ಉಡುಪಿ
Raghupathi Bhat-ಶಾಸಕನಾದ ಸಂದರ್ಭ ನಾನು ಮಾಡಿದ ಕೆಲಸವನ್ನು ಕ್ರಾಸ್ ಚೆಕ್ ಮಾಡಿ ಮತದಾನ ಮಾಡಿ – ಶಾಸಕತ್ವದ ಅವಧಿಯ ಕೆಲಸದ ಆಧಾರದಲ್ಲಿ ಮತ ಕೇಳುತ್ತೇನೆ : ರಘುಪತಿ ಭಟ್
ಪುತ್ತೂರು: ಪಕ್ಷದ ಬಕೇಟ್ ಸಂಸ್ಕೃತಿ, ಗಾಡ್ ಫಾದರ್ ಸಂಸ್ಕೃತಿಯ ಪ್ರತಿಫಲವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಾಡಿದ್ದೆಲ್ಲವನ್ನೂ ಒಪ್ಪುವುದಕ್ಕೆ ಆಗುವುದಿಲ್ಲ ಎಂಬ ಸ್ಪಷ್ಠತೆಯಲ್ಲೇ ಸ್ಪರ್ಧೆಗೆ ಮುಂದಾಗಿದ್ದೇನೆ. ಬಿಜೆಪಿ ಕಾರ್ಯಕರ್ತರಲ್ಲಿರುವ ಆಕ್ರೋಶ, ನನಗೆ ಬೆಂಬಲವಾಗಿ ಪರಿಣಮಿಸಿದೆ. ವಿಧಾನ ಪರಿಷತ್ ಸದಸ್ಯನಾದ ಬಳಿಕ ಬಿಜೆಪಿ ಪಕ್ಷಕ್ಕೆ ತೆಗೆದುಕೊಳ್ಳುತ್ತಾರಾ ಗೊತ್ತಿಲ್ಲ. ಆದರೆ ನಿಲುವುಗಳು ಬಿಜೆಪಿ ಪಕ್ಷದ ಜತೆಗೆ ಇರುತ್ತದೆ. ಹಿಂದುತ್ವ ಬಿಟ್ಟು ಬೇರೆ ನಿಲುವಿಲ್ಲ. ಪದವೀಧರ ಮತದಾರರು ಈ ಹಿಂದೆ ಶಾಸಕನಾಗಿದ್ದ ಸಮಯದಲ್ಲಿ ಮಾಡಿದ ಕೆಲಸವನ್ನು ಅಡ್ಡ ಪರಿಶೀಲನೆ ಮಾಡಿ ಮತದಾನ ಮಾಡಿ, ವಿಧಾನಪರಿಷತ್ ಗೆ ಅವಕಾಶ ಕೊಡಿ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹೇಳಿದರು.
5 ಜಿಲ್ಲೆ ಮತ್ತು 3 ತಾಲೂಕು ಪ್ರವಾಸ ಮಾಡಿ ನಮ್ಮ ಕಾರ್ಯಕರ್ತರನ್ನು ಸಂಪರ್ಕಿಸಿದ್ದೇನೆ. ಎಲ್ಲಾ ಕ್ಷೇತ್ರಕ್ಕೆ ಸಾಧ್ಯವಾದಷ್ಟು ಮಟ್ಟಿಗೆ ಬೇಟಿ ನೀಡಿದ್ದು, ಎಲ್ಲರಿಂದ ಉತ್ತಮ ಸ್ಪಂದನೆ ಲಭಿಸಿದೆ. ನಾನು ಯಾರ ವಿರುದ್ದವೂ ಮಾತನಾಡುವುದಿಲ್ಲ. ನಾನು ವಿಧಾನಪರಿಷತ್ ನಲ್ಲಿ ಕೆಲಸ ಮಾಡಬೇಕು ಅಷ್ಟೆ. ಒಟ್ಟಿನಲ್ಲಿ ಆಯ್ಕೆ ತಪ್ಪಿದ್ದು ಬೇಸರವಲ್ಲ. ಆಯ್ಕೆ ಪ್ರಕ್ರಿಯೆ ಸೂತ್ರಗಳು ಸರಿಯಾಗಿಲ್ಲ. ಪಕ್ಷ ಯಾಕೆ ಹೀಗಾಗಿದೆ ಎಂಬುದಕ್ಕೆ ಉತ್ತರ ಸಿಕ್ಕಿಲ್ಲ. ಹಿಂದೆ ಸ್ಥಾನೀಯ ಸಮಿತಿಯಿಂದ ಅಭಿಪ್ರಾಯ ಸಂಗ್ರಹಗಳು ನಡೆದು ಬಳಿಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು. ಈಗ ಬಿಜೆಪಿಯ ಸಂಸ್ಕೃತಿಯೇ ಹೋಗಿದೆ. ಬೂತ್ ಮಟ್ಟದ ಕಾರ್ಯಕರ್ತರನ್ನು ಕೇಳಿ ಅಭ್ಯರ್ಥಿ ಮಾಡುವುದೇ ಇಲ್ಲ. ರಾಜ್ಯದವರು ಒಂದು ಹೆಸರು ನೀಡಿದರೆ, ಕೇಂದ್ರದಿಂದ ಬೇರೆ ಹೆಸರಾಗಿ ಬರುತ್ತದೆ. ಇದರಿಂದ ರಾಷ್ಟ್ರೀಯ ವಾಧಿ, ಹಿಂದುತ್ವದ, ಬಿಜೆಪಿಯ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಇದನ್ನು ಶುದ್ದೀಕರಣ ಮಾಡಬೇಕು ಎಂಬುದನ್ನು ನಾವು ಹೇಳುತ್ತಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಸಕನಾದ ಸಂದರ್ಭದಲ್ಲಿ ಕರಾವಳಿಯ ವಿವಿಧ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿದ್ದೇನೆ. ಅಡಿಕೆ ಬೆಳೆಗಾರರ ಸಮಸ್ಯೆ, ಮೀನುಗಾರರ ಸಮಸ್ಯೆ ಸೇರಿ ಕರಾವಳಿಯ ಸಮಸ್ಯೆಗಳ ಬಗ್ಗೆ ಅರಿವಿದೆ. ಮಲೆನಾಡಿನ ಭಾಗದ ಸಮಸ್ಯೆಗಳ ಅಧ್ಯಯನ ಮಾಡಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಪಕ್ಷದಲ್ಲಿ ಎಲ್ಲರೂ ಉಚ್ಛಾಟನೆಯಾದವರೇ, ಬ್ರಷ್ಟಾಚಾರದ ಆರೋಪ ಮಾಡಿದವರಿಗೆ ನೋಟೀಸೇ ನೀಡಿಲ್ಲ. ಅಡ್ಡ ಮತದಾನ ಮಾಡಿದವರಿಗೆ ಕ್ರಮ ಇಲ್ಲ. ಹಾಗಾಗಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದರ ಬಗ್ಗೆ ತಲೆಕೆಡಿಸಿಕೊಳ್ಳದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಉಚ್ಛಾಟನೆ ಮಾಡಲು ನಾನು ಪಕ್ಷದಲ್ಲಿ ಏನೂ ಅಲ್ಲ. ನಾನು ಮಾಜಿ ಶಾಸಕ ಮಾತ್ರ. ಇದನ್ನು ಉಚ್ಛಾಟನೆ ಮಾಡಲಾಗುತ್ತಾ? ಸಾಮಾನ್ಯ ಕಾರ್ಯಕರ್ತನನ್ನು ಉಚ್ಛಾಟನೆ ಮಾಡಲಾಗುತ್ತಾ ಇಲ್ಲವಲ್ಲಾ. ಎಲೆಕ್ಟ್ರೋ ಪಾಲಿಟಿಕ್ಸ್ ನಲ್ಲಿ ಇರಬೇಕಾ ಎಂಬುದಕ್ಕೆ ಇದು ಒಂದು ಅವಕಾಶವಾಗಿದೆ. ಇದಾದ ಬಳಿಕ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಹೇಳಿದರು.
ರಾಜಾರಾಮ ಭಟ್, ಮಹಾನಗರ ಪಾಲಿಕೆ ಮಂಗಳೂರು ಮಾಜಿ ಕಾರ್ಪರೇಟರ್ ನವೀನ್ ಚಂದ್ರ ಕೆ., ಸಂತೋಷ್ ರಾವ್, ನವೀನ್ ಕುಲಾಲ್, ಸುವರ್ದನ್ ನಾಯಕ್ ಉಪಸ್ಥಿತರಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ24 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ24 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ2 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















