ಉಡುಪಿ
ಉಡುಪಿ SDM ಕಾಲೇಜು ಸಹಿತ ಹಲವು ಕಾಲೇಜುಗಳು ಪಕ್ಷದ ಕಚೇರಿಯಲ್ಲಿ ಬಿಜೆಪಿ ಪದವೀಧರ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತಯಾಚನೆ
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಉದ್ಯಾವರದ ಪ್ರತಿಷ್ಠಿತ ಎಸ್ ಡಿಎಂ ಆಯುರ್ವೇದ ಕಾಲೇಜಿಗೆ ಶನಿವಾರ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಭೋಜೇಗೌಡರು ಭೇಟಿ ನೀಡಿ ತಮ್ಮನ್ನು ಬೆಂಬಲಿಸಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ವೇಳೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಲಾಲಾಜಿ ಮಂಡಲ್ , ಕಾಲೇಜಿನ ಪ್ರಾಂಶುಪಾಲರಾದ ಮಮತಾ ಸೇರಿದಂತೆ ಕಾಲೇಜಿನ ಆಡಳಿತವರ್ಗ ,ಉಪನ್ಯಾಸಕರು , ಸಿಬ್ಬಂದಿವರ್ಗ ಮತ್ತು ಪದವೀಧರ ಮತದಾರರು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುಮೆ ಸುರೇಶ್ ಶೆಟ್ಟಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು , ವಾರ್ಡ್ ಅಧ್ಯಕ್ಷರು ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು , ವಾರ್ಡ್ ಅಧ್ಯಕ್ಷರು ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಸೇಂಟ್ ಮೇರೀಸ್ ಸೈರನ್ ಪಿಯು ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮತಯಾಚಿಸಿದರು .
ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ , ಅಲ್ಲಿನ ಆಡಳಿತವರ್ಗ , ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಿದರು.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಬಿಗ್ ನ್ಯೂಸ್21 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್21 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ24 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ನಿಧನ ವಾರ್ತೆ2 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ಸ್ಥಳೀಯ2 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ2 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ2 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ1 hour agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ















