ಬಿಗ್ ನ್ಯೂಸ್
Big Breaking : LAC ಯಲ್ಲಿ ಭಾರತ – ಚೀನಾ ಸೇನೆ ನಡುವೆ ಸಂಘರ್ಷ | 5 ಕಿ.ಮೀ ಒಳ ನುಸುಳಿದ ವಿರೋಧಿ ಸೇನೆ ̲ ಬಂಧಿಸಿ ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರು
ಹೊಸದಿಲ್ಲಿ: ಕೆಲ ದಿನಗಳ ಹಿಂದೆ ಭಾರತ ಮತ್ತು ಚೀನಾ ಸೈನ್ಯಗಳ ನಡುವೆ ಕೆಲವು ಗಂಟೆಗಳ ಕಾಲ ಮುಖಾಮುಖಿ ಸಂಘರ್ಷ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ಈ ಸಂಘರ್ಷದಲ್ಲಿ ಎರಡೂ ಸೇನೆಗಳಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ರಕ್ಷಣಾ ಇಲಾಖೆ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಅರುಣಾಚಲ ವಲಯದಲ್ಲಿ ಕಳೆದ ವಾರ ಈ ಮುಖಾಮುಖಿ ಸಂಘರ್ಷ ನಡೆದಿತ್ತು ಎಂದು ತಿಳಿದು ಬಂದಿದೆ
ಚೀನಾದ ಪಿಎಲ್ಎ ಸೇನಾ ಪಡೆಯ ಸುಮಾರು 200 ಸೈನಿಕರು ಭಾರತದ ಅರುಣಾಚಲ ಪ್ರದೇಶ ಭಾಗದಲ್ಲಿನ ಗಡಿಯೊಳಗೆ ದಾಟಿ ಪ್ರವೇಶಿಸಿದ್ದರು. ಅವರನ್ನು ಭಾರತದ ಸೈನಿಕರು ಕೆಲವು ಸಮಯದವರೆಗೆ ಬಂಧಿಸಿದ್ದರು. ಟಿಬೆಟ್ ಪ್ರದೇಶದಿಂದ ನುಗ್ಗಿದ್ದ ಚೀನೀ ಸೈನಿಕರು, ಭಾರತದ ಭಾಗದೊಳಗೆ ಇರಿಸಲಾಗಿದ್ದ ಬಂಕರ್ಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದರು. ವಾಸ್ತವ ಗಡಿ ರೇಖೆಯ ಸಮೀಪದ ಬುಮ್ ಲಾ ಮತ್ತು ಯಾಂಗ್ತ್ಸೆ ಗಡಿ ಮಾರ್ಗದ ಮಧ್ಯೆ ಈ ಸಂಘರ್ಷ ನಡೆದಿದೆ.
ಚೀನಾ ಸೈನಿಕರ ಒಳನುಸುಳಿ ಅತಿಕ್ರಮಣ ಮಾಡುವ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಒಳ ಬಂಧನಕ್ಕೆ ಒಳಪಡಿಸಿದೆ. ಉಳಿದವರನ್ನು ಹಿಮ್ಮೆಟ್ಟಿಸಿತ್ತು. ಬಳಿಕ ಸ್ಥಳೀಯ ಸೇನಾ ಕಮಾಂಡರ್ ಮಟ್ಟದ ಮಾತುಕತೆಯಲ್ಲಿ ವಿವಾದವನ್ನು ಬಗೆಹರಿಸಲಾಗಿದೆ. ಈ ಬಳಿಕ ಚೀನಾ ಸೈನಿಕರನ್ನು ಬಿಡುಗಡೆ ಮಾಡಲಾಗಿದ್ದು, ಗಡಿ ಭಾಗದಲ್ಲಿನ ಉದ್ವಿಗ್ನ ಪರಿಸ್ಥಿತಿಯನ್ನು ನಿವಾರಿಸಲಾಗಿದೆ.

ಈ ಘಟನೆಯ ಬಗ್ಗೆ ಭಾರತೀಯ ಸೇನೆ ಅಥವಾ ರಕ್ಷಣಾ ಸಚಿವಾಲಯದಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಗೊಂಡಿಲ್ಲ. ಘಟನೆ ನಡೆದ ದಿನಾಂಕವೂ ಖಚಿತಗೊಂಡಿಲ್ಲ. ಕೆಲವು ಮೂಲಗಳ ಪ್ರಕಾರ ಆಗಸ್ಟ್ 30 ರಂದೇ ಈ ಸಂಘರ್ಷ ನಡೆದಿದೆ. ಸುಮಾರು 100ಕ್ಕೂ ಹೆಚ್ಚು ಚೀನೀ ಸೈನಿಕರು ಬರಾಹೋಟಿ ಪ್ರದೇಶದಲ್ಲಿ ಎಲ್ಎಸಿಯನ್ನು ದಾಟಿ ಐದು ಕಿಮೀ ಒಳಗೆ ನುಸುಳಿದ್ದರು. ಆದರೆ ಅಷ್ಟು ಮಂದಿ ಸೈನಿಕರು ಒಳನುಸುಳಿದ್ದು ಭಾರತದ ಸೇನಾ ಪಡೆಗೆ ಅಚ್ಚರಿ ಮೂಡಿಸಿದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ20 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ19 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ18 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್14 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ17 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ18 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಬಿಗ್ ನ್ಯೂಸ್19 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
-
ರಾಜಕೀಯ19 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ




















