ಆರೋಗ್ಯ
Watermelon peel-ಹೊಟ್ಟೆ ತಂಪಾಗಿಸುವ ಕಲ್ಲಂಗಡಿ ಹಣ್ಣಿನ ಸಿಪ್ಪೆಯ ಆರೋಗ್ಯ ಪ್ರಯೋಜನಗಳು
ಕಲ್ಲಂಗಡಿ ಹಣ್ಣನ್ನು ನಾವೆಲ್ಲರೂ ತಿನ್ನಲು ಇಷ್ಟಪಡುತ್ತೇವೆ. ಕಲ್ಲಂಗಡಿ ಹಣ್ಣು ನಮ್ಮನ್ನು ರಿಫ್ರೆಶ್ ಮಾಡುವ ಗುಣವನ್ನು ಹೊಂದಿದೆ. ಕಲ್ಲಂಗಡಿ ಹಣ್ಣಿನ ಸಿಪ್ಪೆಯು ತುಂಬಾ ಆರೋಗ್ಯಕರವಾಗಿದೆ ಮತ್ತು ನಂಬಲಾಗದಷ್ಟು ಪೌಷ್ಟಿಕ ಅಂಶಗಳನ್ನು ಹೊಂದಿದೆ. ಕಲ್ಲಂಗಡಿ ಸಿಪ್ಪೆಯು ವಿಟಮಿನ್ ಎ, ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ನಲ್ಲಿ ಸಮೃದ್ಧವಾಗಿರುವ ಕಾರಣ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
ಇದು ಫೈಬರ್ ನಲ್ಲಿ ಸಮೃದ್ಧವಾಗಿದೆ. ಅನೇಕ ಜೀರ್ಣಕಾರಿ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ. ಕಲ್ಲಂಗಡಿ ತೊಗಟೆಯು ನಿಮ್ಮ ಹೃದಯಕ್ಕೆ ಒಳ್ಳೆಯದು ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕಲ್ಲಂಗಡಿ ಸಿಪ್ಪೆ ಎಂದರೇನು?
ಕಲ್ಲಂಗಡಿಯಲ್ಲಿ ಅತ್ಯಂತ ರುಚಿಕರವಾದ ಭಾಗವು ರಸಭರಿತವಾದ ಕೆಂಪು ಭಾಗವಾಗಿದ್ದು, ಹೆಚ್ಚಿನ ಜನರು ತಿನ್ನಲು ಇಷ್ಟಪಡುತ್ತಾರೆ, ಕಲ್ಲಂಗಡಿಗಳ ಬಿಳಿ ಭಾಗವು ಸಹ ತಿನ್ನಲು ಯೋಗ್ಯವಾಗಿದೆ. ಕಲ್ಲಂಗಡಿ ಸಿಪ್ಪೆಯು ಕಲ್ಲಂಗಡಿಗಳ ಗಟ್ಟಿಯಾದ ಹೊರ ಪದರವಾಗಿದೆ ಮತ್ತು ಇದು ಖಾದ್ಯವಾಗಿದೆ. ಇದು ಹೊರಗೆ ಹಸಿರು ಮತ್ತು ಒಳಭಾಗದಲ್ಲಿ ಬಿಳಿ ಬಣ್ಣವನ್ನು ಹೊಂದಿರುತ್ತದೆ.
ಇದು ತಿನ್ನಲು ಯೋಗ್ಯವಾಗಿದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದನ್ನು ಹಸಿಯಾಗಿ ತಿನ್ನಬಹುದಾದರೂ, ಅದು ರುಚಿಕರವಾಗಿರುವುದಿಲ್ಲ. ಆದರೆ ಇದನ್ನು ಬೇಯಿಸಿ, ಹುರಿದು, ವಿವಿಧ ಪಾಕವಿಧಾನಗಳಿಗೆ ಸೇರಿಸಿ ತಿನ್ನಬಹುದು.
ಕಲ್ಲಂಗಡಿ ಸಿಪ್ಪೆಯ ಆರೋಗ್ಯ ಪ್ರಯೋಜನಗಳು:
- ಹೆಚ್ಚು ಫೈಬರ್ ಅಂಶವನ್ನು ಹೊಂದಿರುತ್ತದೆ :
ಕಲ್ಲಂಗಡಿ ಸಿಪ್ಪೆಯ ಪ್ರಮುಖ ಪ್ರಯೋಜನವೆಂದರೆ ಅದು ಬಹಳಷ್ಟು ಫೈಬರ್ ಅನ್ನು ಹೊಂದಿರುತ್ತದೆ. ಹೆಚ್ಚಿನ ಫೈಬರ್ ಆಹಾರವು ಕರುಳಿನ ಚಲನೆಯ ಕ್ರಮಬದ್ಧತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅನೇಕ ರೋಗಗಳನ್ನು ತಡೆಯುತ್ತದೆ.
ಇದು ನಿಮ್ಮನ್ನು ಪೂರ್ಣವಾಗಿಡಲು ಸಹಾಯ ಮಾಡುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಫುಡ್ ಟೆಕ್ನಾಲಜಿ ಮತ್ತು ಬಯೋಟೆಕ್ನಾಲಜಿಯಲ್ಲಿ ಪ್ರಕಟವಾದ ಅಧ್ಯಯನವು ಕಲ್ಲಂಗಡಿ ಸಿಪ್ಪೆಯಲ್ಲಿನ ಫೈಬರ್ ಅಂಶವು ಡುರಮ್ ಗೋಧಿ ಪಾಸ್ಟಾಕ್ಕಿಂತ ಹೆಚ್ಚಿನದಾಗಿದೆ ಎಂದು ಸೂಚಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ಹೆಚ್ಚಿನ ಪ್ರಮಾಣದ ಆಹಾರದ ಫೈಬರ್ ಮತ್ತು ಪ್ರೋಟೀನ್ಗಳು ಮತ್ತು ಖನಿಜಗಳಿವೆ ಎಂದು ಅಧ್ಯಯನವು ಹೇಳುತ್ತದೆ.
- ರಕ್ತದೊತ್ತಡಕ್ಕೆ ಸಹಾಯ ಮಾಡುತ್ತದೆ:
ಕಲ್ಲಂಗಡಿ ಸಿಪ್ಪೆಯು ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಮೇರಿಕನ್ ಜರ್ನಲ್ ಆಫ್ ಹೈಪರ್‌ಟೆನ್ಶನ್‌ನಲ್ಲಿ ಪ್ರಕಟವಾದ ಅಧ್ಯಯನವು ಬೊಜ್ಜು ರೋಗಿಗಳ ರಕ್ತದೊತ್ತಡವನ್ನು ಕಡಿಮೆ ಮಾಡಲು ಕಲ್ಲಂಗಡಿ ಸಿಪ್ಪೆಯು ಪ್ರಯೋಜನಕಾರಿಯಾಗಿದೆ ಎಂದು ಸೂಚಿಸಿದೆ. ಇದು ಮೂತ್ರವರ್ಧಕ, ದೇಹದಲ್ಲಿ ನೀರಿನಂಶವನ್ನು ಹೆಚ್ಚಿಸುವ ಔಷಧಿ ಎಂದು ತಿಳಿದುಬಂದಿದೆ. ಇದು ರಕ್ತದೊತ್ತಡದ ನಿಯಂತ್ರಣಕ್ಕೂ ಸಹಾಯ ಮಾಡುತ್ತದೆ. - ಜೀವಸತ್ವಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿದೆ:
ಕಲ್ಲಂಗಡಿ ಸಿಪ್ಪೆಯು ಅನೇಕ ಜೀವಸತ್ವಗಳು ಮತ್ತು ಖನಿಜಗಳ ಆರೋಗ್ಯಕರ ಮೂಲವಾಗಿದೆ. ಟ್ರೆಂಡ್ಸ್ ಇನ್ ಫುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಕಲ್ಲಂಗಡಿ ತೊಗಟೆಯು ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಮತ್ತು ಕಬ್ಬಿಣವನ್ನು ಹೊಂದಿರುತ್ತದೆ ಮತ್ತು ಇದು ಪೋಷಣೆಗೆ ಅವಶ್ಯಕವಾಗಿದೆ ಎಂದು ಹೇಳುತ್ತದೆ. - ಲೈಂಗಿಕ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ:
ಕಲ್ಲಂಗಡಿ ಸಿಪ್ಪೆಯಲ್ಲಿ ಸಿಟ್ರುಲಿನ್ ಎಂಬ ಅಮೈನೋ ಆಮ್ಲವಿದೆ. ವಯಾಗ್ರವನ್ನು ಬಳಸದೆಯೇ ಇದು ನಿಮಿರುವಿಕೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಮೂತ್ರಶಾಸ್ತ್ರದಲ್ಲಿ ಪ್ರಕಟವಾದ ಈ ಅಧ್ಯಯನವು ಹೇಳುತ್ತದೆ. ಇದು ವೀರ್ಯದ ಗುಣಮಟ್ಟ ಮತ್ತು ಟೆಸ್ಟೋಸ್ಟೆರಾನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ. - ವ್ಯಾಯಾಮದ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ:
ಕಲ್ಲಂಗಡಿ ಸಿಪ್ಪೆಯು ಸೇವನೆಯು ನಿಮಗೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಇದು ಸಿಟ್ರುಲಿನ್ ಅನ್ನು ಹೊಂದಿರುತ್ತದೆ ಮತ್ತು ಇದು ನಿಮ್ಮ ಸ್ನಾಯುಗಳಿಗೆ ಸಾಕಷ್ಟು ಆಮ್ಲಜನಕವನ್ನು ತಲುಪಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ವ್ಯಾಯಾಮದ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಎಂದು ಜರ್ನಲ್ ಆಫ್ ಅಪ್ಲೈಡ್ ಫಿಸಿಯಾಲಜಿಯಲ್ಲಿ ಪ್ರಕಟವಾದ ಈ ಅಧ್ಯಯನವು ಹೇಳುತ್ತದೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ6 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ6 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















