ಅಂತರ ರಾಜ್ಯ
Guarantee Card-ವರ್ಷಕ್ಕೆ ರೂ1 ಲಕ್ಷ ‘ಗ್ಯಾರಂಟಿ ಕಾರ್ಡ್’: ಯುಪಿ ಕಾಂಗ್ರೆಸ್ ಕಚೇರಿ ಮುಂದೆ ಮಹಿಳೆಯರ ಬೃಹತ್ ಸಾಲು
ಲಕ್ನೋ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಳಮಳ ಮೂಡಿಸುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ಗೆ ಸಂಕಟವೊಂದು ಎದುರಾಗಿದೆ. ಚುನಾವಣಾ ಪ್ರಚಾರದ ವೇಳೆ ಪಕ್ಷ ನೀಡಿದ ಭರವಸೆಯನ್ನು ಈಡೇರಿಸುವಂತೆ ಉತ್ತರ ಪ್ರದೇಶದ ಕಾಂಗ್ರೆಸ್ ಕಚೇರಿ ಎದುರು ಗ್ಯಾರೆಂಟಿ ಕಾರ್ಡ್ಗಾಗಿ ಅನೇಕ ಮಹಿಳೆಯರು ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ಈ ಬಾರಿ ಕಾಂಗ್ರೆಸ್ ಗ್ಯಾರೆಂಟಿಗಳನ್ನು ಮುಂದಿಟ್ಟುಕೊಂಡು ಜನರ ಮತವನ್ನು ಕೇಳಿತ್ತು. ‘ಘರ್ ಘರ್ ಗ್ಯಾರಂಟಿ’ ಕಾರ್ಯಕ್ರಮವನ್ನು ಪ್ರಾರಂಭಿಸಿ, ಗ್ಯಾರೆಂಟಿ ಕಾರ್ಡ್ ಗಳನ್ನು ನೀಡುವುದಾಗಿ ಹೇಳಿತ್ತು. ಈ ಗ್ಯಾರೆಂಟಿಗಳಲ್ಲಿ ʼಮಹಾಲಕ್ಷ್ಮೀ ಯೋಜನೆʼಯನ್ನು ಜಾರಿಗೊಳಿಸುವುದಾಗಿ ಹೇಳಿತ್ತು. ಈ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ವರ್ಗಕ್ಕೆ ಸೇರಿದ ಕುಟುಂಬದ ಮಹಿಳೆಗೆಯರ (ಮುಖ್ಯಸ್ಥೆ) ಖಾತೆಗೆ ತಿಂಗಳಿಗೆ 8,500 ರೂ.ಗಳನ್ನು ನೇರವಾಗಿ ಜಮಾ ಮಾಡಲಾಗುವುದು ಎಂದು ಪಕ್ಷವು ಭರವಸೆ ನೀಡಿತ್ತು. ಆ ಮೂಲಕ 1 ಲಕ್ಷ ರೂಪಾಯಿಯನ್ನು ಒಂದು ಕುಟುಂಬದ ಮಹಿಳೆಗೆ ನೀಡುವುದಾಗಿ ಹೇಳಿತ್ತು.
ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ಕಚೇರಿ ಮುಂದೆ ಬಿಸಿಲಿನ ಬೇಗೆಯನ್ನು ಲೆಕ್ಕಿಸದೆ ಮಹಿಳೆಯರು ಗ್ಯಾರೆಂಟಿ ಕಾರ್ಡ್ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇವರಲ್ಲಿ ಕೆಲವು ಮಹಿಳೆಯರು ‘ಗ್ಯಾರಂಟಿ ಕಾರ್ಡ್’ಗೆ ಬೇಡಿಕೆ ಇಟ್ಟಿದ್ದಾರೆ. ಕೆಲವರು ತಾವು ಈ ಹಿಂದೆ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೇವೆ. ಹಣ ಪಡೆಯಲು ವಿವರಗಳನ್ನು ನೀಡಿ ಆ ಬಳಿಕ ಕಾಂಗ್ರೆಸ್ ಕಚೇರಿಯಿಂದ ರಸೀದಿಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದ್ದಾರೆ.
ʼಇಂಡಿಯಾ ಬ್ಲಾಕ್ʼ ಅಧಿಕಾರಕ್ಕೆ ಬಂದರೆ ತಮ್ಮ ಖಾತೆಗಳಿಗೆ ಮಾಸಿಕ 8,500 ರೂಪಾಯಿ ನೀಡುತ್ತಾರೆ ಎಂದು ಹಲವಾರು ಮಹಿಳೆಯರು ಖಾತೆಗಳನ್ನು ತೆರೆಯಲು ಇತ್ತೀಚೆಗಷ್ಟೇ ಬೆಂಗಳೂರಿನ ಜನರಲ್ ಪೋಸ್ಟ್ ಆಫೀಸ್ ಕೇಂದ್ರದಲ್ಲಿ ಸಾಲಿನಲ್ಲಿ ನಿಂತಿದ್ದರು.
ಅಂತರ ರಾಜ್ಯ
Restaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.
ಅಲಿಗಡ (ಉತ್ತರ ಪ್ರದೇಶ): ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.
ಇದಲ್ಲದೆ, ದೂರುದಾರರಿಗೆ ಮಾನಸಿಕ ಕಿರುಕುಳಕ್ಕೆ ಪರಿಹಾರವಾಗಿ ₹1,000 ಹಾಗೂ ಮೊಕದ್ದಮೆ ವೆಚ್ಚವಾಗಿ ₹5,000 ಪಾವತಿಸುವಂತೆಯೂ ಆಯೋಗ ಆದೇಶಿಸಿದೆ. ಆದೇಶವನ್ನು 45 ದಿನಗಳೊಳಗೆ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ರೆಸ್ಟೋರೆಂಟ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
₹18ರ ಬಾಟ್ಲಿಗೆ ₹20 ವಸೂಲಿ
ಅಲಿಗಡ ನಿವಾಸಿಯೊಬ್ಬರು 2026ರ ಮಾರ್ಚ್ 11ರಂದು ಹಥರಸ್ನ ಈ ರೆಸ್ಟೋರೆಂಟ್ಗೆ ಭೇಟಿ ನೀಡಿದ್ದರು. ಊಟದ ವೇಳೆ ಕುಡಿಯಲು ನೀರು ಕೇಳಿದಾಗ, ₹18 ಎಂಆರ್ಪಿ ನಮೂದಿಸಿದ್ದ ನೀರಿನ ಬಾಟ್ಲಿಯನ್ನು ನೀಡಲಾಗಿತ್ತು. ಆದರೆ, ಬಿಲ್ನಲ್ಲಿ ₹20 ವಿಧಿಸಲಾಗಿತ್ತು. ಮುದ್ರಿತ ಬೆಲೆಗಿಂತ ₹2 ಹೆಚ್ಚುವರಿಯಾಗಿ ವಸೂಲಿ ಮಾಡಿರುವುದನ್ನು ಪ್ರಶ್ನಿಸಿ ಗ್ರಾಹಕರು ದೂರು ದಾಖಲಿಸಿದ್ದರು.
ಈ ಘಟನೆಯಿಂದ ತಮಗೆ ಮಾನಸಿಕ ವೇದನೆ ಹಾಗೂ ಆರ್ಥಿಕ ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದ ಗ್ರಾಹಕರು, ₹10 ಲಕ್ಷ ಪರಿಹಾರ ಮತ್ತು ₹15,000 ಕಾನೂನು ವೆಚ್ಚ ನೀಡುವಂತೆ ಕೋರಿ ಆಯೋಗದ ಮೊರೆ ಹೋಗಿದ್ದರು. ರೆಸ್ಟೋರೆಂಟ್ನ ಸೇವಾ ನ್ಯೂನತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು.
ನೋಟಿಸ್ಗೆ ಉತ್ತರಿಸದ ರೆಸ್ಟೋರೆಂಟ್
ಆಯೋಗದ ಅಧ್ಯಕ್ಷ ಹಸ್ಟೈನ್ ಖುರೇಷಿ ಮತ್ತು ಸದಸ್ಯೆ ಪೂರ್ಣಿಮಾ ಸಿಂಗ್ ರಜಪೂತ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ರೆಸ್ಟೋರೆಂಟ್ಗೆ ನೋಟಿಸ್ ಜಾರಿಗೊಳಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಮೇ 21ರಂದು ಆಯೋಗವು ಏಕಪಕ್ಷೀಯ ವಿಚಾರಣೆ ಮುಂದುವರಿಸಿತು.
ದೂರುದಾರರು ಸಲ್ಲಿಸಿದ್ದ ಮಾರ್ಚ್ 11ರ ಬಿಲ್ ಹಾಗೂ ₹18 ಎಂಆರ್ಪಿ ನಮೂದಿಸಿದ್ದ ನೀರಿನ ಬಾಟ್ಲಿಯ ಛಾಯಾಚಿತ್ರವನ್ನು ಪರಿಶೀಲಿಸಿದ ಆಯೋಗ, ₹20 ವಸೂಲಿ ಮಾಡಿರುವುದನ್ನು ದೃಢಪಡಿಸಿತು. ಇದು ಅನ್ಯಾಯದ ವ್ಯಾಪಾರ ಪದ್ಧತಿಯಾಗಿದೆ ಎಂದು ತೀರ್ಮಾನಿಸಿ ರೆಸ್ಟೋರೆಂಟ್ಗೆ ₹1 ಲಕ್ಷ ದಂಡ ಹಾಗೂ ದೂರುದಾರರಿಗೆ ಪರಿಹಾರ ಪಾವತಿಸುವಂತೆ ಆದೇಶಿಸಿತು.
ನಿಧನ ವಾರ್ತೆ
Boat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ರಘೋಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮ್ಪುರ್ ಶ್ಯಾಮ್ಚಂದ್ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ಸುಮಾರು 15ರಿಂದ 20 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯಲ್ಲಿದ್ದವರು ಔತಣಕೂಟವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದೋಣಿ ನದಿಯಲ್ಲಿ ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಆರಂಭದಲ್ಲಿ ಐದರಿಂದ ಎಂಟು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಸಾವಿನ ಸಂಖ್ಯೆ 11ಕ್ಕೆ ಏರಿರುವುದು ದೃಢಪಟ್ಟಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿಯಾಗಿದೆ.
ದೋಣಿ ಮಗುಚಿ ಬೀಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮೃತಪಟ್ಟವರ ಗುರುತು ಹಾಗೂ ದೋಣಿಯಲ್ಲಿದ್ದವರ ನಿಖರ ಸಂಖ್ಯೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದೋಣಿ ದುರಂತಕ್ಕೆ ತೇಜಸ್ವಿ ಯಾದವ್ ಸಂತಾಪ
ಈ ದುರಂತದ ಬಗ್ಗೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಘೋಪುರ್ ದಿಯಾರಾ ಪ್ರದೇಶದಲ್ಲಿ ದೋಣಿ ಮಗುಚಿ ಬಿದ್ದಿರುವ ಆತಂಕಕಾರಿ ಸುದ್ದಿ ಬಂದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸ್ಥಳೀಯ ನಿವಾಸಿಗಳು, ಆಡಳಿತ ಮಂಡಳಿ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವುದರ ಜೊತೆಗೆ ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಂತರ ರಾಜ್ಯ
March to Supreme Court-ಮತಗಳವು ಆರೋಪ: ಇಂಡಿಯಾ ಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ
ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.
ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಯೋಜಿಸಿರುವ ಪೊಲೀಸರ ಸಂಖ್ಯೆಯನ್ನು ನೋಡಿದರೆ ಕೇಂದ್ರ ಸರ್ಕಾರದ ಆತಂಕ ಅರ್ಥವಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ಇಂಡಿಯಾ ಕೂಟದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಇತರ ಸಂಘಟನೆಗಳಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಶನಿವಾರ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೇಶದ ವಿವಿಧ ಭಾಗಗಳಿಂದ ಯುವಕರು ಆಗಮಿಸಿದ್ದರು. ಆದರೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಮಗೆ ಬೇಕಿರುವುದು ಇಂತಹ ಭಾರತವಲ್ಲ” ಎಂದು ಅವರು ಹೇಳಿದ್ದಾರೆ.
-
ದಕ್ಷಿಣ ಕನ್ನಡ11 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ9 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ10 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized9 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಕಾರ್ಯಕ್ರಮಗಳು3 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ನಿಧನ ವಾರ್ತೆ9 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಬಿಗ್ ನ್ಯೂಸ್10 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ಮಂಗಳೂರು9 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ


















