ಉಡುಪಿ
Udupi Gang War: ಉಡುಪಿಯ ನಡು ರಸ್ತೆಯಲ್ಲಿ ಗರುಡ ಗ್ಯಾಂಗಿನ ಗ್ಯಾಂಗ್ ವಾರ್ – 6 ಜನರ ಬಂದನ – ಮೂರು ಪ್ರಕರಣ
ಮೊದಲಿಗೆ ಜತೆಯಾಗಿ ಗರುಡ ಗ್ಯಾಂಗಿನ ಹೆಸರಿನಲ್ಲಿ ಕಾರ್ಯಚರಿಸುತ್ತಿದ್ದ ಆರೋಪಿಗಳು ಬಳಿಕ ಯಾವುದೋ ಕಾರಣಕ್ಕೆ ಅವರೊಳಗಡೆ ವೈಮನಸ್ಸು ಉಂಟಾಗಿ, ಪರಸ್ಪರ ಹಲ್ಲು ಮಸೆಯುತ್ತಿದ್ದರು ಎನ್ನಲಾಗಿದೆ. ಇದನ್ನು ರಾಜಿ ಮಾಡಿಸುವ ನೆಪದಲ್ಲಿ ಒಂದು ತಂಡ ಇನ್ನೊಂದು ತಂಡವನ್ನು ಕುಂಜುಬೆಟ್ಟು ಜಂಕ್ಷನ್ ಗೆ ಬರ ಹೇಳಿತ್ತು. ಎರಡು ತಂಡಗಳು ಮಾರಾಕಾಯುಧಗಳೊಂದಿಗೆ ಆಗಮಿಸಿದ್ದು , ಪರಸ್ಪರ ಹೊಡೆದಾಡಿಕೊಂಡಿದ್ದಾರೆ

Udupi Gangwar:ಮೇ 28: ಮೇ 18ರ ಮಧ್ಯರಾತ್ರಿ ಗರುಡ ಗ್ಯಾಂಗಿಗೆ ಸೇರಿದ , ಪ್ರಸ್ತುತ ಎರಡು ತಂಡಗಳಾಗಿ ಸಿಡಿದು ಹೋಗಿರುವ ರೌಡಿಗಳ ಪಡೆ ಎರಡು ಕಾರುಗಳಲ್ಲಿ ಉಡುಪಿ ನಗರದ ಕುಂಜುಬೆಟ್ಟು ಜಂಕ್ಷನ್ ನಲ್ಲಿ ತಲ್ವಾರ್ ಹಿಡಿದು ಹೊಡೆದಾಡಿ ಕೊಂಡ ವಿಡಿಯೋ ವೈರಲ್ ಆಗಿದ್ದು, ವಾರದ ಬಳಿಕ ಪೊಲೀಸ್ ಇಲಾಖೆ ಇದೀಗ 6 ಮಂದಿ ಆರೋಪಿಗಳನ್ನು ಬಂಧಿಸಿ, 3 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಬಂಧಿತರನ್ನು ಮಜೀದ್, ಅಲ್ಫಾಝ್, ಶರೀಫ್ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಮುಖ ಆರೋಪಿ ಕಾಪುವಿನ ಕೊಂಬಗುಡ್ಡೆಯ ಆಶಿಕ್ ತೋನ್ಸೆಯ ರಾಕೀಬ್, ಸಕ್ಲೈನ್ ಈಗಾಗಲೇ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಇಲ್ಲಿಯವರೆಗೂ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
ಉಡುಪಿ ನಗರದ ಶಾರದಾ ಮಂಟಪ ಜಂಕ್ಷನ್ʼನಲ್ಲಿ ಯುವಕರ ಗುಂಪಿನ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ವ್ಯವಹಾರಕ್ಕೆ ಸಂಬಂಧಿಸಿದ ತಗಾದೆ ಮಾರಾಮಾರಿಯ ವರೆಗೆ ಬಂದಿತ್ತು. ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಸಾರ್ವಜನಿಕರು ಓಡಾಟ ಮಾಡುತ್ತಿದ್ದ ಸಂದರ್ಭದಲ್ಲೇ ತಲ್ವಾರ್ ಹಿಡಿದು ಯುವಕರು ಹೊಡೆದಾಟಕ್ಕೆ ಯತ್ನಿಸಿದ್ದರು. ಈ ವೇಳೆ ಓರ್ವನಿಗೆ ಕಾರು ಗುದ್ದಿಸಿದ್ದರು. ಅಪಾರ್ಟ್ಮೆಂಟ್ನಲ್ಲಿ ವ್ಯಕ್ತಿಯೊಬ್ಬ ಘಟನೆಯ ಸಂಪೂರ್ಣ ದೃಶ್ಯವನ್ನು ಸೆರೆಹಿಡಿದಿದ್ದರು.

ಮೊದಲ ಪ್ರಕರಣ ಹೊಡೆದಾಟಕ್ಕೆ ಸಂಬಂಧಿಸಿದಾಗಿದೆ. 5ಕ್ಕಿಂತ ಹೆಚ್ಚು ಯುವಕರು ಎರಡು ಕಾರು ಹಾಗೂ ನೋಂದಣಿ ಸಂಖ್ಯೆ ಇಲ್ಲದ 2 ಬೈಕ್ ಗಳಲ್ಲಿ ಬಂದು, ಕಾರುಗಳನ್ನು ಡಿಕ್ಕಿ ಹೊಡೆಸಿಕೊಂಡು, ಒಬ್ಬಾತನಿಗೆ ಕಾರು ಗುದ್ದಿಸಿ ರಸ್ತೆಗೆ ಬೀಳಿಸಿದ್ದು, ರಸ್ತೆಗೆ ಬಿದ್ದ ವ್ಯಕ್ತಿಯನ್ನು ಇಬ್ಬರು ಯುವಕರು ಮಾರಾಕಾಸ್ತ್ರಗಳಿಂದ ಹೊಡೆದಿದ್ದಾರೆ. ಈ ಘಟನೆಯ ಬಗ್ಗೆ ಸ್ಥಳೀಯರು ಚಿತ್ರೀಕರಿಸಿದ 1.30 ನಿಮಿಷಗಳ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿತ್ತು. ಇದನ್ನು ಖಚಿತಪಡಿಸಿಕೊಂಡ ಮೇಲೆ ಸಾರ್ವಜನಿಕ ಶಾಂತಿಭಂಗವಾಗುವಂತೆ ಹೊಡೆದಾಟದ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಎರಡನೇ ಪ್ರಕರಣವನ್ನು ಗ್ಯಾಂಗಿನ ಒಂದು ತಂಡದ ಪರವಾಗಿ ಮೊಹಮ್ಮದ್ ಸನ್ (24) ನೀಡಿದ ದೂರಿನಂತೆ, ಮೂರನೇ ಪ್ರಕರಣವನ್ನು ಇನ್ನೊಂದು ತಂಡದ ಕಾಪುವಿನ ಮೊಹಮ್ಮದ್ ಶರೀಫ್ (37) ನೀಡಿದ ದೂರಿನಂತೆ ಪರಸ್ಪರ ಹಲ್ಲೆ, ಕೊಲೆಯತ್ನದ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಮೊದಲಿಗೆ ಜತೆಯಾಗಿ ಗರುಡ ಗ್ಯಾಂಗಿನ ಹೆಸರಿನಲ್ಲಿ ಕಾರ್ಯಚರಿಸುತ್ತಿದ್ದ ಆರೋಪಿಗಳು ಬಳಿಕ ಯಾವುದೋ ಕಾರಣಕ್ಕೆ ಅವರೊಳಗಡೆ ವೈಮನಸ್ಸು ಉಂಟಾಗಿ, ಪರಸ್ಪರ ಹಲ್ಲು ಮಸೆಯುತ್ತಿದ್ದರು ಎನ್ನಲಾಗಿದೆ. ಇದನ್ನು ರಾಜಿ ಮಾಡಿಸುವ ನೆಪದಲ್ಲಿ ಒಂದು ತಂಡ ಇನ್ನೊಂದು ತಂಡವನ್ನು ಕುಂಜುಬೆಟ್ಟು ಜಂಕ್ಷನ್ ಗೆ ಬರ ಹೇಳಿತ್ತು. ಎರಡು ತಂಡಗಳು ಮಾರಾಕಾಯುಧಗಳೊಂದಿಗೆ ಆಗಮಿಸಿದ್ದು , ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಪೊಲೀಸ್ ಮುಲಗಳು ತಿಳಿಸಿವೆ. ಪೊಲೀಸರು ಎರಡು ಕಾರುಗಳು ಮತ್ತು ಚಾಕುಗಳು ಸೇರಿದಂತೆ ಹರಿತವಾದ ಆಯುಧಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
-
ನಿಧನ ವಾರ್ತೆ13 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು11 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು8 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ12 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ12 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ12 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ12 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ14 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















