ಕ್ರೈಂ
ಉಪ್ಪಿನಗಂಡಿ :ವಿವಾಹಿತೆಯ ಕೊ*ಲೆ ಪ್ರಕರಣ ; ರಾತ್ರಿ ತಾಯಿ ಮತ್ತು ಅಕ್ಕನ ಮಗನ ಜತೆ ಮಲಗಿದ್ದ ಮಹಿಳೆಯ ಕತ್ತು ಹಿಸುಕಿದವರು ಯಾರು ?
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದರ್ಖಾಸು ಎಂಬಲ್ಲಿ ವಿವಾಹಿತೆಯೊಬ್ಬಳು ಜೂ 17ರ ತಡ ರಾತ್ರಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಉಪ್ಪಿನಂಗಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಳಿಯೂರು ಗ್ರಾಮದ ದರ್ಖಾಸು ನಿವಾಸಿ ಕಮಲರವರ ಕಿರಿಯ ಪುತ್ರಿ, ವಿಠಲ ಪೈ ಯಾನೆ ಶೈಲೇಶ್ ಎಂಬವರ ಪತ್ನಿ ಹೇಮಾವತಿ (37) ಕೊಲೆಯಾದವರು.
ಹೇಮಾವತಿಯವರು ತಾಯಿಯ ಮನೆಯಲ್ಲಿ ವಾಸವಿದ್ದು, ಪತಿ ಹೊರ ಊರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಜೂ 17 ರ ರಾತ್ರಿ ಮತ್ತು ಜೂ 18ರ ನಸುಕಿನ ಜಾವದ ಮಧ್ಯೆ ಹೇಮಾವತಿಯವರನ್ನು ಹತ್ಯೆ ಮಾಡಲಾಗಿದೆ. ಹೃದಯಾಘಾತದಿಂದ ಪತ್ನಿ ಸಾವನ್ನಪ್ಪಿರುವುದಾಗಿ ಮಾಹಿತಿ ಬಂದಿದರೂ, ಪತಿ ಶೈಲೇಶ್ ಅವರು ಮನೆಗೆ ಬಂದು ನೋಡಿದಾಗ, ಪತ್ನಿಯ ಶವದ ಮೇಲೆ ಗಾಯದ ಗುರುತುಗಳು ಕಂಡು ಬಂದ ಹಿನ್ನಲೆಯಲ್ಲಿ ಅವರು ಉಪ್ಪಿನಂಗಡಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಕಮಲರವರಿಗೆ ಇಬ್ಬರು ಪುತ್ರಿಯರು. ಹಿರಿಯ ಪುತ್ರಿಗೆ ಶಂಕರ್ ಎಂಬವರ ಜತೆ ಅಂತರ್ಜಾತಿಯ ವಿವಾಹಗಿತ್ತು. ದಂಪತಿಗಳಿಗೆ ಮೂವರು ಗಂಡು ಮಕ್ಕಳು. ಕೌಟುಂಬಿಕ ಸಮಸ್ಯೆಯಿಂದಾಗಿ ಕೆಲ ವರ್ಷಗಳ ಹಿಂದೆ ಹಿರಿಯ ಮಗಳು ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆದಾದ ಬಳಿಕ ಮೊದಲ ಮಗಳ ಗಂಡ ಹಾಗೂ ಮೂವರು ಮೊಮ್ಮಕ್ಕಳು ಕಮಲರವರ ಮನೆಯ ಪಕ್ಕದಲ್ಲೇ ಜೋಪಡಿಯಲ್ಲಿ ವಾಸಿಸುತ್ತಿದ್ದು, 2 ತಿಂಗಳ ಹಿಂದೆ ಸಮೀಪದ ಕರುವೇಲು ಎಂಬಲ್ಲಿ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿದ್ದು, ಅಲ್ಲಿ ವಾಸವಾಗಿದ್ದರು.
ವಿವಾಹದ ಬಳಿಕವು ಕಿರಿಯ ಪುತ್ರಿ ಹೇಮಾವತಿ ತಾಯಿಯ ಜತೆಯಲ್ಲೇ ವಾಸಿಸುತ್ತಿದ್ದರು. ಹೇಮಾವತಿಯವರ ಪತಿ ಶೈಲೇಶ್ ಬೇರೆ ಊರಿನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ
ಆ ರಾತ್ರಿ ಏನಾಯಿತು ?
ಜೂ 16 ರಂದು ಹೇಮಾವತಿಯವರ ಅಕ್ಕನ ಮಗ ಮಂಜು ಪ್ರಸಾದ್ ಕರುವೇಲಿನ ಬಾಡಿಗೆ ಮನೆಯಿಂದ ಅಜ್ಜಿ ಕಮಲರ ಮನೆಗೆ ಬಂದಿದ್ದ. ಕಮಲ, ಹೇಮಾವತಿ, ಮತ್ತು ಮಂಜುಪ್ರಸಾದ್ ರಾತ್ರಿ ಊಟ ಮಾಡಿ ಮಲಗಿದ್ದಾರೆ. ಮಧ್ಯರಾತ್ರಿ ಸಮಯ ಹೇಮಾವತಿಯವರು ಸಾವನ್ನಪ್ಪಿದ್ದ ಕುರಿತಾಗಿ ಆಕೆಯ ಪತಿಗೆ ಮಾಹಿತಿ ದೊರಕಿದೆ. ಬಂದು ನೋಡಿದಾಗ ಶವದ ಮೇಲೆ ಗಾಯದ ಗುರುತುಗಳು ಕಾಣಿಸಿದೆ. ಹೀಗಾಗಿ ರಾತ್ರಿ ವೇಳೆ ಯಾರೋ ವ್ಯಕ್ತಿಗಳು ಪತ್ನಿಯ ಕುತ್ತಿಗೆಯನ್ನು ಅದುಮಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಶೈಲೇಶ್ ಅವರು ದೂರು ನೀಡಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಐಪಿಸಿ ಕಲಂ 302ರಂತೆ ಕೊಲೆ ಪ್ರಕರಣ ದಾಖಲಾಗಿದೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
Uncategorized15 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್9 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ13 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ14 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ13 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್14 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















