ಆರೋಗ್ಯ
White poisons-ಈ ಎರಡು ‘ಬಿಳಿ ಪಾಷಣ’ ಗಳಿಂದ ದೂರವಿರಿ, ಆರೋಗ್ಯವಾಗಿರಿ; ಭಾರತೀಯರಿಗೆ ಹೊಸ ಆಹಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಬಿಸಿಎಂಆರ್
ನಾವು ಆರೋಗ್ಯಕರ ಎಂದು ತಿಳಿದು ಸೇವಿಸುವ ಬಹುತೇಕ ಆಹಾರ ಪದಾರ್ಥಗಳು ನಮಗೆ ಗೊತ್ತಿಲ್ಲದೆ ನಮ್ಮ ದೇಹದಲ್ಲಿ ಕೆಲವೊಂದು ಅಡ್ಡಪರಿಣಾಮಗಳನ್ನು ಉಂಟು ಮಾಡಿ ಬಿಡುತ್ತವೆ! ಹಾಗಾಗಿ ಇಂತಹ ಆಹಾರಗಳನ್ನು ಅತಿಯಾಗಿ ಸೇವನೆ ಮಾಡುವುದರಿಂದ, ವೈದ್ಯರನ್ನು ಕಾಣುವ ದಿನ ದೂರವಿಲ್ಲ ಅಂತಲೇ ಹೇಳಬಹುದು! ದಿನನಿತ್ಯ ಅಡುಗೆಗೆ ಬಳಸುವ ಉಪ್ಪು, ಟೀ-ಕಾಫಿಗೆ ಬಳಸುವ ಸಕ್ಕರೆಯು ಕೂಡ ಆರೋಗ್ಯಕ್ಕೆ ಬಲು ಅಪಾಯಕಾರಿ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಬಿಸಿಎಂಆರ್) ಮತ್ತು ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ನ್ಯೂಟ್ರಿಶಿಯನ್ ಸಂಶೋಧನೆ ಮಾಡಿ ಭಾರತೀಯರಿಗೆ ಹೊಸ ಆಹಾರ ಮಾರ್ಗಸೂಚಿಯನ್ನು ಬಿಡುಗಡೆಮಾಡಿದೆ. ಅದರಲ್ಲಿ ಸಕ್ಕರೆ ಮತ್ತು ಉಪ್ಪನ್ನು ಕಡಿಮೆ ಬಳಸಬೇಕು ಎಂದು ತಿಳಿಸಲಾಗಿದೆ. ಭಾರತೀಯರು ದಿನಕ್ಕೆ 20-25 ಗ್ರಾಂ ಸಕ್ಕರೆ ತಿನ್ನಬೇಕು ಎಂದು ತಿಳಿಸಿದೆ.
ಭಾರತಲ್ಲಿ ಅಧಿಕ ಪ್ರಮಾಣದಲ್ಲಿ ಸ್ಫೂಲಕಾಯ, ಮಧುಮೇಹ, ಹೃದಯ ಕಾಯಿಲೆ ಸಂಬಂಧಿಸಿದ ಹಲವು ರೋಗ ಕಂಡುಬರುತ್ತಿದ್ದು ಅದನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಅಪೆಕ್ಸ್ ಹೆಲ್ತ್ ರಿಸರ್ಚ್, ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ನ್ಯೂಟ್ರಿಷಿಯನ್ ಪ್ರಕಾರ ಭಾರತದಲ್ಲಿ ಆಹಾರ ಪದ್ಧತಿಯಿಂದ ಅನಾರೋಗ್ಯ ಹೆಚ್ಚಾಗಿದೆ ಎಂದು ತಿಳಿಸಿದೆ.
ಈ ಮಾರ್ಗಸೂಚಿಯಿಂದ ಅಪೌಷ್ಠಿಕತೆ ವಿರುದ್ಧ ಹೋರಾಡಿ ಆರೋಗ್ಯ ಬ್ಯಾಲೆನ್ಸ್ ಆದ ಆಹಾರಕ್ಕೆ ಆದ್ಯತೆ ನೀಡಿ. ಪ್ರೆಗ್ನನ್ಸಿ ಅಥವಾ ಹಾಲುಣಿಸುವ ತಾಯಂದಿರು ಹೆಚ್ಚು ಆಹಾರ ತಿನ್ನಿ, ಮಗು ಹುಟ್ಟಿದ ಮೊದಲ ಆರು ತಿಂಗಳು ಎದೆಹಾಲನ್ನು ಮಾತ್ರ ನೀಡಿ. ಎರಡು ವರ್ಷದವರೆಗೂ ಹಾಲುಣಿಸಿ. ಆರು ತಿಂಗಳಿಗಿಂತ ಹೆಚ್ಚು ವಯಸ್ಸಿನ ಮಕ್ಕಳಿಗೆ
ಮನೆಯ ಆಹಾರವನ್ನೇ ನೀಡಿ. ಮಕ್ಕಳಿಗೆ ಹೊರಗಿನ ಆಹಾರದ ಬದಲು, ಮನೆಯ ಆಹಾರವನ್ನೇ ನೀಡಿ. ಕಾಳು ಬೇಳೆ-ತರಕಾರಿಗಳನ್ನು ಹೆಚ್ಚೆಚ್ಚು ಸೇವಿಸಿ, ಎಣ್ಣೆ ಬಳಕೆ ಮೇಲೆ ಹಿಡಿತ ಇರಲಿ. ಮಸಲ್ ಮಾಸ್ ಹೆಚ್ಚು ಮಾಡುವಂಥ ಆಹಾರ ಸೇವಿಸಿ ಹೆಚ್ಚು ತೂಕ ಇದ್ದರೆ ಇಳಿಸಿ, ಆರೋಗ್ಯಕರ ಡಯಟ್ ಇಂದೇ ಆರಂಭಿಸಿ. ಫಿಸಿಕಲಿ ಸದಾ ಆ್ಯಕ್ಟಿವ್ ಆಗಿರಿ
ಅಲ್ಲದೆ ಆದಷ್ಟು ಉಪ್ಪು ಸೇವನೆ ಕಡಿಮೆ ಮಾಡಿ. ರಸ್ತೆ ಬದಿಯ ಆಹಾರಗಳಿಗೆ ಗುಡ್ ಬೈ ಹೇಳಿ. ಆಹಾರ ಬೇಯಿಸುವ ವಿಧಾನದ ಬಗ್ಗೆ ಗಮನ ಇರಲಿ. ಹೆಚ್ಚು ನೀರು ಕುಡಿಯಿರಿ. ಹೈ ಫ್ಯಾಟ್, ಸಕ್ಕರೆ, ಪೊಸೆಸ್ಟ್ ಆಹಾರ ತಿನ್ನಬೇಡಿ. ನ್ಯೂಟ್ರಿಯಂಟ್ಸ್ ತುಂಬಿರುವ ಆಹಾರಕ್ಕೆ ಆದ್ಯತೆ ನೀಡಿ. ಯಾವುದೇ ಪದಾರ್ಥ ಕೊಳ್ಳುವ ಮುನ್ನ ಯಾವೆಲ್ಲಾ ಪದಾರ್ಥ ಬಳಸಿದ್ದಾರೆ ಎಂದು ನೋಡಿಕೊಳ್ಳಿ ಎಂದು ಸಲಹೆ ನೀಡಲಾಗಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಮಂಗಳೂರು8 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ11 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ13 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್13 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ13 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ8 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ12 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್12 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















