ರಾಜಕೀಯ
NOTA-ದೇಶದಲ್ಲಿ 60 ಲಕ್ಷ ನೋಟಾ ಚಲಾವಣೆ : ರಾಜ್ಯದಲ್ಲಿ ದಕ್ಷಿಣಕನ್ನಡದಲ್ಲೇ ಅತ್ಯಧಿಕ : ಒಟ್ಟು 2.1ಲಕ್ಷ ಓಟ್ ನೋಟಾಕ್ಕೆ
ರಾಜ್ಯದಲ್ಲಿ ಈ ಸಲದ ಲೋಕಸಭಾ ಚುನಾವಣೆಯಲ್ಲಿ 2,18,300 ಮಂದಿ ಮತದಾರರು ನೋಟಾ (ಮೇಲಿನ ಯಾರಿಗೂ ನನ್ನ ಮತ ಇಲ್ಲ) ಚಲಾಯಿಸಿದ್ದಾರೆ. ಆದರೂ ಕಳೆದ ಸಲಕ್ಕೆ ಹೋಲಿಸಿದರೆ ಈ ಬಾರಿ ಇಂಥ ಮತದಾರರ ಸಂಖ್ಯೆ ಕೊಂಚ ಕಡಿಮೆಯಾಗಿದೆ.
ಇದು ಶೇಕಡಾವಾರು ಲೆಕ್ಕದಲ್ಲಿ 0.56 ರಷ್ಟಿದ್ದರೆ, ಕಳೆದ 2019ರ ಚುನಾವಣೆಯಲ್ಲಿ ಶೇ. 0.70 ರಷ್ಟಿತ್ತು. ಅಂದರೆ 2,50,810 ಮತದಾರರು ನೋಟಾ ಮತ ಚಲಾಯಿಸಿದ್ದಾರೆ.
ಮತಯಂತ್ರದಲ್ಲಿ ನೋಟಾ ಸೌಲಭ್ಯ 2014ರ ಚುನಾವಣೆಯಲ್ಲಿ ಜಾರಿಗೆ ಬಂದಿದ್ದು, ಅದರ ಪ್ರಯೋಜನ ಪರಿಣಾಮ ಏನು? ಎಷ್ಟು? ಎಂಬುದು ದಶಕದ ನಂತರವೂ ಚರ್ಚಾಸ್ಪದ. ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಯಾರೊಬ್ಬರೂ ತನ್ನ ಆಯ್ಕೆ ಅಲ್ಲ ಎಂಬುದನ್ನು ತಿಳಿಸುವಂಥ ಅವಕಾಶ ಮತದಾರರಿಗೆ ನೋಟಾ ಬಟನ್ ಮೂಲಕ ಲಭ್ಯವಾಗಿದೆ.
ಆದರೆ ಕಳೆದ ಬಾರಿಯಾಗಲಿ, ಈ ಸಲವಾಗಲಿ, ಪ್ರತಿ ಕ್ಷೇತ್ರದಲ್ಲಿ ಸಾವಿರಾರು ಮತದಾರರು ಸೇರಿದಂತೆ ಒಟ್ಟಾರೆ 2 ಲಕ್ಷಕ್ಕೂ ಹೆಚ್ಚು ಮಂದಿ ನೋಟಾ ಮತ ಚಲಾಯಿಸಿದ್ದರೂ ಅದರ ಪರಿಣಾಮ ಮಾತ್ರ ರಾಜಕೀಯ ಪಕ್ಷಗಳ ಮೇಲೆ ಅಥವಾ ಚುನಾವಣಾ ಫಲಿತಾಂಶದ ಮೇಲೆ ಆಗಿಲ್ಲ ಎನ್ನುವುದು ಚರ್ಚೆಗೆ ಕಾರಣವಾಗಿದೆ.
ರಾಜಕೀಯ ಪಕ್ಷಗಳ ನಡುವೆ ಇಷ್ಟೊಂದು ಬಿರುಸಿನ ಸ್ಪರ್ಧೆ ನಡೆಯುತ್ತಿರುವಾಗಲೂ ನೋಟಾ ಬಟನ್ ಒತ್ತುತ್ತಿರುವ ಮತದಾರರು ಅದಕ್ಕೆ ತಮ್ಮದೇ ಕಾರಣ ಕೊಡುತ್ತಾರೆ. ರಾಜಕೀಯದ ಬಗ್ಗೆ ನಿರಾಸಕ್ತಿ, ಎಲ್ಲ ರಾಜಕೀಯ ಪಕ್ಷಗಳ ಬಗ್ಗೆ ಅಸಮಾಧಾನ, ಅಭ್ಯರ್ಥಿ ಬಗ್ಗೆ ಅತೃಪ್ತಿ ಪ್ರಮುಖ ಕಾರಣಗಳಾಗಿವೆ. ಅಲ್ಲದೆ ಸ್ಥಳೀಯ ವಿಷಯಗಳು, ಬಗೆಹರಿಯದ ಮಾತ್ರವಲ್ಲದೆ, ಇನ್ನಷ್ಟು ಕಾರಣಗಳಿಂದ ಹೀಗೆ ನೋಟಾ ಮತ ಚಲಾಯಿಸುವವರ ಸಂಖ್ಯೆ ಹೆಚ್ಚುತ್ತಿದೆ.
ನೋಟಾಗೆ 3ನೇ ಸ್ಥಾನ : ಈ ಬಾರಿ ರಾಜ್ಯದಲ್ಲೇ ಗರಿಷ್ಠ ಮತಗಳ ಅಂತರದ ಸೋಲು-ಗೆಲುವು ದಾಖಲಾಗಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಸ್ಥಾನವನ್ನು ನೋಟಾ(10,176) ಮತಗಳು ಪಡೆದಿರುವುದು ಗಮನಾರ್ಹವಾಗಿದೆ. ಅಂತೆಯೇ, ರಾಜ್ಯದ ಇನ್ನಷ್ಟು ಕ್ಷೇತ್ರಗಳಲ್ಲಿ ನೋಟಾ ಮತಗಳು ಎರಡು- ಮೂರನೇ ಸ್ಥಾನದಲ್ಲಿರುವುದು ವಿಶೇಷವಾಗಿದೆ.
ಇಂದೋರ್‌ನಷ್ಟೇ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರವೊಂದರ ನೋಟಾ ಮತಗಳ ಸಂಖ್ಯೆ 2.18 ಲಕ್ಷ. ಕರ್ನಾಟಕ ರಾಜ್ಯದ ಒಟ್ಟಾರೆ ನೋಟಾ ಮತಗಳ ಸಂಖ್ಯೆ ಅಷ್ಟೇ ಆಗಿದೆ. ಇಡೀ ದೇಶದಲ್ಲಿ 60.98 ಲಕ್ಷ ನೋಟಾ ಮತಗಳು ಚಲಾವಣೆಯಾಗಿವೆ.
ಗರಿಷ್ಠ ನೋಟಾ ಮತ ಚಲಾವಣೆ ಎಲ್ಲೆಲ್ಲಿ?
ದಕ್ಷಿಣ ಕನ್ನಡ 23576
ಬೆಂಗಳೂರು ಉತ್ತರ 13554
ಬೆಂಗಳೂರು ಕೇಂದ್ರ 12126
ಉಡುಪಿ-ಚಿಕ್ಕಮಗಳೂರು 11260
ಹಾವೇರಿ 10865
ಬೆಂಗಳೂರು ಗ್ರಾಮಾಂತರ 10649
ಉತ್ತರ ಕನ್ನಡ 10176
ಅಂತರ ರಾಜ್ಯ
Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.
“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.
ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ23 hours agoಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ


















