Connect with us

ಅಂತರ ರಾಜ್ಯ

CM Siddaramaiah-NEET ಪರೀಕ್ಷೆ ಅಕ್ರಮ ನಡೆದ ಕೇಂದ್ರದಲ್ಲೇ ಗ್ರೇಸ್ ಮಾರ್ಕ್ ಪಡೆದು ಅತೀ ಹೆಚ್ಚು ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟವಾಡ್ತಿದೆ – ಲೋಕಸಭಾ ಫಲಿತಾಂಶದಂದೇ NEET ಫಲಿತಾಂಶ ಪ್ರಕಟಿಸಿದ್ದು ಅಕ್ರಮ ಮುಚ್ಚಿಹಾಕಲು : ನೀಟ್ ಅಕ್ರಮ ತನಿಖೆಗೆ ಒತ್ತಾಯಿಸಿದ ಸಿಎಂ ಸಿದ್ದರಾಮಯ್ಯ

Published

on



Ad Widget

Ad Widget

Ad Widget

Ad Widget

ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ.

Ad Widget

Ad Widget

Ad Widget

Ad Widget

NEET (ನೀಟ್) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‍‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ – 67 ವಿದ್ಯಾರ್ಥಿಗಳು ಟಾಪರ್‍ಗಳಾಗಿ ಹೊರಹೊಮ್ಮಿದ್ದಾರೆ.
ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯ ಎನ್ನಿಸುತ್ತದೆ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು.

Ad Widget

Ad Widget <> Ad Widget

ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ.
ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, “ಮಾರ್ಕಿಂಗ್ ಪ್ರಕ್ರಿಯೆ” ಮತ್ತು “ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ”ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ?
ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ.



Ad Widget

ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ.

Ad Widget

Ad Widget

ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ.

“ಎನ್‌ಟಿಎ ಪ್ರಾಸ್ಪೆಕ್ಟಸ್”, “ನೀಟ್ ಬ್ರೋಷರ್” ಮತ್ತು “ಸರ್ಕಾರಿ ಸೂಚನೆಗಳಲ್ಲಿ” ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು.

2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.

ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ.

ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವನ್ನು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ?

ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತೇನೆ.

Ad Widget
Click to comment

Leave a Reply

ಅಂತರ ರಾಜ್ಯ

DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

Ad Widget

Ad Widget <> Ad Widget

ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.



Ad Widget

ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget

‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾ‌ರ್ ಹೇಳಿದರು.

ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.

ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.

‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.

ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾ‌ರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.

Ad Widget
Continue Reading

ಅಂತರ ರಾಜ್ಯ

Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್

Published

on



Ad Widget

Ad Widget

Ad Widget

Ad Widget

ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget

Ad Widget

ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget alt="Ad Widget"/>

Ad Widget

ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.

Ad Widget

Ad Widget <> Ad Widget

ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.



Ad Widget

1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.

Ad Widget

Ad Widget

ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.

ಗಣ್ಯರಿಂದ ಸಂತಾಪ
ನಾನಾ ಪಾಟೇಕ‌ರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.

ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget

Ad Widget <> Ad Widget

ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.



Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading