ಶಿಕ್ಷಣ
Vivekananda-ತಾಂತ್ರಿಕ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣಕ್ಕಾಗಿ-ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು
ಶಿಕ್ಷಣದ ಜೊತೆಜೊತೆಗೆ ಮೌಲ್ಯಯುತ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳು ಸಮಾಜಕ್ಕೆ ಆಸ್ತಿಯಾಗಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಕರ‍್ಯನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ 70ಕ್ಕೂ ಹೆಚ್ಚಿನ ಶಿಕ್ಷಣಸಂಸ್ಥೆಯಲ್ಲೊಂದಾದ ಹೆಮ್ಮೆಯ ಸಂಸ್ಥೆ ಪುತ್ತೂರಿನ ನೆಹರೂನಗರದಲ್ಲಿರುವ ವಿವೇಕಾನಂದ ಪಾಲಿಟೆಕ್ನಿಕ್.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ನೀಡಿ ಸಮಾಜದಲ್ಲಿ ಉತ್ತಮ ನಾಗರಿಕನನ್ನಾಗಿ ಮಾಡುವ ಹೊಣೆ ಹೊತ್ತು, ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡು ದೇಶಕ್ಕೆ ಉತ್ತಮ ಆಸ್ತಿಯಾಗಬೇಕು ಎಂಬ ಸದುದ್ದೇಶದಿಂದ 1986ರಲ್ಲಿ ಪ್ರಾರಂಭಗೊಂಡ ಈ ವಿದ್ಯಾಸಂಸ್ಥೆಗೆ ಈಗ ೩೮ ವರುಷಗಳು ಸಂದಿದೆ.ಕಲಿಕೆಗೆ ಪೂರಕವಾದ ಸುಸಜ್ಜಿತ ಕಟ್ಟಡಗಳು,ಪೀಠೋಪಕರಣಗಳು ಹಾಗೂ ಪ್ರಯೋಗಾಲಯಗಳು,ಅನುಭವ ಶಿಕ್ಷಕವೃಂದ ಹಾಗೂ ಸಮರ್ಥ ಆಡಳಿತಮಂಡಳಿ, ವಿವಿಧ ಶೈಕ್ಷಣಿಕ ಕರ‍್ಯಕ್ರಮಗಳು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಕರ‍್ಯವನ್ನು ಮಾಡುತ್ತಿವೆ. ಊರು ಪರವೂರುಗಳಿಂದ ಬರುವ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ನೀಡುವ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆದರ್ಶ ವಿದ್ಯಾರ್ಥಿಗಳನ್ನಾಗಿ ರೂಪಿಸುವ ಕೆಲಸವನ್ನು ಈ ಸಂಸ್ಥೆ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದೆ. ಕರ್ನಾಟಕದ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಂಡಿದೆ.
ಈ ಸಂಸ್ಥೆಯಲ್ಲಿ ತಾಂತ್ರಿಕ ಶಿಕ್ಷಣಕ್ಕಾಗಿ 5 ವಿಭಿನ್ನ ಕೋರ್ಸ್ಗಳಿವೆ.ಅವುಗಳು ಯಾವುದೆಂದರೆ,
1)ಸಿವಿಲ್ ಇಂಜಿನಿಯರಿಂಗ್
2)ಆಟೋಮೊಬೈಲ್ ಇಂಜಿನಿಯರಿಂಗ್
3)ಮೆಕ್ಯಾನಿಕಲ್ ಇಂಜಿನಿಯರಿಂಗ್
4)ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್
5)ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ಯಾವುದೇ ಕ್ಷೇತ್ರವನ್ನು ಆರಿಸಿಕೊಳ್ಳಬಹುದಾಗಿದೆ. ಎಯ ನಂತರದ ಈ ಡಿಪ್ಲೋಮಾ ವಿದ್ಯಾರ್ಹತೆಗೆ 3 ವರುಷದ ಕಲಿಕಾ ಅವಥಿ ಇರುತ್ತದೆ. S.S.L.C. ನಂತರ PUC ಆರ್ಟ್ಸ್ ಅಥವಾ ಕಾಮರ್ಸ್ ಕಲಿತ ವಿದ್ಯಾರ್ಥಿಗಳು ಕೂಡಾ ತಾಂತ್ರಿಕ ಶಿಕ್ಷಣವನ್ನು ಪಡೆಯುವ ಅವಕಾಶವಿದೆ. PUCಯಲ್ಲಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ನೇರವಾಗಿ ದ್ವಿತೀಯ ವರ್ಷಕ್ಕೆ ಸೇರ್ಪಡೆಗೊಳ್ಳುವ ಉತ್ತಮ ಅವಕಾಶವೂ ಇದೆ. ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಮಾಜದ ತಾಂತ್ರಿಕ ಸಂಸ್ಥೆಗಳೊಂದಿಗೆ ಬೆರೆತು ಉತ್ತಮ ಕೌಶಲ್ಯವನ್ನು ಪಡೆದುಕೊಳ್ಳುವ ಅವಕಾಶವಿರುತ್ತದೆ. 3 ವರುಷದ ಡಿಪ್ಲೋಮ ತರಬೇತಿಯ ನಂತರ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2ನೇ ವರ್ಷಕ್ಕೆ ನೇರ ಪ್ರವೇಶ ಪಡೆಯುವ ಅವಕಾಶವೂ ವಿದ್ಯಾರ್ಥಿಗಳಿಗೆ ಇದೆ. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಡಿಪ್ಲೋಮ ಸಿ.ಇ.ಟಿ. ಗೆ ತರಬೇತಿಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತಿದೆ.
ಅತ್ಯುತ್ತಮ ಪಲಿತಾಂಶ: ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ಸಾಧನೆಗೈದು ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿರುತ್ತಾರೆ. ಎರಡು ಬಾರಿ ಸಿವಿಲ್ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಇಡೀ ಕರ್ನಾಟಕ ರಾಜ್ಯಕ್ಕೆ ಪ್ರಥಮ ರ‍್ಯಾಂಕನ್ನು ಪಡೆದು ಕಾಲೇಜಿನ ಹಿರಿಮೆಯನ್ನು ರಾಜ್ಯದೆಲ್ಲೆಡೆ ಪಸರಿಸಿ ಸಂಸ್ಥೆಗೆ ಹೆಸರನ್ನು ತಂದಿರುತ್ತಾರೆ. ತಾಂತ್ರಿಕ ಶಿಕ್ಷಣದ ತರಬೇತಿ ಪಡೆದ ಸಾವಿರಾರು ಹಿರಿಯ ವಿದ್ಯಾರ್ಥಿಗಳು ಹಲವಾರು ಪ್ರತಿಷ್ಠಿತ ಕಂಪೆನಿಗಳಲ್ಲಿ ಉತ್ತಮ ಸ್ಥಾನವನ್ನು ಅಲಂಕರಿಸಿದ್ದಾರೆ. ಹಾಗೂ ಹಲವಾರು ವಿದ್ಯಾರ್ಥಿಗಳು ಸ್ವಂತ ಸಾಧನೆಗೈದು ಯಶಸ್ಸನ್ನು ಕಂಡುಕೊಂಡಿದ್ದಾರೆ. ತಮ್ಮದೇ ಕಂಪೆನಿಗಳನ್ನು ಕಟ್ಟಿಕೊಂಡು ಅನೇಕರಿಗೆ ಉದ್ಯೋಗವನ್ನು ನೀಡುವವರೂ ಆಗಿದ್ದಾರೆ.
ಈ ಸಂಸ್ಥೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಹಲವಾರು ಕ್ಷೇತ್ರಗಳಲ್ಲಿ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಈಗಲು ಉತ್ತಮ ಔದ್ಯೋಗಿಕ ಕಂಪೆನಿಗಳಿಗೆ ಉದ್ಯೋಗಕ್ಕಾಗಿ ನಮ್ಮ ವಿದ್ಯಾರ್ಥಿಗಳ ಬೇಡಿಕೆಯನ್ನು ಪೂರೈಸಲು ನಮಗೆ ಸಾಧ್ಯವಾಗುತ್ತಿಲ್ಲ.ಇದಕ್ಕೆ ಮೂಲಕಾರಣ ನಮ್ಮ ವಿದ್ಯಾರ್ಥಿಗಳ ಕರ್ತವ್ಯ ಕ್ಷಮತೆ ಹಾಗೂ ಶಿಸ್ತಿನ ನಡವಳಿಕೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗಾಗಿ ವಿವಿಧ ಕ್ಷೇತ್ರಗಳ ನುರಿತ ಕೌಶಲ್ಯ ಕರ್ಮಿಗಳಿಂದ ತರಬೇತಿ ಕರ‍್ಯಾಗಾರಗಳನ್ನು ಸಂಸ್ಥೆ ನಡೆಸುತ್ತದೆ. ಉತ್ತಮ ಶೈಕ್ಷಣಿಕ ಹಾಗೂ ಮಾನಸಿಕ ಸಮತೋಲನಕ್ಕಾಗಿ ಕಾಲೇಜಿನ ಹಲವಾರು ಕರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ದಾಖಲಾತಿ ಪ್ರಾರಂಭ: ಈಗಾಗಲೇ ಕಾಲೇಜಿನಲ್ಲಿ ಪ್ರಥಮ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು,ಮಾಹಿತಿಗಾಗಿ ಮೊಬೈಲ್ ಸಂಖ್ಯೆ-9481757510 ಅಥವಾ 08251-231197ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ದಕ್ಷಿಣ ಕನ್ನಡ22 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು23 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















