸಾಧ್ಯತೆ ಅತ್ಯಧಿಕವಾಗಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿದೆ. ಇಲ್ಲಿ ಬಿಜೆಪಿಯ 11 ಶಾಸಕರಿದ್ದರೇ ಕಾಂಗ್ರೆಸ್ ಬಳಿ ಕೇವಲ 2 ಮಾತ್ರ ಶಾಸಕರಿದ್ದಾರೆ. ಅದರಲ್ಲಿ ಯುಟಿ ಖಾದರ್ ವಿಧಾನಸಭಾ ಅಧ್ಯಕ್ಷರಾಗಿದ್ದು ಪಕ್ಷದ ಚಟುವಟಿಕೆಗಳಿಗೆ ಸಿಗುತ್ತಿಲ್ಲ . ಇನ್ನೊರ್ವ ಕರಾವಳಿಯ ಶಾಸಕ ಅಶೋಕ್ ರೈಯವರು ರಾಜಕೀಯಕ್ಕೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಹೊಸಬರಾಗಿದ್ದು ಅವರಿಗೆ ಪಕ್ಷದ ಎಲ್ಲ ಕಾರ್ಯಕರ್ತರ ಪರಿಚಯವಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತಬಲ ನಾಯಕರ ಕೊರತೆಯಿದೆ.
ಸರಿ ಸುಮಾರು 4 ದಶಕಗಳಿಂದ ಚುನಾವಣಾ ರಾಜಕೀಯದಲ್ಲಿರುವ ರಮಾನಾಥ ರೈವರು ಮೂರು ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು .ಈ ವೇಳೆ ಜಿಲ್ಲೆಯಾದ್ಯಂತ ಓಡಾಟ ನಡೆಸಿರುವುದು, ಜತೆಗೆ ಜಿಲ್ಲೆಯ ಬಹುತೇಕ ಎಲ್ಲ ಬೂತ್ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಪರಿಚಯ ಅವರಿಗಿದ್ದು, ಇದು ಅವರಿಗೆ ಪ್ಲಸ್ ಪಾಯಿಂಟ್ ಆಗಿ ಪರಿಣಮಿಸಿದೆ. ಜಿಲ್ಲೆಯ ಪ್ರತಿ ಬೂತ್ ನಲ್ಲಿ ಕನಿಷ್ಟ ಒಬ್ಬರಾದರೂ ಅವರಿಂದ ಉಪಕೃತರಾದವರು ಇರುವುದು ಅವರ ಉಮೇದುವಾರಿಕೆಗೆ ಹೆಚ್ಚಿನ ಬಲ ನೀಡಿದೆ.
ಇನ್ನೂ ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಹಾನಿಯುಂಟಾಗಬಲ್ಲ ವರ್ಚಸ್ಸಿಗೆ ಕುಂದು ತರಬಲ್ಲ ಅಜೆಂಡಾಗಳನ್ನು, (ವಿಶೇಷವಾಗಿ ಕೋಮು ಆಧಾರಿತ, ಸರಕಾರದ ಇಮೇಜಿಗೆ ಕಪ್ಪು ಚುಕ್ಕೆ ಬೀರಬಲ್ಲ ಲಾ ಅಂಡ್ ಆರ್ಡರ್ ವಿಚಾರಗಳನ್ನು ) ಬಿಜೆಪಿ ಕರಾವಳಿಯಿಂದಲೇ ತರಲು ಯತ್ನಿಸುತ್ತದೆ. ಅದಕ್ಕೆ ಈ ಎರಡು ಜಿಲ್ಲೆಯಲ್ಲಿ ಅಗತ್ಯ ಬೆಂಬಲ ಸಿಗುವುದರಿಂದ ಆ ಅಜೆಂಡಾವನ್ನು ಬಳಿಕ ಯಶಸ್ವಿಯಾಗಿ ಬಿಜೆಪಿ ರಾಜ್ಯವ್ಯಾಪಿ ವಿಸ್ತರಿಸುತ್ತದೆ. ಹೀಗಾಗಿ ಇದನ್ನು ಆರಂಭದಲ್ಲೆ ಮೊಟಕಿ ಹಾಕಲು ಒಬ್ಬ ಸಮರ್ಥ ನಾಯಕ ಕಾಂಗ್ರೆಸ್ ಗೆ ಉಭಯ ಜಿಲ್ಲೆಯಲ್ಲಿ ಬೇಕಾಗಿದೆ ಎನ್ನುತ್ತವೆ ಕಾಂಗ್ರೆಸ್ ಥಿಂಕ್ ಟ್ಯಾಂಕ್. ಎರಡು ಜಿಲ್ಲೆಯ ಸಮಗ್ರ ಪರಿಚಯ ಇರುವ ಹಾಗೂ ಪಕ್ಷದ ಕಾರ್ಯಕರ್ತರ ಪರಿಚಯ ಇರುವ ನಾಯಕರಲ್ಲಿ ರಮಾನಾಥ ರೈ ಮುಂಚೂಣಿಗರು. ಹೀಗಾಗಿ ಅವರ ಹೆಸರನ್ನು ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಗಳ ಯಾದಿಯಲ್ಲಿ ಕಾಂಗ್ರೆಸ್ ಸೇರಿಸಿದ್ದು, ಪಟ್ಟಿ ದಿಲ್ಲಿ ತಲುಪಿದೆ.
ಮೊನ್ನೆ ನಡೆದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಿ ರಮಾನಾಥ ರೈಯವರು ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದರು. ತನ್ನ 70ರ ಇಳಿ ವಯಸ್ಸಿನಲ್ಲೂ ಪಾದರಸದಂತೆ ಕೆಲಸ ಮಾಡಿದ ರೈವರು 8 ವಿಧಾನಸಭಾ ಕ್ಷೇತ್ರದಲ್ಲೂ ಭರಪೂರ ಪ್ರಚಾರ ಮಾಡಿದರು. ಕಳೆದೆರಡು ದಶಕದ ಕಾಂಗ್ರೆಸ್ ಪ್ರಚಾರದ ವೈಖರಿಯನ್ನು ಗಮನಿಸಿರುವ ಹಿರಿಯ ರಾಜಕೀಯ ವಿಶ್ಲೇಷಕರುಗಳು ಕೂಡ ಈ ಬಾರಿಯ ಕಾಂಗ್ರೆಸ್ ಪ್ರಚಾರ ಈ ಹಿಂದಿಗಿಂತ ಹೆಚ್ಚು ಎಪೆಕ್ಟಿವ್ ಆಗಿತ್ತು ಎನ್ನುವುದನ್ನು ಒಪ್ಪುತ್ತಾರೆ. ಈ ಹಿಂದೆಯೆಲ್ಲ ಒಡೆದ ಮನೆಯಂತಾಗಿದ್ದ ಪಕ್ಷದೊಳಗೆ ಏಕಸ್ವರ ಮೂಡಿಸುವಲ್ಲಿ ರಮಾನಾಥ ರೈ ಯಶಸ್ವಿಯಾಗಿದ್ದರು.
ಮೊನ್ನೆಯ ಲೋಕಸಭಾ ಚುನಾವಣೆ ಸಂದರ್ಭ 8 ವಿದಾನಸಭಾ ಕ್ಷೇತ್ರದ ಬ್ಲಾಕ್ ಗಳು ರಮಾನಾಥ ರೈ ಯವರ ಹೆಸರನ್ನು ಶಿಫಾರಸ್ಸು ಮಾಡಿ ಕೆಪಿಸಿಸಿಗೆ ಕಳುಹಿಸಿತ್ತು. ಆದರೇ ಕೊನೆ ಕ್ಷಣದಲ್ಲಿ ಪಕ್ಷ ಟಿಕೆಟ್ ಪದ್ಮರಾಜ್ ಆರ್ ಪೂಜಾರಿಗೆ ನೀಡಿತ್ತು . ಹೀಗಿದ್ದೂ ಅವರು ಒಂದಿಷ್ಟು ಬೇಸರ ವ್ಯಕ್ತಪಡಿಸದೇ ಪಕ್ಷದ ಪರವಾಗಿ ವ್ಯಾಪಕ ಪ್ರಚಾರ ಕೈಗೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ರೈ ಕಾರ್ಯವೈಖರಿ ಕಾಂಗ್ರೆಸ್ ಹೈಕಮಾಂಡ್ ಗೆ ಖುಷಿ ಕೊಟ್ಟಿದೆ. ಇದರ ಪ್ರತಿಫಲವಾಗಿ ಅವರಿಗೆ MLC ಟಿಕೆಟ್ ನೀಡಲು ಪಕ್ಷ ಮನಸ್ಸು ಮಾಡಿದೆ ಎನ್ನಲಾಗಿದೆ.
ಬಂಟ್ವಾಳದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಯಾದ್ಯಂತ ನಡೆಸಿದ ಅಭಿವೃದ್ದಿ ಕಾರ್ಯಗಳು ಅವರೊಬ್ಬ ಉತ್ತಮ ಅಡಳಿತಗಾರ ಎಂಬುವುದನ್ನು ನಿರೂಪಿಸಿದೆ. ಚುನಾವಣೆಯಲ್ಲಿ ಸೋಲಲ್ಲಿ ಗೆಲ್ಲಲ್ಲಿ ನಿರಂತರವಾಗಿ ಜನ ಸಂಪರ್ಕದಲ್ಲಿರುವುದು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ಅವರ ಹೆಚ್ಚುಗಾರಿಕೆ . ಪ್ರತಿ ನಿತ್ಯ ಅವರ ಮನೆ ಮುಂದೆ ಇರುವ ಜನ ಸಂದಣಿ ಅದಕ್ಕೆ ಉದಾಹರಣೆ . ಇದು ಕೂಡ ಅವರನ್ನು ಅಭ್ಯರ್ಥಿಯನ್ನಾಗಿಸುವುದಕ್ಕೆ ತನ್ನದೇ ಕೊಡುಗೆ ಕೊಡುವ ಸಾಧ್ಯತೆಯಿದೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸ್ಥಳೀಯ
Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್‌ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್‌ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.
ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್‌ಗಳ ಪೈಕಿ ಆರು ಲೇನ್‌ಗಳನ್ನು (3+3) ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.
ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.
ಬಿ.ಸಿ. ರೋಡ್‌ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.
ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.
ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.
13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.
ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಅಂತರ ರಾಜ್ಯ
Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ
ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.
ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.
ಏನೇನು ಪ್ರಸ್ತಾವಗಳಿವೆ?
- ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
- ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
- ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
- ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
- ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್‌ಗಳಲ್ಲಿ ಆರಂಭಿಸಲು ಸಲಹೆ.
- ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
-
ಬಿಗ್ ನ್ಯೂಸ್15 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ14 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಅಂತರ ರಾಜ್ಯ12 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಸುಳ್ಯ9 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ನಿಧನ ವಾರ್ತೆ14 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ13 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ
-
ಸ್ಥಳೀಯ9 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ14 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















