Connect with us

ರಾಷ್ಟ್ರೀಯ

ಎಕ್ಸಿಟ್ ಪೋಲ್ ಫಲಿತಾಂಶ ಬಹಿರಂಗ – ನರೇಂದ್ರ ಮೋದಿಗೆ ಹ್ಯಾಟ್ರಿಕ್ ಗೆಲುವು ನಿಶ್ಚಿತ – ಕರ್ನಾಟಕದಲ್ಲಿ ಏನಾಗಲಿದೆ ಗೊತ್ತೇ ?

Published

on



Ad Widget

Ad Widget

Ad Widget

Ad Widget

ದೇಶದಲ್ಲಿ 7 ನೇ ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಗಳು ಮುಗಿದಿದ್ದು, ಹಲವು ಸಮೀಕ್ಷಾ ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಈವರೆಗೆ ಬಂದಿರುವ 4 ಸಮೀಕ್ಷೆಗಳ ಪ್ರಕಾರ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲವು ಸಾಧಿಸಲಿದೆ. ಅದು ಅಲ್ಲದೇ ಸ್ವತಂತ್ರವಾಗಿ 272ರ ಮ್ಯಾಜಿಕ್ ಸಂಖ್ಯೆಯನ್ನೂ ಕೊಡ ದಾಟಲಿದೆ.

Ad Widget

Ad Widget

Ad Widget

Ad Widget

ಪೋಲ್ ಆಫ್ ಪೋಲ್ ಪ್ರಕಾರ ಬಿಜೆಪಿ ನೇತೃತ್ವದ ಎನ್ಡಿಎ ಭರ್ಜರಿ 365 ಸ್ಥಾನಗಳನ್ನು ಗೆಲ್ಲಲಿದೆ. ಇದು ನಿಜವಾದರೇ ಕಳೆದ ಬಾರಿಗಿಂತಲೂ ಉತ್ತಮ ಫಲಿತಾಂಶ NDAಗೆ ಸಿಗಲಿದೆ. ಕಾಂಗ್ರೆಸ್ ನೇತೃತ್ವದ ಐಎನ್ಡಿಐಎ 142 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದ್ದು, ಇತರರು ಕೇವಲ 36 ಸ್ಥಾನಗಳನ್ನು ಗೆಲ್ಲಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ವಿವಿಧ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ಇಂತಿದೆ:
ಇಂಡಿಯಾ ನ್ಯೂಸ್- ಡಿ ಡೈನಾಮಿಕ್ಸ್ ಪ್ರಕಾರ:
ಎನ್ ಡಿಎ-371
INDIA-125
ಇತರೆ-47
Republic Bharat-P Marq:
ಎನ್ ಡಿಎ -359
INDIA-154
ಇತರೆ-30
Jan Ki Baat
NDA-362-392
INDIA Bloc-141-161
TV5 ತೆಲುಗು
ಎನ್ ಡಿಎ-359
INDIA-154
ಇತರೆ- 30
Republic Bharat-Matrize
ಎನ್ ಡಿಎ-353-368
INDIA-118-133
ಇತರೆ-43-48
Newsnation:
ಎನ್ ಡಿಎ: 342-378
India: 153-169
ಇತರೆ: 21-23
2019ರಲ್ಲಿ ಅಂತಿಮ ಫಲಿತಾಂಶ ಹೊರಬಿದ್ದಾಗ ಬಿಜೆಪಿ 303 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಲ್ಲದೆ ಎನ್ಡಿಎ ಮೈತ್ರಿಕೂಟ 353 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದಿದ್ದಲ್ಲದೆ ಯುಪಿಎ ಮೈತ್ರಿಕೂಟ 91 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಉಳಿದ ಸ್ಥಾನಗಳು ಇತರರ ಪಾಲಾಗಿದ್ದವು.

Ad Widget

Ad Widget <> Ad Widget

Axis My India: ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆ
ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿ 20-22 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಜೆಡಿಎಸ್ ಮೂರು ಸ್ಥಾನ ಗೆಲ್ಲುವ ಸಾಧ್ಯತೆ ಇರುವುದಾಗಿ ಹೇಳಿದೆ. ನೆರೆಯ ಕೇರಳದಲ್ಲಿ ಬಿಜೆಪಿ 2-3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 13-14 ಸ್ಥಾನ, ಆಡಳಿತಾರೂಢ ಎಲ್ಡಿಎಫ್ ಕೇವಲ 1 ಸ್ಥಾನ ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.



Ad Widget

ವಿವಿಧ ಸಮೀಕ್ಷೆಗಳು ತಾವು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳನ್ನು ಶನಿವಾರ ಪ್ರಕಟಿಸಿವೆ. ಇದು ಜೂನ್ 4ರಂದು ಪ್ರಕಟವಾಗಲಿರುವ ನಿಜವಾದ ಫಲಿತಾಂಶಕ್ಕೆ ದಿಕ್ಸೂಚಿಯಷ್ಟೆ. ನೈಜ ಫಲಿತಾಂಶವನ್ನು ಚುನಾವಣಾ ಆಯೋಗ ಮಂಗಳವಾರದಂದು ಪ್ರಕಟಿಸಲಿದೆ. ಅಂದು ಕೇಂದ್ರದಲ್ಲಿ ಯಾವ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಗೊತ್ತಾಗಲಿದೆ.

Click to comment

Leave a Reply

ರಾಷ್ಟ್ರೀಯ

Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ

Published

on



Ad Widget

Ad Widget

Ad Widget

Ad Widget

ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್‌-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.



Ad Widget

ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

Ad Widget

Ad Widget

ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.

Ad Widget
Continue Reading

ಕ್ರೀಡೆ

India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ

Published

on



Ad Widget

Ad Widget

Ad Widget

Ad Widget

ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget

Ad Widget

ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

Ad Widget

Ad Widget <> Ad Widget

ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.



Ad Widget

ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.

ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.

ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.

ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.

ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.

ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.

Ad Widget
Continue Reading

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ

Published

on



Ad Widget

Ad Widget

Ad Widget

Ad Widget

ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್‌ ಬಹಿರಂಗಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾ‌ರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.



Ad Widget

ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget

Ad Widget

ಥಾಮ್ಪನ್ ಹಾಗೂ ಜ್ಞಾನೇಶ್ ಕುಮಾರ್ ಇಬ್ಬರೂ ಕೇರಳಂ ಕೇಡರ್‌ನ ಐಎಎಸ್‌ ಅಧಿಕಾರಿಗಳು. ಥಾಮ್ರನ್ 1980ರ ಹಾಗೂ ಕುಮಾರ್ 1988ರ ಬ್ಯಾಚ್‌ನ ಅಧಿಕಾರಿ. ಕೇರಳಂನ ಲೋಕೋಪಯೋಗಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading