ಉಡುಪಿ
BJP office-bearers-ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬೆಂಬಲ – ನಾಲ್ವರು ಬಿಜೆಪಿ ಪದಾಧಿಕಾರಿಗಳ ಉಚ್ಚಾಟನೆ
ಉಡುಪಿ, ಮೇ 30: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಉಚ್ಛಾಟನೆ ಮಾಡಲಾಗಿದೆ.
ಬಂಡಾಯ ಅಭ್ಯರ್ಥಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್
ಅವರಿಗೆ 48 ಗಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.
ಕೆಲವರು ಉತ್ತರ ಕೊಟ್ಟಿದ್ದು ಅವರ ಸಬೂಬು ನಮ್ಮ ನೋಟೀಸ್‌ಗೆ ಸರಿಯಾದ ಉತ್ತರ ಆಗಿಲ್ಲ. ಆದುದರಿಂದ ಅವರ ಹೇಳಿಕೆಯನ್ನು ಪರಿಗಣಿಸದೆ ನೋಟೀಸ್ ಜಾರಿ ಮಾಡಿದ ನಾಲ್ವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಿ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಅಪರಾಧ20 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ20 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್19 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ18 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ17 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ18 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್23 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
-
ಮಂಗಳೂರು18 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















