ಸುಳ್ಯ
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ವತಿಯಿಂದ ಸುಳ್ಯದಲ್ಲಿ ಮಹಿಳೆಯೋರ್ವರಿಗೆ ನಿರ್ಮಿಸಿ ಕೊಟ್ಟ ಮನೆ ‘ಸೇವಾಶ್ರಯ’ ಹಸ್ತಾಂತರ : ಸಮಾಜದಲ್ಲಿ ಇನ್ನೊಬ್ಬರಿಗೆ ಸಹಾಯ ಮಾಡುವುದೇ ಜೀವನದ ಭಾಗವಾಗಿರಬೇಕು – ಅರುಣ್ ಪುತ್ತಿಲ
ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ , ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಲ್ಪನೆಯಂತೆ ಸೇವೆ ಎಂಬ ಯಜ್ಞದಲ್ಲಿ ಸವಿದೆಯಂತೆ ಉರಿದು ಸಮಾಜದಲ್ಲಿ ಮತ್ತೊಬ್ಬರಿಗೆ ಸಹಾಯ ಮಾಡುವುದೇ ನಮ್ಮ ಜೀವನದ ಭಾಗವಾಗಿರಬೇಕು. ಈ ಮೂಲಕ ನಮ್ಮ ಜೀವನ ಸಾರ್ಥಕವಾಗಿಸಬೇಕು ಎಂದರು.ಸೇವೆಯ ಕಲ್ಪನೆಯ ಮೂಲಕ ಕಷ್ಟದಲ್ಲಿ ಇರುವವರಿಗೆ ಸಹಾಯ ನೀಡಬೇಕೆಂಬ ಕಾರಣದಿಂದ ಎಲ್ಲರ ಸಹಕಾರದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದೆ. ಅಶಕ್ತರ, ಶೋಷಿತರ ಪರವಾಗಿ ನಿಂತು ಅವರ ಸಂತೋಷ ನಮ್ಮ ಸಂತೋಷ ಎಂದು ತಿಳಿದು ಸೇವೆ ಮಾಡಿದಾಗ ಬದುಕಿನಲ್ಲಿ ನೆಮ್ಮದಿಯನ್ನು ದೊರೆಯಲು ಸಾಧ್ಯ ಈ ರೀತಿಯ ಸೇವೆಯಿಂದ ಬದುಕಿನಲ್ಲಿ ನೆಮ್ಮದಿ ಮತ್ತು ಸಾರ್ಥಕತೆ ಪಡೆಯಲು ಸಾಧ್ಯ ಎಂದ ಅವರು ಮನುಷ್ಯತ್ವ, ಹೃದಯ ಶ್ರೀಮಂತಿಕೆ ಎಲ್ಲರಲ್ಲಿ ಇರಲಿ, ಆ ಮೂಲಕ ಹಿರಿಯರ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದರು.

ಸೂರಿಲ್ಲದವರಿಗೆ ಸೂರು ಒದಗಿಸಿ ಕೊಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಪ್ರಯತ್ನ ಇನ್ನಷ್ಟು ಆಗಬೇಕಾಗಿದೆ. ಆ ಮೂಲಕ ಎಲ್ಲರ ಬಾಳಿನಲ್ಲಿಯೂ ಪ್ರೀತಿ, ವಿಶ್ವಾಸ, ಸಂತಸ ನೆಲೆಯಾಗಲಿ ಎಂದು ಅವರು ಆಶಿಸಿದರು.
ಮನೆಯ ಕೀಯನ್ನು ಹಸ್ತಾಂತರ ಮಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥ ಮಾತನಾಡಿ ಒಂದು ಸೂರು ನಿರ್ಮಿಸಿ ಕೊಟ್ಟ ಪುತ್ತಿಲ ಪರಿವಾರದ ಸೇವೆ ಐತಿಹಾಸಿಕವಾದುದು. ಕಷ್ಟದಲ್ಲಿ ಇರುವವರಿಗೆ ಸಹಾಯ, ಸಹಕಾರ ನೀಡಬೇಕು. ಎಲ್ಲರಿಗೂ ಸ್ಫೂರ್ತಿ ನೀಡುವ ಈ ಕಾರ್ಯಕ್ರಮ ಇದು ಎಂದರು.

ಹಿಂದೆ ಹೀಗಿತ್ತು ಮನೆ
ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಮಾತನಾಡಿ ಮನೆ ನಿರ್ಮಿಸಿ ಕೊಟ್ಟಿರುವುದು ಒಂದು ದೇವಸ್ಥಾನ ನಿರ್ಮಿಸಿದಂತೆ ಪವಿತ್ರವಾದ ಕೆಲಸ ಎಂದರು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಮಾತನಾಡಿದರು. ಪ್ರಮುಖರಾದ ಸಂತೋಷ್ ಜಾಕೆ, ಸಂತೋಷ್ ಕುತ್ತಮೊಟ್ಟೆ, ಡಾ.ಸಾಯಿರಾಂ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನಗರ ಅಧ್ಯಕ್ಷ ಅನಿಲ್ ತೆಂಕಿಲ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಕಾರ್ಯದರ್ಶಿ ರವಿಕುಮಾರ್ ರೈ ತಿಂಗಳಾಡಿ ಅತಿಥಿಗಳಾಗಿ ಉಪಸ್ಥಿತರಿದ್ದರು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸುಳ್ಯ ತಾಲೂಕು ಅಧ್ಯಕ್ಷ ದಿನೇಶ್ ಅಡ್ಯಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು. ಕಾರ್ಯದರ್ಶಿ ಸುಧಾಕರ ಬಾಟೋಳಿ, ಸದಸ್ಯರಾದ ಸಾತ್ವಿಕ್, ಪುಷ್ಪಾದರ, ಪದ್ಮನಾಭ ಬೀಡು, ಸುಕೇಶ್ ಅಡ್ಕಾರ್ ಸಹಕರಿಸಿದರು.ಪ್ರಮುಖರಾದ ಸುನಿಲ್ ಕೇರ್ಪಳ, ಸತೀಶ್ ಕೆಮನಬಳ್ಳಿ ವಸಂತ ನಾಯಕ್ ಅಜೇರು, ವಿನಯಚಂದ್ರ ಮತ್ತಿತರರು ಉಪಸ್ಥಿತರಿದ್ದರು. ರಾಜೇಶ್ ಭಟ್ ಮನೆಯ ಗೃಹ ಪ್ರವೇಶದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಕ್ರೈಂ21 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ15 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ21 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ20 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ16 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್21 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ20 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















