Connect with us

ಅಪರಾಧ

BSY-ಬಿ ಎಸ್ ವೈ ಗೆ ಬಂಧನ ಭೀತಿ

Published

on

Ad Widget

Ad Widget

Ad Widget

Ad Widget

ಮಂಗಳೂರು : ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ- 2012) ಪ್ರಕರಣದ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್ ಕಮಿಶನರ್ ಅವರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಸಂತ್ರಸ್ತ ಬಾಲಕಿಯ ಅಣ್ಣ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

Ad Widget

Ad Widget

Ad Widget

Ad Widget

ಪ್ರಕರಣವೇನು?: ಬಿ.ಎಸ್. ಯಡಿಯೂರಪ್ಪ ಅವರ ಬಳಿ ‘ನನ್ನ ಮಗಳ ಮೇಲೆ ಅತ್ಯಾಚಾರ ನಡೆದಿದೆ. ನನಗೆ ನ್ಯಾಯ ಕೊಡಿಸಿ’ ಎಂದು ಹೋಗಿದ್ದ 53 ವರ್ಷದ ಮಹಿಳೆಯೊಬ್ಬರು, ಯಡಿಯೂರಪ್ಪ ಅವರು ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.

Ad Widget

Ad Widget alt="Ad Widget"/>

Ad Widget

ಇದರನ್ವಯ ಪೊಲೀಸರು ಪೋಕ್ಸೊ ಕಾಯ್ದೆ ಕಲಂ 8 ಮತ್ತು ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 354(ಎ) ಅಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಎಫ್‌ಐಆ‌ರ್ ದಾಖಲಿಸಿದ್ದರು.

Ad Widget

Ad Widget <> Ad Widget

ದೂರಿನಲ್ಲಿ ಏನಿತ್ತು?: ‘ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಮೋಸ ಮಾಡಲಾಗಿದೆ. ನಮ್ಮ ಕೇಸನ್ನು ಎಸ್‌ಐಟಿಗೆ ವಹಿಸಿ ನಮಗೆ ನ್ಯಾಯ ಕೊಡಿಸಿ ಎಂದು ಕೇಳಿಕೊಂಡವು.

ಯಡಿಯೂರಪ್ಪ ಅವರು ನಮ್ಮೊಂದಿಗೆ ಸುಮಾರು 9 ನಿಮಿಷಗಳ ಕಾಲ ಮಾತನಾಡಿ ನಮಗೆ ಟೀ ಕುಡಿಸಿದರು. ನಮ್ಮ ಸಂಭಾಷಣೆಯ ನಡುವೆ ಯಡಿಯೂರಪ್ಪ ಅವರು ನನ್ನ 17 ವರ್ಷದ ಮಗಳ ಕೈ ಹಿಡಿದುಕೊಂಡು ಮಾತನಾಡಿಸುತ್ತಿದ್ದರು. ಮಗಳು ಅವರನ್ನು ತಾತ ಎನ್ನುತ್ತಾ ಮಾತನಾಡುತ್ತಿದ್ದಳು. ನಾನು ಅಪ್ಪಾಜಿ ಎಂದು ಸಂಭೋಧಿಸಿ ಮಾತನಾಡುತ್ತಿದ್ದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

Ad Widget

ಕೆಲ ಸಮಯದ ಯಡಿಯೂರಪ್ಪ ಅವರು ನನ್ನ ಮಗಳನ್ನು ರೂಮಿಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡು ಸುಮಾರು 5 ನಿಮಿಷ ರೂಮಿನ ಒಳಗೆ ಇದ್ದರು. ಆ ಸಮಯದಲ್ಲಿ ಯಡಿಯೂರಪ್ಪ ಅವರು ನನ್ನ ಮಗಳು ಧರಿಸಿದ್ದ ಶರ್ಟ್ ಒಳಗೆ ಕೈ ಹಾಕಿ ಬಲಭಾಗದ ವಕ್ಷಸ್ಥಲವನ್ನು ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದು, ನನ್ನ ಮಗಳು ಅವರಿಂದ ತಪ್ಪಿಸಿಕೊಂಡು ಆಚೆ ಬರಲು ಯತ್ನಿಸಿದರೂ ಆಕೆಯನ್ನು ಬಿಡದೆ ಲಾಕ್ ಮಾಡಿಕೊಂಡಿದ್ದರು. ನಂತರ ಯಡಿಯೂರಪ್ಪ ಅವರೇ ಬಾಗಿಲನ್ನು ಮೆಲ್ಲಗೆ ತೆರೆದು ಹೊರಬಂದಾಗ ನನ್ನ ಮಗಳು ರೂಮಿನಿಂದ ಆಚೆ ಬಂದು ನನಗೆ ಎಲ್ಲಾ ವಿಚಾರ ತಿಳಿಸಿದಳು’ ಎಂದು ದೂರಿನಲ್ಲಿ ವಿವರಿಸಲಾಗಿದೆ.

‘ನಾನು ಯಡಿಯೂರಪ್ಪ ಅವರಿಗೆ ಯಾಕೆ ಹೀಗೆ ಮಾಡಿದಿರಿ ಎಂದು ಕೇಳಿದ್ದಕ್ಕೆ, ಅವರು, ಆಕೆಗೆ ರೇಪ್ ಆಗಿದೆಯೊ ಇಲ್ಲವೊ ಎಂದು ಚೆಕ್ ಮಾಡಲು ಹಾಗೆ ಮಾಡಿದೆ ಎಂದು ಹೇಳಿ ತಕ್ಷಣವೇ ಕ್ಷಮೆ ಯಾಚಿಸುತ್ತಾ, ನಿಮಗೆ ಮೋಸ ಆಗಿರುವ ಬಗ್ಗೆ ನಾನು ಸಹಾಯ ಮಾಡುತ್ತೇನೆ ಎಂದರು. ಅದಕ್ಕೆ ನಾನು ಒಪ್ಪಲಿಲ್ಲ. ಆದರೂ ಯಡಿಯೂರಪ್ಪ ಅವರು ಈ ವಿಚಾರವನ್ನು ಹೊರಗೆ ಎಲ್ಲೂ ತಿಳಿಸಬಾರದು ಎಂದು ನಮ್ಮನ್ನು ತಡೆಯಲು ತುಂಬಾ ಪ್ರಯತ್ನಿಸಿರುತ್ತಾರೆ. ನನ್ನ ಮಗಳಿಗೆ ಆಗಿದ್ದ ಅನ್ಯಾಯದ ಬಗ್ಗೆ ನ್ಯಾಯ ದೊರಕಿಸುವಂತೆ ಕೇಳಲು ಹೋದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ವಿಶದವಾಗಿ ವಿವರಿಸಿದ್ದಾರೆ .

ರಿಟ್ ಅರ್ಜಿಯಲ್ಲಿ ಏನಿದೆ?: ದೂರು ನೀಡಿದ್ದ ಸಂತ್ರಸ್ತ ಬಾಲಕಿಯ ತಾಯಿ 2024ರ ಮೇ 27ರಂದು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈಗ ಅವರ ಪುತ್ರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಯಡಿಯೂರಪ್ಪ ಅವರ ಮನೆಯಲ್ಲಿ 2024ರ ಫೆಬ್ರವರಿ 2ರಂದು ಘಟನೆ ನಡೆದಿದೆ. ಮಾರ್ಚ್ 14ರಂದು ದೂರು ನೀಡಲಾಗಿದೆ. ಯಡಿಯೂರಪ್ಪ ಅವರ ಜೊತೆ ಮಾತನಾಡಿರುವ ವಿಡಿಯೊ ರೆಕಾರ್ಡಿಂಗ್ ಕೂಡಾ ಇದ್ದು ಅದರ ಪೆನ್ ಡ್ರೈವ್ ಅನ್ನು ಲಗತ್ತಿಸಲಾಗಿದೆ. ಸಂತ್ರಸ್ತ ಬಾಲಕಿ 2024ರ ಮಾರ್ಚ್ 14ರಂದು ಬೆಂಗಳೂರಿನ 25ನೇ ನ್ಯಾಯಾಲಯದಲ್ಲಿ ಅಪರಾಧ ಪ್ರಕ್ರಿಯಾ ಸಂಹಿತೆ 1973ರ తలం 164 (5) ఆడియల్లి నయం ಹೇಳಿಕೆ ದಾಖಲಿಸಿದ್ದಾಳೆ. ಈ ಕುರಿತಂತೆ, ಸಂತ್ರಸ್ತೆಯ ತಾಯಿ ಮಹಿಳಾ ಆಯೋಗದ ಅಧ್ಯಕ್ಷರಿಗೆ, ಮುಖ್ಯ ನ್ಯಾಯಮೂರ್ತಿ ಗಳಿಗೆ, ಎಡಿಜಿಪಿ ಹಾಗೂ ಇತರ ಪ್ರಮುಖರಿಗೆ ಪತ್ರ ಬರೆದಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಈತನಕ ಯಾವುದೇ ಪ್ರಗತಿಯಾಗಿಲ್ಲ’ ಎಂದು ವಿವರಿಸಲಾಗಿದೆ.

‘ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಈತನಕ ಪಂಚನಾಮೆ ಮಾಡಿಲ್ಲ. ಯಾವುದೇ ಸಾಕ್ಷ್ಯ ಸಂಗ್ರಹಿಸಿಲ್ಲ. ದಾಖಲೆಗಳನ್ನು ವಶಪಡಿಸಿಕೊಂಡಿಲ್ಲ. ನೋಟಿಸ್ ನೀಡಿಲ್ಲ. ಆದ್ದರಿಂದ, ಯಡಿಯೂರಪ್ಪ ಅವರನ್ನು ಬಂಧಿಸಿ, ವಿಚಾರಣೆ ನಡೆಸಿ ಸತ್ಯಾಂಶ ಬಯಲಿಗೆ ತರಬೇಕು. ಇದಕ್ಕಾಗಿ ಅಗತ್ಯವಿರುವ ಸಿಸಿಟಿವಿ ದೃಶ್ಯಗಳು, ಮೆಮೊರಿ ಕಾರ್ಡ್ ಮತ್ತು ಹಾರ್ಡ್ ಡಿಸ್ಕ್ ವಶಪಡಿಸಿಕೊಳ್ಳಬೇಕು. ತನಿಖೆಯನ್ನು ಚುರುಕುಗೊಳಿಸಿ ಒಂದು ತಿಂಗಳ ಒಳಗೆ ವರದಿ ಸಲ್ಲಿಸಲು ನಗರ ಪೊಲೀಸ್ ಆಯುಕ್ತರು ಮತ್ತು ಸಿಐಡಿ ಇನ್‌ಸ್ಪೆಕ್ಟರ್‌ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ಎಸ್. ಬಾಲನ್ ವಕಾಲತ್ತು ವಹಿಸಿದ್ದಾರೆ.

ಪ್ರಕರಣ ರದ್ದು ಕೋರಿ ಅರ್ಜಿ:
ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ನಾನು ಯಾವುದೇ ಕಾನೂನು ಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದುದಾರ ಮಹಿಳೆಗೆ ದೂರು ನೀಡುವುದೇ ಹವ್ಯಾಸ. ಎಫ್‌ಐಆರ್ ದಾಖಲಾದ ನಂತರ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿ ಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದರು. ದೂರಿನಲ್ಲಿ ಅಪರಾಧದ ಅಂಶಗಳು ಇಲ್ಲದೇ ಇರುವುದರಿಂದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿದ್ದಾರೆ.

ಸಿಐಡಿ ವಿಚಾರಣೆಗೆ ಬಿಎಸ್‌ವೈ ಗೈರು :
ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ (ಜೂ.12) ಸಿಐಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಲಿಲ್ಲ.
ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬುಧವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಆದರೆ, ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದ ಯಡಿಯೂರಪ್ಪ, ವಿಚಾರಣೆಗೆ ಗೈರಾಗಿದ್ದರು.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆ ಅಗತ್ಯವಿದ್ದು, ಬುಧವಾರ ಬೆಳಿಗ್ಗೆ 10.30ಕ್ಕೆ ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು.

ಅಶೋಕ್ ನಾಯಕ್ ವಿಶೇಷ ಪ್ರಾಸಿಕ್ಯೂಟರ್ :
ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ರೋ ಪ್ರಕರಣದಲ್ಲಿ ವಿಚಾರಣಾ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯಗಳಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಹಾಜರಾಗಿ ವಾದ ಮಂಡಿಸಲು ಅಶೋಕ್ ನಾಯಕ್ ಅವರನ್ನು ವಿಶೇಷ ಸರ್ಕಾರಿ ವಕೀಲರನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತಂತೆ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ. ಅಶೋಕ್ ನಾಯಕ್ ಅವರು ಪ್ರಜ್ವಲ್ ರೇವಣ್ಣ ನಾಯಕ್ ಪ್ರಕರಣದಲ್ಲೂ ವಿಚಾರಣಾ ನ್ಯಾಯಾಲಯಗಳಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ವಾದ ಮಂಡಿಸುತ್ತಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!