ಮಂಗಳೂರು
Harassment at bus ಮಂಗಳೂರು : ಬಸ್ಸಿನಲ್ಲಿ ಯುವತಿಯ ಸೊಂಟಕ್ಕೆ ಕೈ ಹಾಕಿದ ಶಾಫಿ ಅರೆಸ್ಟ್ – ಬಂಧನಕ್ಕೂ ಮೊದಲು ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು
ಮಂಗಳೂರು: ಸ್ಟೇಟ್‌ಬ್ಯಾಂಕ್‌ನಿಂದ ಬಜೆಗೆ ಹೋಗುವ ಬಸ್‌ನಲ್ಲಿ ಯುವತಿಯೊಬ್ಬರ ಮಾನಭಂಗಕ್ಕೆ ಯತ್ನಿಸಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ಬಿಗಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಜೆ ಕಳವಾರ ಚರ್ಚ್ ಬಳಿಯ ಖುರ್ಸುಗುಡ್ಡೆ ನಿವಾಸಿ ಖಲಂದರ್ ಶಾಫಿ (31) ಬಂಧಿತ ಆರೋಪಿ. ಯುವತಿ ಬಸ್‌ನಲ್ಲಿ ಕುಳಿತಿದ್ದಾಗ ಈತ ಮಾನಭಂಗಕ್ಕೆ ಯತ್ನಿಸಿದ್ದ. ಈ ಬಗ್ಗೆ 19ರ ಹರೆಯದ ಸಂತ್ರಸ್ತ ಯುವತಿಯು ಠಾಣೆಗೆ ದೂರು ನೀಡಿದ್ದರು.
ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್‌ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್‌ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್ ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್ ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್‌ನಲ್ಲಿ ಹೊರಟು 9 ಗಂಟೆ ಸುಮಾರಿಗೆ ಸ್ಟೇಟ್ ಬ್ಯಾಂಕ್‌ಗೆ ಬಂದು ಇಳಿದಿದ್ದಾರೆ.
ನಂತರ ಸ್ಪೇಟ್ ಬ್ಯಾಂಕ್‌ನಿಂದ ಬಜಪೆ ಕಡೆಗೆ ಹೋಗಲು ಮರೋಳಿ ಎಂಬ ಹೆಸರಿನ ಬಸ್ಸನಲ್ಲಿ 9:10ಕ್ಕೆ ಹತ್ತಿ ನಿರ್ವಾಹಕ ಸೈಡ್‌ನ ನಾಲ್ಕನೇ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕೂತಿದ್ದ ಕುಳಿತುಕೊಂಡಿದ್ದ ಹಿಂಬದಿಯ ಸೀಟಿನಲ್ಲಿ ಕೂರುತ್ತಾನೆ. ಬಳಿಕ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ವಿಷಯಯವನ್ನು ಯುವತಿ ತನ್ನ ಸಂಬಂಧಿಕರಿಗೆ ತಿಳಿಸಿದ್ದು, ತಕ್ಷಣ ಬಂದ ಅವರು ಬಲ್ಲಾಳ್‌ಬಾಗ್‌ನಲ್ಲಿ ಬಸ್ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆರೋಪಿಯನ್ನು ಹೊರಗೆಳೆದ ಸಾರ್ವಜನಿಕರು ಧರ್ಮದೇಟು ಬಿಗಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ
Mangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಹೊಣೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು. ಎಫ್‌ಐಆರ್ ದಾಖಲಾದ ಸಂದರ್ಭದಲ್ಲಿ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಬಂಧನ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ
ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಫಾದರ್ ಸಿಪ್ರಿಯನ್ ಪಿಂಟೊ ವಿರುದ್ಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.
ಮಂಗಳೂರು
Farmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.) ಆಗ್ರಹಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಸಯ್ಯದ್ ಹಸನ್ ಅವರು ಒತ್ತಾಯ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.) ಆಗ್ರಹಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಸಯ್ಯದ್ ಹಸನ್ ಅವರು ಒತ್ತಾಯ ವ್ಯಕ್ತಪಡಿಸಿದ್ದಾರೆ.
ಕೋಳಿ ಫಾರಂಗಳ ನೊಣಗಳ ಸಮಸ್ಯೆಗೆ ಕಂಪನಿಗಳೇ ಹೊಣೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಕೋಳಿ ಸಾಕಾಣಿಕೆ ಕೇಂದ್ರಗಳಿಂದ ನೊಣಗಳ ಕಾಟ ಹೆಚ್ಚಾಗಿದ್ದು, ಕೋಳಿ ಸಾಕಾಣಿಕೆ ರೈತರ ಜೊತೆಗೆ ಸುತ್ತಮುತ್ತಲಿನ ಸಾರ್ವಜನಿಕರೂ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದರೂ, ಸಂಬಂಧಪಟ್ಟ ಕಂಪನಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಒಕ್ಕೂಟ ಆರೋಪಿಸಿದೆ.
ಕೋಳಿ ಸಾಕಾಣಿಕೆ ರೈತರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಂತೆ ಕಂಪನಿಗಳೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸಾರ್ವಜನಿಕ ಆರೋಗ್ಯ ಹಾಗೂ ಪರಿಸರದ ಹಿತದೃಷ್ಟಿಯಿಂದ ನೊಣಗಳ ಸಮಸ್ಯೆಯನ್ನು ತಕ್ಷಣ ನಿಯಂತ್ರಿಸಬೇಕು. ಇಲ್ಲದಿದ್ದರೆ ಕಂಪನಿಗಳ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟ ಎಚ್ಚರಿಕೆ ನೀಡಿದೆ.
ಜಿಸಿ ದರ ಹೆಚ್ಚಳಕ್ಕೆ ನ.25ರ ಗಡುವು
ಕೋಳಿ ಸಾಕಾಣಿಕೆಗೆ ಅಗತ್ಯವಿರುವ ವಿದ್ಯುತ್, ಕಾರ್ಮಿಕರ ವೇತನ ಹಾಗೂ ಫಾರಂ ನಿರ್ವಹಣಾ ವೆಚ್ಚಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಆದರೆ, ಇಂಟೆಗ್ರೇಶನ್ ಪದ್ಧತಿಯಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿರುವ ರೈತರಿಗೆ ಕಂಪನಿಗಳು ನೀಡುತ್ತಿರುವ ಜಿಸಿ ದರ ಸಮರ್ಪಕವಾಗಿಲ್ಲ ಎಂದು ಒಕ್ಕೂಟ ತಿಳಿಸಿದೆ.
ರೈತರಿಗೆ ಕನಿಷ್ಠ ₹10 ಜಿಸಿ ದರ ನೀಡುವಂತೆ ಸುಮಾರು ಆರು ತಿಂಗಳ ಹಿಂದೆಯೇ ಸರ್ಕಾರ ಕಂಪನಿಗಳಿಗೆ ಸೂಚನೆ ನೀಡಿದ್ದರೂ, ಹಲವು ಕಂಪನಿಗಳು ಈ ಆದೇಶವನ್ನು ಜಾರಿಗೆ ತಂದಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿ ಹಾಗೂ ಬೆಂಗಳೂರು ಗ್ರಾಮಾಂತರ ರಾಜ್ಯ ಸಮಿತಿಯು ಕಂಪನಿಗಳಿಗೆ ಗಡುವು ನೀಡಿದೆ.
ನ.25ರಿಂದ ಕೋಳಿ ಮರಿಗಳ ಸ್ವೀಕಾರ ಸ್ಥಗಿತಗೊಳಿಸುವ ಎಚ್ಚರಿಕೆ
ನವೆಂಬರ್ 25ರೊಳಗೆ ಜಿಸಿ ದರ ಹೆಚ್ಚಳದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ, ಅಂದಿನಿಂದ ಹೊಸ ಕೋಳಿ ಮರಿಗಳನ್ನು ಸಾಕಾಣಿಕೆ ಕೇಂದ್ರಗಳಿಗೆ ಸ್ವೀಕರಿಸದಿರುವುದು ಹಾಗೂ ಈಗಾಗಲೇ ಸಾಕಾಣಿಕೆಯಲ್ಲಿರುವ ಕೋಳಿಗಳನ್ನು ಮಾರಾಟಕ್ಕೆ ನೀಡದೆ ಹೋರಾಟ ನಡೆಸಲು ರಾಜ್ಯ ಸಮಿತಿ ನಿರ್ಧರಿಸಿದೆ. ಅಲ್ಲದೆ, ನವೆಂಬರ್ 25ರಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಈ ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಕೋಳಿ ಸಾಕಾಣಿಕೆ ರೈತರ ಪರವಾಗಿ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ಸಂಪೂರ್ಣ ಬೆಂಬಲ ಘೋಷಿಸಿದೆ. ಜಿಲ್ಲೆಯ ಎಲ್ಲಾ ಕೋಳಿ ಸಾಕಾಣಿಕೆ ರೈತರು ಒಗ್ಗಟ್ಟಿನಿಂದ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದೆ.
ರೈತರ ಶ್ರಮಕ್ಕೆ ನ್ಯಾಯಯುತ ಬೆಲೆ ದೊರೆಯಬೇಕು, ರೈತರ ಬದುಕು ಉಳಿಯಬೇಕು ಹಾಗೂ ಕೋಳಿ ಸಾಕಾಣಿಕೆ ಉದ್ಯಮದಲ್ಲಿ ರೈತರಿಗೆ ಗೌರವಯುತ ಸ್ಥಾನಮಾನ ಸಿಗಬೇಕು ಎಂಬುದು ಒಕ್ಕೂಟದ ಪ್ರಮುಖ ಆಶಯವಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಿ.ಕೆ., ಕೋಶಾಧಿಕಾರಿ ಕೇಶವ ಕೊಯ್ದು ಹಾಗೂ ಇತರರು ಉಪಸ್ಥಿತರಿದ್ದರು.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್‌ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್‌ನ 30 ಕ್ಯಾನ್‌ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್‌ಗಳು.
- ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ24 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ24 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ















