2023ರಲ್ಲಿ ಬಿಡುಗಡೆಗೊಂಡಿದ್ದ ‘ದಿ ಟ್ರಯಲ್’ ವೆಬ್ […]" /> 2023ರಲ್ಲಿ ಬಿಡುಗಡೆಗೊಂಡಿದ್ದ ‘ದಿ ಟ್ರಯಲ್’ ವೆಬ್ […]"> Noor Malabika Das : ಹಿಂದಿ ಬೋಲ್ಡ್‌ ವೆಬ್‌ ಸಿರೀಸ್ʼಗಳ ಖ್ಯಾತ ನಟಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ - Nikhara News | Kannada News Website
Connect with us

ಕ್ರೈಂ

Noor Malabika Das : ಹಿಂದಿ ಬೋಲ್ಡ್‌ ವೆಬ್‌ ಸಿರೀಸ್ʼಗಳ ಖ್ಯಾತ ನಟಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

Published

on

Ad Widget

Ad Widget

Ad Widget

Ad Widget


ಮುಂಬೈ: ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮುಂಬೈನಲ್ಲಿರುವ ಆಕೆಯ ಅಪಾರ್ಟ್ಮೆಂಟ್ನಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Ad Widget

Ad Widget

Ad Widget

Ad Widget

ತಕ್ಷಣ ಪೊಲೀಸರು ಅಲ್ಲಿಗೆ ಬಂದು ಬಾಗಿಲು ಒಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ನೂರ್ ಶವ ಪತ್ತೆಯಾಗಿದೆ. ಮೃತದೇಹವನ್ನು ಹೊರತೆಗೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

2023ರಲ್ಲಿ ಬಿಡುಗಡೆಗೊಂಡಿದ್ದ ‘ದಿ ಟ್ರಯಲ್’ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ಮಾಲಾಬಿಕಾ ದಾಸ್ ನಟಿಸಿದ್ದರು. 37 ವರ್ಷದ ಅಸ್ಸಾಂ ಮೂಲದ ಮಾಲಾಬಿಕಾ ದಾಸ್ ಗಗನಸಖಿಯಾಗಿ ವೃತ್ತಿ ಜೀವನ ಆರಂಭಿಸಿದರು. ಕತಾರ್ ಏರ್ ವೇಸ್ ನಲ್ಲಿ ಉದ್ಯೋಗಿಯಾಗಿದ್ದ ಆಕೆ ನಟಿಯಾಗಬೇಕು ಎಂಬ ಇಚ್ಚೆ ಹೊಂದಿದ್ದರು. ಹೀಗಾಗಿ ಗಗನ ಸಖಿ ಉದ್ಯೋಗ ಬಿಟ್ಟು ನಟಿಯಾಗಲು ಮುಂಬೈಗೆ ಬಂದಿದ್ದರು.

Ad Widget

Ad Widget <> Ad Widget

ಈ ವೇಳೆ ಆಕೆ ಹಲವು ಬೋಲ್ಡ್‌ ವೆಬ್‌ ಸಿರೀಸ್‌ (ವಯಸ್ಕ ಚಿತ್ರಗಳಲ್ಲಿಯೂ) ನಟಿಸಿದ್ದರು. ನೂರ್ ಮಾಲಾಬಿಕಾ ದಾಸ್ ಸಿಸ್ಕಿಯಾನ್, ವಾಲ್ಕಮನ್, ತೀಖಿ ಚಟ್ನಿ, ಜಗನ್ಯಾ ಉಪಾಯ, ಚರಮ್ ಸುಖ್, ದೇಖಿ ಅಂದೇಖಿ ಮತ್ತು ಬ್ಯಾಕ್ರೋಡ್ ಹಸ್ಲ್ ನಂತಹ ಹಲವಾರು ಚಲನಚಿತ್ರಗಳು ಮತ್ತು ವೆಬ್ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಜೋಲ್ ಮತ್ತು ಜಿಶು ಸೇನ್ ಗುಪ್ತಾ ನಟಿಸಿದ ಅಮೆಜಾನ್ ಪ್ರೈಮ್ ನ ದಿ ಟ್ರಯಲ್: ಪ್ಯಾರ್ ಕಾನೂನ್ ಧೋಖಾ ಚಿತ್ರದಲ್ಲೂ ಅವರು ಕಾಣಿಸಿಕೊಂಡರು.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಅಸ್ಸಾಂನ ಕರೀಂಗಂಜ್ ಮೂಲದ ನೂರ್ ಮಾಲಾಬಿಕಾ ದಾಸ್ ಖಿನ್ನತೆಯಿಂದ ಬಳಲುತ್ತಿದ್ದರು. ಅವರ ತಂದೆಯ ಚಿಕ್ಕಮ್ಮ ಆರತಿ ದಾಸ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ” ಮಾಲಾಬಿಕಾ ನಟಿಯಾಗುವ ದೊಡ್ಡ ಕನಸ್ಸು ಹೊತ್ತು ಮುಂಬೈಗೆ ಹೋದರು. ಇದಕ್ಕಾಗಿ ಅಲ್ಲಿ ಅವಳು ಬಹಳಷ್ಟು ಪ್ರಯತ್ನಿಸಿದಳು. ಆದರೇ ಮಾಲಾಬಿಕಾ ತನ್ನ ಸಾಧನೆಗಳಿಂದ ಅತೃಪ್ತಳಾಗಿ ಖಿನ್ನತೆ ಒಳಗಾಗಿದ್ದಳು. ಇದೆ ಕಾರಣದಿಂದ ಜೀವ ಕಳೆದುಕೊಂಡಿರಬಹುದು ಎಂದು ಅವರು ವಿವರಿಸಿದ್ದಾರೆ

Ad Widget

Ad Widget

ಇನ್ನು ಆಕೆಯ ಸಾವಿಗೆ ಎರಡು ವಾರಗಳ ಮೊದಲು ಕುಟುಂಬ ಸದಸ್ಯರು ಮುಂಬೈನಲ್ಲಿರುವ ನಟಿಯ ನಿವಾಸಕ್ಕೆ ಭೇಟಿ ನೀಡಿದ್ದರು.ಆದರೆ, ಆಕೆಯ ಸಾವಿನ ನಂತರ ಕುಟುಂಬಸ್ಥರು ಮೃತ ದೇಹವನ್ನು ನೋಡಲು ಸಹ ಬಂದಿಲ್ಲ.ಮೃತ ದೇಹವನ್ನು ತೆಗೆದುಕೊಂಡು ಹೋಗುವಂತೆ ಪೊಲೀಸರು ಕರೆ ಮಾಡಿದರೂ ಪ್ರತಿಕ್ರಿಯಿಸಿಲ್ಲ. NGO ದ ಸಹಾಯದಿಂದ ಆಕೆಯ ಅಂತಿಮ ವಿಧಿವಿಧಾನಗಳನ್ನು ಪೂರ್ಣಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Ad Widget
Click to comment

Leave a Reply

ಕ್ರೈಂ

Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!

Published

on

Ad Widget

Ad Widget

Ad Widget

Ad Widget

ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.

Ad Widget

Ad Widget

Ad Widget

Ad Widget

ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.

Ad Widget

Ad Widget alt="Ad Widget"/>

Ad Widget

ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್‌ಶೀಟ್‌ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಶಿರಾಡಿಘಾಟ್‌ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.

ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.

Ad Widget

Ad Widget

ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್‌ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.

ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.

ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್‌ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.

ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget
Continue Reading

ಕ್ರೈಂ

Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ

Published

on

Ad Widget

Ad Widget

Ad Widget

Ad Widget

ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

Ad Widget

Ad Widget alt="Ad Widget"/>

Ad Widget

ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

Ad Widget
Continue Reading

ಕ್ರೈಂ

Seven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ

Published

on

Ad Widget

Ad Widget

Ad Widget

Ad Widget

ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Ad Widget

Ad Widget alt="Ad Widget"/>

Ad Widget

ಪತ್ನಿ ಹಾಗೂ ಆಕೆಯ ತವರು ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಲಾಗದೆ ಎಲ್ಲರನ್ನೂ ಮನೆಗೆ ಕರೆಸಿ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಆದರೆ, ಕೌಟುಂಬಿಕ ಕಲಹವೇ ಹತ್ಯೆಗಳಿಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Ad Widget

Ad Widget <> Ad Widget

ಮೂರ್ನಾಲ್ಕು ಕೋಟಿ ಆಸ್ತಿಗಾಗಿ ಹತ್ಯೆ ಸಂಚು?
ಶ್ರೀರಾಂಪುರದಲ್ಲಿ ಅಜ್ಜಿಗೆ ಸೇರಿದ ಸುಮಾರು ₹3ರಿಂದ ₹4 ಕೋಟಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಯಲ್ಲಿ ಅತ್ತೆ, ಮಾವ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೂ ಪಾಲು ನೀಡಬೇಕಾಗುತ್ತದೆ. ಎಲ್ಲರನ್ನೂ ಹತ್ಯೆ ಮಾಡಿದರೆ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಆರೋಪಿ ಇಂದುಶೇಖರ್ ತನ್ನ ಮಗಳಿಗೆ ಆಮಿಷವೊಡ್ಡಿ ಸಂಚಿನಲ್ಲಿ ಭಾಗಿಯಾಗಿಸಿದ್ದ ಎನ್ನಲಾಗಿದೆ.

ತಂದೆಯ ಮಾತು ನಂಬಿದ ಪಿಯುಸಿ ವಿದ್ಯಾರ್ಥಿನಿ ಹತ್ಯೆ ಕೃತ್ಯದಲ್ಲಿ ಸಹಕರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ವೇಳೆ, ‘ತಂದೆ ಹೇಳಿದ ಕೆಲಸವನ್ನಷ್ಟೇ ಮಾಡುತ್ತಿದ್ದೆ. ಬೇರೆ ಏನೂ ಗೊತ್ತಿಲ್ಲ’ ಎಂದು ಆಕೆ ಹೇಳಿದ್ದಾಳೆ ಎನ್ನಲಾಗಿದೆ.

Ad Widget

Ad Widget

ವಿಚಾರಣೆಗೆ ತಂದೆ ಮತ್ತು ಮಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಪ್ರಾಪ್ತ ವಯಸ್ಸಿನ ಕಾರಣ ಕಾನೂನು ರಕ್ಷಣೆ?
ಹತ್ಯೆ ನಡೆದ ಸಂದರ್ಭದಲ್ಲಿ ಆರೋಪಿಯ ಮಗಳಿಗೆ 17 ವರ್ಷ ವಯಸ್ಸಾಗಿತ್ತು. ನವೆಂಬರ್ 8ರಂದು ಆಕೆ 18 ವರ್ಷಕ್ಕೆ ಕಾಲಿಟ್ಟಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದ ಕಾರಣ ಬಾಲ ನ್ಯಾಯ ಕಾಯ್ದೆಯಡಿ ಕಾನೂನು ರಕ್ಷಣೆ ದೊರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.

ಮೃತದೇಹ ಸಾಗಣೆ, ಸಾಕ್ಷ್ಯ ನಾಶಕ್ಕೂ ಸಂಚು!
ಏಳು ಮಂದಿಯ ಹತ್ಯೆಯ ಬಳಿಕ ಮೃತದೇಹಗಳನ್ನು ಸಾಗಿಸುವುದು ಹಾಗೂ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕೂ ಆರೋಪಿ ಮೊದಲೇ ಯೋಜನೆ ರೂಪಿಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಈಗಾಗಲೇ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಕುಟುಂಬದವರು ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಏಳು ಮಂದಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಗೆ ಬಳಸಿದ ವಿಧಾನ ಸೇರಿದಂತೆ ಹಲವು ಮಹತ್ವದ ಸಂಗತಿಗಳು ತಿಳಿದುಬರಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಸ್ತಿ ವಿವಾದವೂ ಹತ್ಯೆಗೆ ಪ್ರಮುಖ ಕಾರಣ: ಪೊಲೀಸ್ ಆಯುಕ್ತ
ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತನಾಡಿ, ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿಯ ವೈಯಕ್ತಿಕ ದ್ವೇಷದ ಜತೆಗೆ ಹಣಕಾಸಿನ ವಿಚಾರವೂ ಪ್ರಮುಖ ಕಾರಣವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ತನಿಖಾಧಿಕಾರಿಯೂ ಆಗಿರುವ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!