ಮಂಗಳೂರು
Namaz at Road ರಸ್ತೆಯಲ್ಲಿ ನಮಾಜ್ : ಸುಮೋಟ್ ಪ್ರಕರಣಕ್ಕೆ ಬಿ ರಿಪೋರ್ಟ್ ; ಕೇಸ್ ದಾಖಲಿಸಿದ ಪಿಐಗೆ ಕಡ್ಡಾಯ ರಜೆ – ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ; ಬಿ ರಿಪೋರ್ಟ್ ಸಲ್ಲಿಕೆಯ ವಿರುದ್ದ ರಾಜ್ಯದಾದ್ಯಂತ ಹೋರಾಟ ವಿಹಿಂಪ ಎಚ್ಚರಿಕೆ
ಮಂಗಳೂರು: ಕಂಕನಾಡಿಯ ರಹ್ಮಾನೀಯ ಮಸೀದಿಯೊಂದರ ಮುಂಭಾಗ 8-10 ಮಂದಿ ರಸ್ತೆಯಲ್ಲೆ ರಸ್ತೆಯಲ್ಲಿ ನಮಾಜ್ ಮಾಡಿದ್ದ ಕುರಿತಾಗಿ ವಿಡಿಯೋ ವೈರಲ್ ಆದ ಬಳಿಕ ನಮಾಜ್ ಮಾಡಿದವರ ವಿರುದ್ದ ಕದ್ರಿಯ ನಗರ ಪೂರ್ವ ಪೊಲೀಸ್ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡಿದ್ದು, ಅದಕ್ಕಿಗ 2 ದಿನದ ಅಂತರದಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಅಲ್ಲದೇ ಪ್ರಕರಣ ದಾಖಲಾದ ಠಾಣೆಯ ಇನ್ಸ್ ಪೆಕ್ಟರ್ ಅನ್ನು ಕಡ್ಡಾಯ ರಜೆ ನೀಡಲಾಗಿದೆ. ಅಲ್ಲದೇ ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ಬಜರಂಗದಳವು ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸುತ್ತದೆ ಎಂದು ಬೆದರಿಕೆಯೊಡ್ಡಿದ್ದ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲಾಗಿದೆ.

ಶುಕ್ರವಾರ (ಮೇ 24ರಂದು ) ಮಧ್ಯಾಹ್ನ ಕಂಕನಾಡಿಯ ರಹ್ಮಾನೀಯ ಮಸೀದಿಯೊಂದರ ಮುಂಭಾಗ 8-10 ಮಂದಿ ರಸ್ತೆಯಲ್ಲೆ ನಮಾಜ್ ಮಾಡಿದ ವಿಡಿಯೋ ವೊಂದು ವೈರಲ್ ಆಗಿತ್ತು. ರಸ್ತೆಯಲ್ಲಿ ನಮಾಜ್ ಮಾಡಿದಕ್ಕೆ ಆಕ್ಷೇಪಿಸಿ ಹಿಂದೂತ್ವಾವದಿ ಸಂಘಟನೆಗಳು ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು . ಇದಾಗಿ 4 ದಿನಗಳ ಬಳಿಕ ಕದ್ರಿ ಠಾಣೆಯಲ್ಲಿ ನಮಾಜ್ ಮಾಡಿದವರ ವಿರುದ್ದ ಪೊಲೀಸರು ಸುಮೋಟೊ ಪ್ರಕರಣ (ಐಪಿಸಿ ಸೆಕ್ಷನ್ 341,283,143,149) ದಾಖಲಿಸಿಕೊಂಡಿದ್ದರು.
ಪೊಲೀಸರ ನಿಲುವಿಗೆ ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರು, ಕಾಂಗ್ರೆಸ್ ಪಕ್ಷದಲ್ಲಿರುವ ಅಲ್ಪ ಸಂಖ್ಯಾತ ಮುಖಂಡರು , ರಾಜ್ಯದ ಪ್ರಗತಿಪರ ಸಂಘಟನೆಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು . ಅಲ್ಲದೇ ಪ್ರಕರಣ ವಾಪಸ್ಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದರು. ತಪ್ಪಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದರು. ಮುಂದುವರಿದು, ಕಂಕನಾಡಿಯ ರಹ್ಮಾನೀಯ ಮಸೀದಿಯ ಸಮಿತಿಯವರು, ಮಸೀದಿ ಮುಂಭಾಗ ಸೆಕ್ಯೂರಿಟಿ ಗಾರ್ಡ್ ನೇಮಿಸುವ ಮೂಲಕ ಮುಂದೆ ಹೀಗಾಗದಂತೆ ನೋಡಿಕೊಳ್ಳುವ ಭರವಸೆಯನ್ನು ನೀಡಿದ್ದರು.

ಇಷ್ಟೆಲ್ಲಾ ವಿದ್ಯಮಾನಗಳು ಜರುಗಿದ ಬಳಿಕ, ಸಂಚಾರಕ್ಕೆ ಅಡೆತಡೆ ಮಾಡುವ ಉದ್ದೇಶ ಇಲ್ಲದೆ ನಮಾಜ್ ಮಾಡಿರುವುದರಿಂದ ಈ ಪ್ರಕರಣ ದಲ್ಲಿ ನ್ಯಾಯಾಲಯಕ್ಕೆ ‘ಬಿ ರಿಪೋರ್ಟ್’ ಸಲ್ಲಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾದ್ಯಮ ಪ್ರಕಟನೆ ಹೊರಡಿಸಿದ್ದಾರೆ. ಕದ್ರಿಯ ನಗರ ಪೂರ್ವ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸೋಮಶೇಖರ್ ಅವರಿಗೆ ಕಡ್ಡಾಯ ರಜೆ ನೀಡಲಾಗಿದೆ.

ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇರೆಗೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜ್ ಬಗ್ಗೆ ಸಂಬಂಧಪಟ್ಟ ವರಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ಬಜರಂಗದಳವು ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪೋಸ್ಟ್ ಮಾಡಲಾಗಿದೆ. ಇದು ಜನರಲ್ಲಿ ದ್ವೇಷ ಭಾವನೆ ಬಿತ್ತುವ ಮತ್ತು ಕಾನೂನು ಕೈಗೆತ್ತಿಗೊಳ್ಳುವ ಬೆದರಿಕೆ ಹಾಗೂ ಸಮಾಜದಲ್ಲಿ ಭಯ ಉಂಟುಮಾಡುವ ಪೋಸ್ಟ್ ಆಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಈ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಹೋರಾಟ ಪಂಪ್ ವೆಲ್

‘ಮುಸ್ಲಿಂ ಸಂಘಟನೆಯ ಒತ್ತಡಕ್ಕೆ ಮಣಿದು, ಬಿ ವರದಿ ಸಲ್ಲಿಸಿದ್ದು ಸರಿಯಲ್ಲ’ ಎಂದು ವಿಎಚ್ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡುವುದಾಗಿ ಹೇಳಿದ್ದಾರೆ.
ಮಂಗಳೂರು
Farmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.) ಆಗ್ರಹಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಸಯ್ಯದ್ ಹಸನ್ ಅವರು ಒತ್ತಾಯ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.) ಆಗ್ರಹಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಸಯ್ಯದ್ ಹಸನ್ ಅವರು ಒತ್ತಾಯ ವ್ಯಕ್ತಪಡಿಸಿದ್ದಾರೆ.
ಕೋಳಿ ಫಾರಂಗಳ ನೊಣಗಳ ಸಮಸ್ಯೆಗೆ ಕಂಪನಿಗಳೇ ಹೊಣೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಕೋಳಿ ಸಾಕಾಣಿಕೆ ಕೇಂದ್ರಗಳಿಂದ ನೊಣಗಳ ಕಾಟ ಹೆಚ್ಚಾಗಿದ್ದು, ಕೋಳಿ ಸಾಕಾಣಿಕೆ ರೈತರ ಜೊತೆಗೆ ಸುತ್ತಮುತ್ತಲಿನ ಸಾರ್ವಜನಿಕರೂ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದರೂ, ಸಂಬಂಧಪಟ್ಟ ಕಂಪನಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಒಕ್ಕೂಟ ಆರೋಪಿಸಿದೆ.
ಕೋಳಿ ಸಾಕಾಣಿಕೆ ರೈತರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಂತೆ ಕಂಪನಿಗಳೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸಾರ್ವಜನಿಕ ಆರೋಗ್ಯ ಹಾಗೂ ಪರಿಸರದ ಹಿತದೃಷ್ಟಿಯಿಂದ ನೊಣಗಳ ಸಮಸ್ಯೆಯನ್ನು ತಕ್ಷಣ ನಿಯಂತ್ರಿಸಬೇಕು. ಇಲ್ಲದಿದ್ದರೆ ಕಂಪನಿಗಳ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟ ಎಚ್ಚರಿಕೆ ನೀಡಿದೆ.
ಜಿಸಿ ದರ ಹೆಚ್ಚಳಕ್ಕೆ ನ.25ರ ಗಡುವು
ಕೋಳಿ ಸಾಕಾಣಿಕೆಗೆ ಅಗತ್ಯವಿರುವ ವಿದ್ಯುತ್, ಕಾರ್ಮಿಕರ ವೇತನ ಹಾಗೂ ಫಾರಂ ನಿರ್ವಹಣಾ ವೆಚ್ಚಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಆದರೆ, ಇಂಟೆಗ್ರೇಶನ್ ಪದ್ಧತಿಯಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿರುವ ರೈತರಿಗೆ ಕಂಪನಿಗಳು ನೀಡುತ್ತಿರುವ ಜಿಸಿ ದರ ಸಮರ್ಪಕವಾಗಿಲ್ಲ ಎಂದು ಒಕ್ಕೂಟ ತಿಳಿಸಿದೆ.
ರೈತರಿಗೆ ಕನಿಷ್ಠ ₹10 ಜಿಸಿ ದರ ನೀಡುವಂತೆ ಸುಮಾರು ಆರು ತಿಂಗಳ ಹಿಂದೆಯೇ ಸರ್ಕಾರ ಕಂಪನಿಗಳಿಗೆ ಸೂಚನೆ ನೀಡಿದ್ದರೂ, ಹಲವು ಕಂಪನಿಗಳು ಈ ಆದೇಶವನ್ನು ಜಾರಿಗೆ ತಂದಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿ ಹಾಗೂ ಬೆಂಗಳೂರು ಗ್ರಾಮಾಂತರ ರಾಜ್ಯ ಸಮಿತಿಯು ಕಂಪನಿಗಳಿಗೆ ಗಡುವು ನೀಡಿದೆ.
ನ.25ರಿಂದ ಕೋಳಿ ಮರಿಗಳ ಸ್ವೀಕಾರ ಸ್ಥಗಿತಗೊಳಿಸುವ ಎಚ್ಚರಿಕೆ
ನವೆಂಬರ್ 25ರೊಳಗೆ ಜಿಸಿ ದರ ಹೆಚ್ಚಳದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ, ಅಂದಿನಿಂದ ಹೊಸ ಕೋಳಿ ಮರಿಗಳನ್ನು ಸಾಕಾಣಿಕೆ ಕೇಂದ್ರಗಳಿಗೆ ಸ್ವೀಕರಿಸದಿರುವುದು ಹಾಗೂ ಈಗಾಗಲೇ ಸಾಕಾಣಿಕೆಯಲ್ಲಿರುವ ಕೋಳಿಗಳನ್ನು ಮಾರಾಟಕ್ಕೆ ನೀಡದೆ ಹೋರಾಟ ನಡೆಸಲು ರಾಜ್ಯ ಸಮಿತಿ ನಿರ್ಧರಿಸಿದೆ. ಅಲ್ಲದೆ, ನವೆಂಬರ್ 25ರಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಈ ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಕೋಳಿ ಸಾಕಾಣಿಕೆ ರೈತರ ಪರವಾಗಿ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ಸಂಪೂರ್ಣ ಬೆಂಬಲ ಘೋಷಿಸಿದೆ. ಜಿಲ್ಲೆಯ ಎಲ್ಲಾ ಕೋಳಿ ಸಾಕಾಣಿಕೆ ರೈತರು ಒಗ್ಗಟ್ಟಿನಿಂದ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದೆ.
ರೈತರ ಶ್ರಮಕ್ಕೆ ನ್ಯಾಯಯುತ ಬೆಲೆ ದೊರೆಯಬೇಕು, ರೈತರ ಬದುಕು ಉಳಿಯಬೇಕು ಹಾಗೂ ಕೋಳಿ ಸಾಕಾಣಿಕೆ ಉದ್ಯಮದಲ್ಲಿ ರೈತರಿಗೆ ಗೌರವಯುತ ಸ್ಥಾನಮಾನ ಸಿಗಬೇಕು ಎಂಬುದು ಒಕ್ಕೂಟದ ಪ್ರಮುಖ ಆಶಯವಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಿ.ಕೆ., ಕೋಶಾಧಿಕಾರಿ ಕೇಶವ ಕೊಯ್ದು ಹಾಗೂ ಇತರರು ಉಪಸ್ಥಿತರಿದ್ದರು.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್ನ 30 ಕ್ಯಾನ್ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್ಗಳು.
- ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
ಶಿಕ್ಷಣ
Sahyadri-ಸಹ್ಯಾದ್ರಿ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ‘DevHack 2026’ ಯಶಸ್ವಿ ಸಮಾರೋಪ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಸಹ್ಯಾದ್ರಿ ಓಪನ್ ಸೋರ್ಸ್ ಕಮ್ಯುನಿಟಿ (SOSC) ವತಿಯಿಂದ ಆಯೋಜಿಸಲಾದ EG DevHost 2026ರ ಪ್ರಮುಖ 36 ಗಂಟೆಗಳ ಹ್ಯಾಕಥಾನ್ ‘DevHack 2026’ ಶನಿವಾರ ನಡೆದ ಅದ್ಧೂರಿ ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಮಂಗಳೂರು, ನ. 14: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಸಹ್ಯಾದ್ರಿ ಓಪನ್ ಸೋರ್ಸ್ ಕಮ್ಯುನಿಟಿ (SOSC) ವತಿಯಿಂದ ಆಯೋಜಿಸಲಾದ EG DevHost 2026ರ ಪ್ರಮುಖ 36 ಗಂಟೆಗಳ ಹ್ಯಾಕಥಾನ್ ‘DevHack 2026’ ಶನಿವಾರ ನಡೆದ ಅದ್ಧೂರಿ ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಈ ಕಾರ್ಯಕ್ರಮಕ್ಕೆ ದೇಶಾದ್ಯಂತ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 1,300ಕ್ಕೂ ಹೆಚ್ಚು ವೈಯಕ್ತಿಕ ನೋಂದಣಿಗಳು ಹಾಗೂ 444ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು. ಕರ್ನಾಟಕದಿಂದ 383 ತಂಡಗಳು, ತಮಿಳುನಾಡಿನಿಂದ 17, ಕೇರಳದಿಂದ 9, ಮಹಾರಾಷ್ಟ್ರದಿಂದ 7, ಗೋವಾ ಮತ್ತು ಉತ್ತರ ಪ್ರದೇಶಗಳಿಂದ ತಲಾ 3, ಉತ್ತರಾಖಂಡ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಜಾರ್ಖಂಡ್ಗಳಿಂದ ತಲಾ 2 ತಂಡಗಳು ಹಾಗೂ ಬಿಹಾರ, ದೆಹಲಿ, ಹರಿಯಾಣ, ಒಡಿಶಾ ಮತ್ತು ಪಂಜಾಬ್ನಿಂದ ತಲಾ ಒಂದು ತಂಡ ನೋಂದಾಯಿಸಿಕೊಂಡಿದ್ದವು. ಆರಂಭಿಕ ಆಯ್ಕೆ ಸುತ್ತಿನಲ್ಲಿ 350 ತಂಡಗಳು ತಮ್ಮ ಯೋಜನಾ ಪ್ರಸ್ತಾವನೆಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ಅತ್ಯುತ್ತಮ 30 ತಂಡಗಳನ್ನು ಕಾಲೇಜು ಆವರಣದಲ್ಲಿ ನಡೆದ ಅಂತಿಮ ಹಂತದ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು.

ನವೆಂಬರ್ 12ರಂದು ನಡೆದ ಉದ್ಘಾಟನಾ ಸಮಾರಂಭದೊಂದಿಗೆ ಹ್ಯಾಕಥಾನ್ಗೆ ಚಾಲನೆ ನೀಡಲಾಯಿತು. NVIDIA ಸಂಸ್ಥೆಯ New Age Technologies ವಿಭಾಗದ ಸಹಾಯಕ ಉಪಾಧ್ಯಕ್ಷರಾದ ಡಾ. ಸಂಪತ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ EG India ಸಂಸ್ಥೆಯ Principal Data Scientist ಹಾಗೂ Data & AI ವಿಭಾಗದ ಹಿರಿಯ ವ್ಯವಸ್ಥಾಪಕರಾದ ಡಾ. ಪ್ರಕ್ಯಾತ್ ರೈ, NinetronTech ಸಂಸ್ಥೆಯ ಸಹ-ಸಂಸ್ಥಾಪಕ ಮತ್ತು CEO ಅಬ್ದುಲ್ ಶಮೀರ್, ಸಹ್ಯಾದ್ರಿ ಕಾಲೇಜಿನ ಟ್ರಸ್ಟಿ ಹಾಗೂ ಆಡಳಿತಾಧಿಕಾರಿ ಕೃಷ್ಣ ಹೆಗ್ಡೆ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಾಗನೇರಿ ಉಪಸ್ಥಿತರಿದ್ದರು.
ಈ 36 ಗಂಟೆಗಳ ನಿರಂತರ ಕೋಡಿಂಗ್ ಸ್ಪರ್ಧೆಯಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ 30 ತಂಡಗಳು EG India ಸಂಸ್ಥೆಯು ರೂಪಿಸಿದ್ದ ಉದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಏಳು ಸಮಸ್ಯೆಗಳಿಗೆ ಪ್ರಾಯೋಗಿಕ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಸವಾಲನ್ನು ಎದುರಿಸಿದವು. AI ಏಜೆಂಟ್ಗಳು, ಮಾಧ್ಯಮಗಳ ಸತ್ಯಾಸತ್ಯತೆ ಪರಿಶೀಲನೆ, ವಿಪತ್ತು ಪರಿಹಾರ ಕಾರ್ಯಗಳು ಹಾಗೂ ಆರೋಗ್ಯ ದಾಖಲೆಗಳ ನಿರ್ವಹಣೆ ಸೇರಿದಂತೆ ಮಹತ್ವದ ಕ್ಷೇತ್ರಗಳನ್ನು ಒಳಗೊಂಡ ಈ ಹ್ಯಾಕಥಾನ್ನಲ್ಲಿ ಮೂರು ದಿನಗಳ ಕಾಲ ತೀವ್ರ ಸ್ಪರ್ಧೆ, ತಂಡದ ಸಹಯೋಗ, ಮಾದರಿ ಉತ್ಪನ್ನಗಳ ಅಭಿವೃದ್ಧಿ ಹಾಗೂ ತಜ್ಞರ ಮಾರ್ಗದರ್ಶನ ನಡೆಯಿತು.

ಎರಡು ಹಂತಗಳ ಕಠಿಣ ಮೌಲ್ಯಮಾಪನದ ಬಳಿಕ ಆಯ್ಕೆಯಾದ ಎಂಟು ಅತ್ಯುತ್ತಮ ತಂಡಗಳು ಅಂತಿಮ ಸುತ್ತಿನಲ್ಲಿ ಉದ್ಯಮ ಕ್ಷೇತ್ರದ ತಜ್ಞರ ಸಮಿತಿಯ ಮುಂದೆ ತಾವು ಅಭಿವೃದ್ಧಿಪಡಿಸಿದ ಕಾರ್ಯನಿರ್ವಹಣಾ ಮಾದರಿಗಳನ್ನು ಪ್ರಸ್ತುತಪಡಿಸಿದವು. ತಾಂತ್ರಿಕ ಅನುಷ್ಠಾನ, ನಾವೀನ್ಯತೆ ಹಾಗೂ ನೈಜ ಜಗತ್ತಿನಲ್ಲಿ ಅವುಗಳ ಬಳಕೆಯ ಸಾಧ್ಯತೆಗಳನ್ನು ಆಧರಿಸಿ ವಿಜೇತರನ್ನು ಆಯ್ಕೆ ಮಾಡಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ Team Horizon ಪ್ರಥಮ ಸ್ಥಾನ ಪಡೆದು ₹50,000 ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು. ಮಂಗಳೂರಿನ St. Joseph Engineering Collegeನ Team Black Lotus ₹30,000 ನಗದು ಬಹುಮಾನದೊಂದಿಗೆ ದ್ವಿತೀಯ ಸ್ಥಾನ ಗಳಿಸಿತು. ಚೆನ್ನೈನ SRM Institute of Science and Technologyನ Team Cantina ₹20,000 ನಗದು ಬಹುಮಾನದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿತು.
ಸಮಾರೋಪ ಸಮಾರಂಭದಲ್ಲಿ ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು. EG India ಸಂಸ್ಥೆಯ R&D Digital Welfare ವಿಭಾಗದ ಅಮಿತಾ ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. EG India ಸಂಸ್ಥೆಯ R&D, Retail & Supply Chain ವಿಭಾಗದ ತಂಡದ ವ್ಯವಸ್ಥಾಪಕರಾದ ಗಗನ್ ಸಾಗರ್, ACIC Sahyadri Foundationನ CEO ದಿನು ಆನಂದ್, WiZdom Ed ಸಂಸ್ಥೆಯ Application and Operations ವಿಭಾಗದ ಮುಖ್ಯಸ್ಥರಾದ ಶವನ್ ಸಾಲ್ಯಾನ್ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಶೈಕ್ಷಣಿಕ ವಿಭಾಗದ ಡೀನ್ ಡಾ. ಶಮಂತ್ ರೈ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಗಣ್ಯರು ವಿಜೇತ ತಂಡಗಳಿಗೆ ನಗದು ಬಹುಮಾನಗಳನ್ನು ವಿತರಿಸಿ ಗೌರವಿಸಿದರು. ಹ್ಯಾಕಥಾನ್ ಯಶಸ್ವಿಯಾಗಿ ನಡೆಯಲು ಶ್ರಮಿಸಿದ ತೀರ್ಪುಗಾರರು, ಮಾರ್ಗದರ್ಶಕರು ಹಾಗೂ ಶೀರ್ಷಿಕೆ ಪ್ರಾಯೋಜಕರಾದ EG India ಮತ್ತು ಸಹ ಪ್ರಾಯೋಜಕರಾದ Winman, ACIC Sahyadri ಹಾಗೂ WiZdom Ed ಸಂಸ್ಥೆಗಳ ಕೊಡುಗೆಯನ್ನು ಗಣ್ಯರು ಶ್ಲಾಘಿಸಿದರು.
ರಾಷ್ಟ್ರೀಯ ಮಟ್ಟದ ಈ ಹ್ಯಾಕಥಾನ್ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ, ನಾವೀನ್ಯತೆಯ ಚಿಂತನೆ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಿರುವ ಪ್ರಾಯೋಗಿಕ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಪ್ರತಿಭೆಗೆ ಉತ್ತಮ ವೇದಿಕೆಯಾಯಿತು.
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್11 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ17 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು19 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized18 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್20 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ18 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್18 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















