ಬಿಗ್ ನ್ಯೂಸ್
Modi 3.0 Cabinet | ಮೋದಿ 3.0 ಸರ್ಕಾರದಲ್ಲಿ ಅಣ್ಣಾಮಲೈಗೆ ಸ್ಥಾನ ಬಹುತೇಕ ಖಚಿತ – ನಿರ್ಮಲ ಸೀತಾರಾಮನ್ ಸಂಪುಟ ಸೇರ್ಪಡೆಗೆ ತೀವ್ರ ವಿರೋಧ..!
ನವದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈಗೆ (Tamil Nadu BJP President Annamalai) ಅವರಿಗೆ ಮೋದಿ 3.O ಕ್ಯಾಬಿನೆಟ್‌ನಲ್ಲಿ (Modi 3.O Cabinet) ಸ್ಥಾನ ಸಿಗುವ ಸಾಧ್ಯತೆಗಳಿವೆ. ಇಂದು ಸಂಜೆ ನರೇಂದ್ರ ಮೋದಿ (Narendra Modi) ಮೂರನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ನರೇಂದ್ರ ಮೋದಿ ಜೊತೆಯಲ್ಲಿ ಸುಮಾರು 30 ಸಂಸದರು ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಮೋದಿ 3.0 ದಲ್ಲಿ ನಿರ್ಮಲ ಸೀತಾರಾಮನ್ ಗೆ ಸಚಿವ ಸ್ಥಾನ ನೀಡಬಾರದು ಎಂಬ ಒತ್ತಡ ಜಾಸ್ತಿಯಾಗ್ತಿದೆ.
39 ವರ್ಷದ ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಕೆ ಅಣ್ಣಾಮಲೈ ಈ ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿಎಂಕೆಯ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ 1.18 ಲಕ್ಷ ಮತಗಳ ಅಂತರದಿಂದ ಸೋತಿದ್ದರು. ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
2021ರಲ್ಲಿ ಬಿಜೆಪಿ ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇದೀಗ ಚುನಾವಣೆಯಲ್ಲಿ ಸೋತರೂ ಅಣ್ಣಾಮಲೈಗೆ ಸಂಪುಟ ದರ್ಜೆಯ ಸ್ಥಾನಮಾನ ಸಿಗುತ್ತೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಣ್ಣಾಮಲೈಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವ ಸಾಧ್ಯತೆಗಳಿವೆ.
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪರ ಇರುವ ಬಣ ನಿರ್ಮಲ ಸೀತಾರಾಮನ್ ಗೆ ಸಚಿವ ಸಂಪುಟದಲ್ಲಿ ಈ ಬಾರಿ ಅವಕಾಶ ಕೊಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಎನ್‌ಡಿಟಿವಿ ವರದಿ ಪ್ರಕಾರ ಇಂದು ಸಂಜೆ ಸುಮಾರು 30 ಜನರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಕ್ಷಣಾ, ಗಣಿ ಕಲ್ಲಿದ್ದಲು, ನಾಗರಿಕ ವಿಮಾನಾಯನ, ವಿದೇಶಾಂಗ, ಹಣಕಾಸು, ಗೃಹ ಸೇರಿದಂತೆ ಪ್ರಮುಖ ಖಾತೆಗಳ ಹಂಚಿಕೆ ಇಂದೇ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಬಾರಿ ಯಾವ ಪಕ್ಷಕ್ಕೂ ಬಹುಮತ ಸಿಗದ ಹಿನ್ನೆಲೆ ಟಿಡಿಪಿ, ಜೆಡಿಯು ಬೆಂಬಲದೊಂದಿಗೆ ಬಿಜೆಪಿ ಮೂರನೇ ಬಾರಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುತ್ತಿದೆ.
ಚುನಾವಣೆ ಸೋಲಿನ ಬಗ್ಗೆ ಅಣ್ಣಾಮಲೈ ಹೇಳಿದ್ದೇನು?ಅಣ್ಣಾಮಲೈ ಸೋಲನ್ನು ಡಿಎಂಕೆ ನಾಯಕಿ, ಮಾಜಿ ಸಿಎಂ ಕರುಣಾನಿಧಿ ಪುತ್ರಿ ಕನ್ನಿಮೋಳಿ ಕುಹಕವಾಡಿದ್ದಾರೆ. ಇದಕ್ಕೆ ಖಡಕ್ ಪ್ರತಿಕ್ರಿಯೆ ನೀಡಿದ ಅಣ್ಣಾಮಲೈ, ನನ್ನ ತಂದೆ ಕರುಣಾನಿದಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ ಎಂದಿದ್ದಾರೆ.
ಅಣ್ಣಾಮಲೈನನ್ನು ಹರಕೆಯ ಮೇಕೆ ಮಾಡಿ ತಲೆ ಕತ್ತರಿಸಿದ ಡಿಎಂಕೆ ಸದಸ್ಯರುಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವೋಟ್ ಶೇರ್ ಶೇಕಡಾ 11ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ನೋಟಾ ಪಾರ್ಟಿ ಎಂದು ಹೀಯಾಳಿಸುತ್ತಿದ್ದರು. ಈ ಚುನಾವಣೆಯಲ್ಲಿ ತಮಿಳುನಾಡು ಬಿಜೆಪಿಯತ್ತ ವಾಲುತ್ತಿರುವುದು ಸ್ಪಷ್ಟವಾಗಿದೆ. ಇದೀಗ ಹಲವರು ನಮ್ಮ ಸೋಲನ್ನು ಸಂಭ್ರಮಿಸುತ್ತಿದ್ದಾರೆ. ಆದರೆ 2026ರಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಎಚ್ಚರಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized15 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized18 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized17 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized17 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized19 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized17 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ2 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಬಿಗ್ ನ್ಯೂಸ್1 hour agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















