ಕ್ರೈಂ
Akshay Kallega-ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಜಾಮೀನು ಕೋರಿ ಸಲ್ಲಿಸಿದ್ದ ಆರೋಪಿಗಳಿಬ್ಬರ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ತಿರಸ್ಕೃತ
ಪುತ್ತೂರು : ಏಳು ತಿಂಗಳ ಹಿಂದೆ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಂಜುನಾಥ್ ಅಲಿಯಾಸ್ ಹರಿ ಹಾಗೂ ಕೇಶವ ಪಡೀಲ್ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಪುತ್ತೂರಿನ ಖ್ಯಾತ ಹುಲಿ ಕುಣಿತ ತಂಡ ಕಲ್ಲೇಗ ಟೈಗರ್ಸ್ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ (24.)ಅವರನ್ನು ಕಳೆದ ನವೆಂಬರ್ 7ರಂದು ತಡ ರಾತ್ರಿ ನಾಲ್ವರ ತಂಡ ಮಾರಾಕಾಯುಧಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿತ್ತು. ಪಡೀಲು ನಿವಾಸಿ ಮನೀಶ್, ಖಾಸಗಿ ಬಸ್ ಚಾಲಕನಾಗಿದ್ದ ಬನ್ನೂರು ಕೃಷ್ಣನಗರ ನಿವಾಸಿ ಚೇತನ್, ಬನ್ನೂರು ನಿವಾಸಿ ಮಂಜುನಾಥ್ ಯಾನೆ ಹರಿ ಮತ್ತು ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷರಾಗಿದ್ದ ಕೇಶವ ಪಡೀಲ್ ಅವರನ್ನು ಕೊಲೆ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.
ಇಬ್ಬರಿಂದ ಜಾಮೀನು ಅರ್ಜಿ:
3 ನೇ ಹಾಗೂ ನಾಲ್ಕನೇ ಮಂಜುನಾಥ್ ಯಾನೆ ಹರಿ ಮತ್ತು ಕೇಶವ ಪಡೀಲ್ ಅವರು ಜಾಮೀನು ಕೋರಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ದೂರುದಾರ ವಿಖ್ಯಾತ್ ಪರ ಸರಕಾರಿ ಅಭಿಯೋಜಕರಾದ ಜಯಂತಿ ಸತೀಶ್ ಭಟ್ ಅವರು ವಾದಿಸಿ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅವರ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು, ಆರೋಪಿಗಳಿಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಏ.27ರಂದು ಆದೇಶಿಸಿದ್ದರು.
ಹೈಕೋರ್ಟ್ಗೆ ಮೇಲ್ಮನವಿ:
ಪುತ್ತೂರು ಜಿಲ್ಲಾ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಆರೋಪಿಗಳು ರಾಜ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ದೂರುದಾರ ವಿಖ್ಯಾತ್ ಪರವಾಗಿ ಹೈಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ ವಕೀಲ ರಾಜಶೇಖರ್ ಹಿಲ್ಯಾರ್ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿರುವುದರಿಂದ ಘಟನೆಯ ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆಗೆ ಮೊದಲೇ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡದಂತೆ ನ್ಯಾಯಪೀಠದ ಗಮನ ಸೆಳೆದಿದ್ದರು. ಅವರ ವಾದವನ್ನು ಪುರಸ್ಕರಿಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಮೇ 28ರಂದು ಆದೇಶಿಸಿದೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ನಿಧನ ವಾರ್ತೆ23 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು21 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ22 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ18 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ22 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















