ಪುತ್ತೂರು
Raghupathi Bhat | ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ : ಡಾ.ಪ್ರಸಾದ್ ಭಂಡಾರಿ ಭೇಟಿ..!
ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ (Raghupathi Bhat) ಪುತ್ತೂರಿನಲ್ಲಿ ಇಂದು ಮತಯಾಚನೆ ನಡೆಸಿದ್ದಾರೆ. ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಮತಯಾಚನೆ ಪ್ರಾರಂಭಿಸಿದ್ದಾರೆ.
ದೇವಸ್ಥಾನದಲ್ಲಿ ಹಿಂದೂ ಮುಖಂಡ ಡಾ.ಪ್ರಸಾದ್ ಭಂಡಾರಿಯನ್ನು ಭೇಟಿ ಮಾಡಿದರು. ರಘುಪತಿ ಭಟ್ ಜೊತೆ ರಾಜರಾಮ್ ಭಟ್ , ನವೀನ್ ಕುಲಾಲ್ ಹಾಗೂ ಇತರರು ಜೊತೆಗಿದ್ದರು.
ಪುತ್ತೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತಯಾಚಿಸಲಿದ್ದಾರೆ.
ಶಿಕ್ಷಣ
Philomena-ಸಾಂಸ್ಕೃತಿಕ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಸೃಜನಾ ಪಿ.ಸಿ. ರಾಜ್ಯ ಮಟ್ಟಕ್ಕೆ ಆಯ್ಕೆ
ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಸಹಯೋಗದಲ್ಲಿ ಗೋವಿಂದ ದಾಸ ಪದವಿ ಪೂರ್ವ ಕಾಲೇಜು ಸುರತ್ಕಲ್ ಆಯೋಜಿಸಿದ ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ
ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಕಾಲೇಜಿನ ಆವರಣದಲ್ಲಿ ನಡೆಯುವ ಈ ಪ್ರದರ್ಶನದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಯಾರಿಸಿದ ನವೀನ ವಿನ್ಯಾಸದ
ವಿವಿಧ ಪ್ರಾಜೆಕ್ಟ್ಗಳು ಪ್ರದರ್ಶಿಸಲ್ಪಡುತ್ತವೆ.
ಕಂಪ್ಯೂಟರ್ ಸೈನ್ಸ್, ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್, ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಗಳ ಹೊಸ ಹೊಸ ಯೋಜನೆಗಳ ಮಾದರಿಗಳನ್ನು ಪ್ರದರ್ಶನಕ್ಕೆ ಸಿದ್ದಗೊಳಿಸಲಾಗಿದೆ.
ಆಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ24 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ24 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ2 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ

















