ಉಡುಪಿ
Raghupati Bhat :ನನಗೆ ಕೋಟ ಸೀಟ್ ಆಫರ್ ಇತ್ತು : ರಘುಪತಿ ಭಟ್
ಪಕ್ಷ ತಪ್ಪು ನಿರ್ಧಾರಗಳನ್ನು ಮಾಡಬಾರದು, ಮಾಡಿದರೆ ಕಾರ್ಯಕರ್ತರು ಪ್ರತಿಭಟಿಸುತ್ತಾರೆ ಎಂಬ ಸಂದೇಶವನ್ನು ಪಕ್ಷಕ್ಕೆ ನೀಡುವುದಕ್ಕಾಗಿ ನಾನು ಸ್ಪರ್ಧಿಸಿದ್ದೆ. ಈ ಸಂದೇಶ ತಲುಪಿದೆ. ಆದ್ದರಿಂದಲೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಾರದ ಬಿಜೆಪಿ ರಾಜ್ಯಾಧ್ಯಕ್ಷರು, ಆರ್ಎಸ್ಎಸ್ ಮುಖಂಡರು ಕೂಡ ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕೆ ಫೀಲ್ಡಿಗೆ ಬಂದಿದ್ದರು ಎಂದು ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಸೋತ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ಶನಿವಾರ ಉಡುಪಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರುರು ಬಿಜೆಪಿಯಲ್ಲಿ ಇನ್ನು ದುಡ್ಡಿಲ್ಲದ ಸಾಮಾನ್ಯ ಕಾರ್ಯಕರ್ತರು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದು ಕನಸಿನ ಮಾತು. ಇದು ಈ ಚುನಾವಣೆಯಲ್ಲಿ ಸಾಬೀತಾಗಿದೆ. ಹಿಂದೆ ಪಕ್ಷಕ್ಕಾಗಿ ಹತ್ತಿಪ್ಪತ್ತು ವರ್ಷ ದುಡಿದು ಅವಕಾಶ ವಂಚಿತರಾದವರಿಗೆ ವಿಧಾನ ಪರಿಷತ್ತಿನ ಟಿಕಟ್ ಸಿಗುತ್ತಿತ್ತು. ಆದರೆ ಇನ್ನು ಮುಂದೆ ಹಾಗಿಲ್ಲ, ಹಣ ಇದ್ದವರು ಮಾತ್ರ ಸ್ಪರ್ಧಿಸಬಹುದು, ಎಂದು ಅವರು ಹೇಳಿದರು.
ನನಗೆ ಕೋಟ ಸೀಟ್ ಆಫರ್ ಇತ್ತು :
ನಾನು ನಾಮಪತ್ರ ಸಲ್ಲಿಸಿದ ಮೇಲೆ, ನಾಮಪತ್ರ ಹಿಂಪಡೆಯಲು, ತೆರವಾಗುವ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಾನವನ್ನು ನೀಡುವುದಾಗಿ ಬಿಜೆಪಿಯಿಂದ ಆಫರ್ಬಂದಿತ್ತು. ಆದರೆ ನಾನು ವಿಚಲಿತನಾಗಲಿಲ್ಲ, ಕೋಟ ಅವರಿಂದ ತೆರವಾಗುವ ಸ್ಥಾನಕ್ಕೆ ಆಸೆ ಪಡುವುದಿದ್ದರೆ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಲೇ ಇರಲಿಲ್ಲ ಎಂದು ರಘುಪತಿ ಭಟ್ ಹೇಳಿದರು.
ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ
ಚುನಾವಣೆಯಲ್ಲಿ ಬಂಡಾಯವಾಗಿ ಸ್ಪರ್ಧಿಸುವ ಮೂಲಕ ನಾನು ಪಕ್ಷಕ್ಕೆ ನೀಡಿದ್ದ ಎಚ್ಚರಿಕೆ ಕೆಲಸ ಮಾಡಿದೆ. ಆದ್ದರಿಂದಲೇ ಹಿಂದುತ್ವದ ಪರ ಗಟ್ಟಿಯಾಗಿ ಧ್ವನಿ ಎತ್ತುವ ಸಿ. ಟಿ. ರವಿ ಅವರನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿ ಅವರಿಗೆ ನ್ಯಾಯ ನೀಡಿದೆ. ಇದು ನನಗೆ ಸಂತೋಷ ನೀಡಿದೆ ಎಂದು ಭಟ್ ಹೇಳಿದರು.
ಹೆಚ್ಚು ಮತಗಳಿಂದ ಗೆಲ್ಲುತ್ತೇನೆ ಎಂಬ ಭರವಸೆ ಇತ್ತು. ಆದರೆ ಈ ಮಟ್ಟದ ಸೋಲನ್ನು ನಾನು ನಿರೀಕ್ಷಿಸಿರಲಿಲ್ಲ. ಉಡುಪಿ, ದ.ಕ., ಶಿವಮೊಗ್ಗದ ಅನೇಕ ಬಿಜೆಪಿ ನಾಯಕರು ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದರು. ಚುನಾವಣೆಯನ್ನು ಸೋಲನ್ನು ಸವಾಲಾಗಿ ಸಕ್ರಿಯವಾಗಿ ಸಾತ್ವಿಕವಾಗಿ ಎದುರಿಸಿದ್ದೇನೆ. ಸ್ವೀಕರಿಸಿ, ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
-
ಬಿಗ್ ನ್ಯೂಸ್17 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ23 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಆರೋಗ್ಯ19 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ23 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಕಾರ್ಯಕ್ರಮಗಳು24 hours agoPuttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ















