Connect with us

ಮಂಗಳೂರು

Captain Brijesh Chowta-ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಪೋಲಿಸ್ ಇಲಾಖೆಗೆ ಸ್ವತಂತ್ರ ಇಲ್ಲದಾಗಿದೆ :ಕ್ಯಾಪ್ಟನ್ ಬ್ರಿಜೇಶ್ ಚೌಟ

Published

on



Ad Widget

Ad Widget

Ad Widget

Ad Widget

ಮಂಗಳೂರು : ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಕಂಕನಾಡಿಯಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿರುವುದರ ಕುರಿತು ಮಾತನಾಡಿ, ಸಾರ್ವಜನಿಕ ರಸ್ತೆಯಲ್ಲಿ ನಮಾಝ್ ಮಾಡಿ ವಾಹನ ಹಾಗೂ ಜನ ಸಂಚಾರಕ್ಕೆ ಅಡ್ಡಿಪಡಿಸಿರುವುದಲ್ಲದೇ ಈ ಬಗ್ಗೆ ಪ್ರಶ್ನಿಸಿದ ಶರಣ್ ಪಂಪುವೆಲ್ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

Ad Widget

Ad Widget

Ad Widget

Ad Widget

ಜನ ಸಂಚಾರಕ್ಕೆ ತೊಂದರೆ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕದ್ರಿ ಠಾಣಾ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣ ಮಾಡುವ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೇಲೆ ಒತ್ತಡವನ್ನು ಹಾಕಿ ಕೇಸನ್ನು ಹಿಂಪಡೆದುಕೊಂಡಿರುವುದು ದುರಂತ. ಅಲ್ಲದೆ ಸುಮೊಟೊ ಪ್ರಕರಣವನ್ನು ದಾಖಲಿಸಿದ ಪೊಲೀಸ್ ಅಧಿಕಾರಿಯನ್ನು ರಜೆಯಲ್ಲಿ ಕಳುಹಿಸುವ ಮೂಲಕ ಪೊಲೀಸರ ಮನೋಸ್ಥೈರ್ಯವನ್ನು ಕುಗ್ಗಿಸುವಂತ ಕೆಲಸವನ್ನು   ಕಾಂಗ್ರೆಸ್ ದುರಾಡಳಿತ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ನಮಾಜ್ ಘಟನೆಯನ್ನು ಪ್ರಶ್ನಿಸಿದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪುವೆಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ, ಅಲ್ಪಸಂಖ್ಯಾತರನ್ನು ಖುಷಿಪಡಿಸಿ ತನ್ನ ವೋಟ್ ಬ್ಯಾಂಕ್ ನ್ನು ಗಟ್ಟಿಗೊಳಿಸಲು ಕಾಂಗ್ರೆಸ್ ಹೊರಟಂತಿದೆ.

Ad Widget

Ad Widget <> Ad Widget

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಪೋಲಿಸ್ ಇಲಾಖೆಗೆ ಸ್ವತಂತ್ರ ಇಲ್ಲದಾಗಿದೆ. ಪೊಲೀಸರು ಯಾವುದೇ ಕೆಲಸವನ್ನು ಮಾಡಬೇಕಿದ್ದರೂ ಕಾಂಗ್ರೆಸ್ ಸರಕಾರದ ಅನುಮತಿಯನ್ನು ಪಡೆದು ಮಾಡಬೇಕು ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಈ ರೀತಿಯ ಬೆಳವಣಿಗೆಯಿಂದ ರಾಜ್ಯದಲ್ಲಿ ಅಶಾಂತಿ ನಿರ್ಮಾಣಕ್ಕೆ ಕಾರಣವಾಗಿದೆ. ಸದಾ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿಕೊಂಡಿರುವ ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಕಟು ಶಬ್ದಗಳಿಂದ ಖಂಡಿಸುತ್ತೇನೆ ಎಂದು  ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಹೇಳಿದ್ದಾರೆ.



Ad Widget
Ad Widget
Click to comment

Leave a Reply

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading