ಬಿಗ್ ನ್ಯೂಸ್
ಮಡಿಕೇರಿ: ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಕೋಟ್ಯಾಂತರ ವಂಚಿಸಿದ ಬೃಹತ್ ಜಾಲ ಪತ್ತೆ| ಡಿಸಿ ಹೆಸರಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿ –ವಂಚನೆ; ಪುತ್ತೂರಿನ ಯುವಕ ಸಹಿತ ಇಬ್ಬರ ಬಂಧನ
ಪುತ್ತೂರು: ಸರ್ಕಾರಿ ಉದ್ಯೋಗ ಕೊಡುವುದಾಗಿ ನಂಬಿಸಿ ಕೊಡಗು , ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ನೂರಾರು ಜನಕ್ಕೆ ಕೋಟ್ಯಾಂತರ ರೂಪಾಯಿ ವಂಚಿಸಿದ ಹಾಗೂ ಜಿಲ್ಲಾಧಿಕಾರಿಗಳ ಸಹಿ ಇರುವ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಮೋಸ ಮಾಡಿದ ಬೃಹತ ಜಾಲವೊಂದನ್ನು ಮಡಿಕೇರಿ ಡಿಸಿಐಬಿ ಪೊಲೀಸರು ಸೆ 7 ರಂದು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಒರ್ವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ ಇನ್ನೊರ್ವ ಮೈಸೂರು ಜಿಲ್ಲೆ ನಿವಾಸಿಯಾಗಿದ್ದಾನೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಬಂಡಾಜೆ ನಿವಾಸಿ ಪುತ್ತೂರಿನ ಹೊರ ವಲಯ ಸಾಲ್ಮರದಲ್ಲಿ ವಾಸವಿರುವ ಪುನಿತ್ ಕುಮಾರ್(32ವ) ಹಾಗೂ ಮೈಸೂರು ಜಿಲ್ಲೆಯ ಗಾಯತ್ರಿಪುರ ಜ್ಯೋತಿನಗರದ ಅರುಣ್ ಕುಮಾರ್ (30ವ) ಬಂಧಿತರು.
ಗ್ರಾಮ ಲೆಕ್ಕಿಗ ಹುದ್ದೆಗೆ ಜಿಲ್ಲಾಡಳಿತದ ಲಾಂಛನವನ್ನು ಮುದ್ರಿಸಿ ಜಿಲ್ಲಾಧಿಕಾರಿಗಳ ಸಹಿಯನ್ನು ನಕಲು ಮಾಡಿ ಜಿಲ್ಲಾಧಿಕಾರಿಗಳೇ ನೇಮಕಾತಿ ಪತ್ರ ಕಳುಹಿಸಿದಂತೆ ನಂಜರಾಯಪಟ್ಟಣದ ಕೆ.ಎಂ.ಯಶ್ವಿತಾ ಎಂಬವರಿಗೆ ಅಂಚೆ ಮೂಲಕ ನಕಲಿ ನೇಮಕಾತಿ ಪತ್ರವನ್ನು ಆರೋಪಿಗಲು ಕಳುಹಿಸಿದ್ದರು. ನಂತರ ಆಕೆ ಬಳಿ ರೂ. 1.50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಅನುಮಾನಗೊಂಡ ಯಶ್ವಿತಾ ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು, ಈ ಬಳಿಕ ಜಿಲ್ಲಾಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿ ಎಚ್ಚರಿಕೆಯ ಸಂದೇಶವನ್ನು ನೀಡಿದ್ದರು.

ಆ ನಂತರ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಿರಸ್ತೆದಾರ್ ಪ್ರಕಾಶ್ ರವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಜಿಲ್ಲಾ ಅಪರಾಧ ಪತ್ತೆ ದಳದ ಸಿಬಂದಿಗಳು ಚಂದ್ರಶೇಖರ್, ರಾಜಮಣಿ ಯಾನೆ ಲೋಕೇಶ್, ಮತ್ತು ಗಣಪತಿ ಯಾನೆ ಶಬರೀಶ ಎಂಬವರನ್ನು ಈ ಪ್ರಕರಣಕ್ಕೆ ಸಂಭಂದಿಸಿದಂತೆ ಬಂಧಿಸಿದರು. ಈ ನಡುವೆ ವಂಚಕರ ಜಾಲದ ಪ್ರಮುಖ ರೂವಾರಿ ಪುನಿತ್ ತಲೆಮರೆಸಿಕೊಂಡಿದ್ದ.
ಮೂವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದ ತನಿಖಾ ತಂಡಕ್ಕೆ ಮತ್ತೊಂದು ದೊಡ್ಡ ವಂಚನೆ ಬೆಳಕಿಗೆ ಬಂದಿದೆ. ಮಡಿಕೇರಿ ನಿವಾಸಿಯೊಬ್ಬರ ಪುತ್ರನಿಗೆ ಪೊಲೀಸ್ ಉಪ ನಿರೀಕ್ಷಕರ ಹುದ್ದೆ ಕೊಡಿಸುವುದಾಗಿ ನಕಲಿ ನೇಮಕಾತಿ ಪತ್ರ ನೀಡಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ವಾರದ ಹಿಂದೆ ದೂರು ದಾಖಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಪ್ರಕರಣದ ತನಿಖೆಯನ್ನು ಸಿಐಡಿ ಬೆಂಗಳೂರು ಘಟಕಕ್ಕೆ ವರ್ಗಾಯಿಸಿದ್ದರು.

ಈ ಪ್ರಕರಣದ ತನಿಖೆಯ ವೇಲೆ ಜಿಲ್ಲಾ ಅಪರಾಧ ಪತ್ತೆ ದಳದವರು ನಡೆಸುತ್ತಿರುವ ಪ್ರಕರಣಕ್ಕೂ ಸಿಐಡಿಯವರು ನಡೆಸುತ್ತಿರುವ ತನಿಖೆಗೂ ಸಾಮ್ಯತೆ ಕಂಡು ಬಂದಿತ್ತು. ಈ ಹಿನ್ನಲೆಯಲ್ಲಿ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿ ಪ್ರಕರಣದ ಪ್ರಮುಖ ಆರೋಪಿಯಾದ ಪ್ರಮುಖ ಆರೋಪಿ ಪುತ್ತೂರಿನ ಪುನಿತ್ ಕುಮಾರ್ ಮತ್ತು ಮೈಸೂರಿನ ಅರುಣ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿ ಪುನಿತ್ ನಿಂದ ರೂ. 5.50 ಲಕ್ಷ ನಗದು ಮತ್ತು ರೂ. 3 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಸಿಐಡಿ ವಶಕ್ಕೆ:
ಬೃಹತ್ ನಕಲಿ ಉದ್ಯೋಗ ಜಾಲ ಬಗೆದಷ್ಟು ಆಳವಿದ್ದು, ನ್ಯಾಯಲಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಸಿಐಡಿ ವಶಕ್ಕೆ ನೀಡಿದೆ. ಕೊಡಗು ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗುಪ್ತ ದಳದ ನಿರೀಕ್ಷಕ ಐ.ಪಿ ಮೇದಪ್ಪ, ಅಪರಾಧ ಪತ್ತೆ ದಳದ ಸಹಾಯಕ ಠಾಣಾಧಿಕಾರಿ ಹಮೀದ್, ಸಿಬ್ಬಂದಿಗಳಾದ ಯೋಗೇಶ್ ಕುಮಾರ್, ನಿರಂಜನ್, ವಸಂತ, ವೆಂಕಟೇಶ್, ಶರತ್ ರೈ, ಸುರೇಶ್, ಅನಿಲ್ ಕುಮಾರ್, ಸಿಡಿಆರ್ ಘಟಕದ ರಾಜೇಶ್, ಗಿರೀಶ್ ಭಾಗವಹಿಸಿದ್ದರು
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ20 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ19 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ18 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್14 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ17 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ18 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ರಾಜಕೀಯ19 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
-
ಬಿಗ್ ನ್ಯೂಸ್19 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















