Connect with us

ಶಿಕ್ಷಣ

Student bus pass-ವಿದ್ಯಾರ್ಥಿ ಬಸ್ ಪಾಸ್; ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Published

on

Ad Widget

Ad Widget

Ad Widget

Ad Widget

ಬೆಂಗಳೂರು, ಜೂ.01: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದೆ. ನಿಗಮ 10 ತಿಂಗಳ ಪಾಸ್ ದರ ನಿಗದಿ ಮಾಡಿದೆ.

Ad Widget

Ad Widget

Ad Widget

Ad Widget

ಪಾಸ್ ದರ ಪಟ್ಟಿ :
ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂ.
ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್​ ದರ – 150 ರೂ.
ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂ.
ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂ.
ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.
ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ.

Ad Widget

Ad Widget alt="Ad Widget"/>

Ad Widget

ಈ ಪಾಸ್​ಗಳನ್ನು ಪಡೆಯಲು ಆನ್​ ಲೈನ್​ನಲ್ಲೇ ಅರ್ಜಿ ಸಲ್ಲಿಸಬೇಕು.

Ad Widget

Ad Widget <> Ad Widget

ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices

ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹು. ಆನ್​ ಲೈನ್ ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

Ad Widget

Ad Widget

ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಪಡೆಯುತ್ತಾರೆ.

ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್​​ಸೈಟ್​ನಲ್ಲಿ (https://ksrtc.karnataka.gov.in/studentpass) ಡೌನ್​ಲೋಡ್​​ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.

ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹು.

ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹು.

ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​ ವಿಳಾಸ: https://ksrtc.karnataka.gov.in

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!