ಬಿಗ್ ನ್ಯೂಸ್
Activa 7G-ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೈಬ್ರಿಡ್ ಹೊಂಡಾ ಆಕ್ಟಿವಾ 7G
ಪೆಟ್ರೋಲ್ ಹಾಗೂ ಬ್ಯಾಟರಿ ವಾಹನಗಳಿಗೆ ಭಾರತದಲ್ಲಿ ಬೇಡಿಕೆ ಹೆಚ್ಚಿದ್ದು, ಬ್ಯಾಟರಿ ವಾಹನಗಳನ್ನು ಕೊಳ್ಳುವವರ ಸಂಖ್ಯೆ ದಿನೇ ದಿನೇ ಏರಿಕೆ ಆಗುತ್ತಿದೆ. ಇದಕ್ಕೆ ಪೂರಕವಾಗಿ ಹೊಂಡಾ ತನ್ನ ಹೊಸ ಆಕ್ಟಿವಾ 7ಜಿ ಬಿಡುಗಡೆಗೆ ಪ್ಲ್ಯಾನ್ ಮಾಡಿಕೊಂಡಿದೆ. ವರದಿಗಳ ಪ್ರಕಾರ ಈ ಸ್ಕೂಟರ್ ಹೈಬ್ರಿಡ್ ಆಗಿರುವ ಸಾಧ್ಯತೆ ಇದೆ. ಇದು ಪೆಟ್ರೋಲ್, ಎಲೆಕ್ಟ್ರಿಕ್, ಬ್ಯಾಟರಿ ಸೆಟಪ್‌ನ್ನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆ ಇದೆ.
ಹೊಂಡಾ ಹೈಬ್ರಿಡ್ ಸ್ಕೂಟರ್ ತರಲು ತಯಾರಿ ನಡೆಸಿದೆಯಾ ಎಂಬ ಬಗ್ಗೆ ಸುದ್ದಿಗಳು ಬರಲು ಆರಂಭವಾಗಿವೆ. ಈ ಸ್ಕೂಟರ್‌ಗಳು ಪೆಟ್ರೋಲ್‌ನಲ್ಲಿ ಮಾತ್ರ ಚಲಿಸುತ್ತವೆ. ಎಲ್ಲ ಸ್ಕೂಟರ್‌ಗಳಲ್ಲಿ ಇದ್ದಂತೆ ಇಂಜಿನ್ ಆರಂಭವಾದ ನಂತರ, ಬ್ಯಾಟರಿ ಚಾರ್ಜ್ ಆಗಲು ಆರಂಭಿಸುತ್ತದೆ. ಇನ್ನು ದಿಬ್ಬ, ಹಳ್ಳ, ಗುಂಡಿಗಳಲ್ಲಿ ಪ್ರಯಾಣಿಸುವಾಗ ಹೆಚ್ಚಿನ ಇಂಧನ ವ್ಯಯವಾಗುತ್ತದೆ. ಆದರೆ ಇದನ್ನು ತಪ್ಪಿಸಲು ಕಾರ್ಯ ನಡೆದಿದೆ. ಇದರಿಂದ ಪೆಟ್ರೊಲ್ ಬಳಕೆ ಕಡಿಮೆ ಆಗುತ್ತದೆ.
ಹೋಂಡಾ ಆಕ್ಟಿವಾ 7G ವಿಶೇಷತೆ:
ಹೋಂಡಾ ಆಕ್ಟಿವಾ 7G ಸ್ಕೂಟರ್, 109 ಸಿಸಿ ಸಿಂಗಲ್ ಸಿಲೆಂಡರ್ ಹೊಂದಿರುವ ಸಾಧ್ಯತೆ ಇದೆ. ಅಲ್ಲದೆ ಲಾಂಗ್ ಡ್ರೈವ್‌ಗಳಲ್ಲಿ ಇರುವ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ. ಹೆಚ್ಚಿನ ವೇಗಕ್ಕಾಗಿ, ಇದು 7.6bhp ಮತ್ತು 8.8Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರ ಎಂಜಿನ್ 45 ರಿಂದ 50 ಕೆಎಂಪಿಎಲ್ ಮೈಲೇಜ್ ನೀಡುವ ಸಾಧ್ಯತೆ ಇದೆ. ಎಂದಿನಂತೆ ಈ ಸ್ಕೂಟರ್‌ನಲ್ಲೂ ಎಂಜಿನ ಆನ್ ಆಫ್ ಬಟನ್ ಸಿಗಲಿದೆ. ಈ ಟೂವಿಲರ್ 5.3 ಲೀಟರ್ ಟ್ಯಾಂಕ್ ಹೊಂದಿರಲಿದೆ. ಮಿಶ್ರ ಲೋಹದ ಚಕ್ರ, ಡಿಸ್ಕ್ ಬ್ರೇಕ್ ಗಳು ಇದರ ವಿಶೇಷತೆಗಳಾಗಿವೆ.
ಅಕ್ಟೋಬರ್‌ನಲ್ಲಿ ಮಾರುಕಟ್ಟೆಗೆ ಎಂಟ್ರಿ?
ಹೊಂಡಾ ಆಕ್ಟಿವಾ ಭಾರತದಲ್ಲಿ ಉತ್ತಮ ಮಾರುಕಟ್ಟೆಯನ್ನು ಹೊಂದಿದೆ. ಇದನ್ನೇ ತನ್ನ ಮಾರುಕಟ್ಟೆಯ ಬಂಡವಾಳವಾಗಿಟ್ಟುಕೊಂಡು ಹೊಂಡಾ, 80 ರಿಂದ 90 ಸಾವಿರ ಎಕ್ಸ್ ಶೋ ರೂಮ್ ಆರಂಭಿಕ ಬೆಲೆಯಲ್ಲಿ ಹೊಂಡಾ ಆಕ್ಟಿವಾ 7ಜಿ ಲಾಂಚ್ ಮಾಡುವ ಸಾಧ್ಯತೆ ಇದೆ. ಈ ಸ್ಕೂಟರ್ ಭಾರತೀಯ ರಸ್ತೆಗಳಲ್ಲಿ ಅಕ್ಟೋಬರ್‌ನಲ್ಲಿ ಕಾಣಿಸಿಕೊಳ್ಳಬಹುದು ಎಂದು ಅಂದಾಜಿಸಲಾಗುತ್ತಿದೆ.
ಹೊಂಡಾ ಹೈಬ್ರಿಡ್ ಸ್ಕೂಟರ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ವಿವಿಧ ಕಂಪನಿಯ ಸ್ಕೂಟರ್‌ಗಳಿಗೆ ಪೈಪೋಟಿ ನೀಡುವುದಂತು ಸುಳ್ಳಲ್ಲ. ಈಗಾಗಲೇ ಮಾರುಕಟ್ಟೆಯಲ್ಲಿ ಹೈಬ್ರಿಡ್ ಮಾದರಿಯ ಹಲವು ಸ್ಕೂಟರ್‌ಗಳು ಇದ್ದು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿವೆ.
ಸ್ಥಳೀಯ
Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.
ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಅಂತರ ರಾಜ್ಯ
WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.
ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.
WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.
CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.
CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.
CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.
ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.
CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.
ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
Uncategorized2 hours ago
ಪುತ್ತೂರು : ಅಡಿಕೆ ತೆಗೆಯುವಾಗ ಕಂಗಿನಿಂದ ಬಿದ್ದು ಗಂಭೀರ ಗಾಯ: ಚಿಕಿತ್ಸೆಗೆ ₹8 ಲಕ್ಷದ ಅಗತ್ಯ; ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ
-
Uncategorized9 hours ago
ಕಾರ್ಯಕರ್ತರ ಶ್ರಮದಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ನಿರ್ಮಾಣ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಧರ್ಮಸಭೆ
-
Uncategorized2 hours ago
ಗ್ರಾಮೀಣ ವಿದ್ಯಾರ್ಥಿಗಳಿಗೆ ಮಡಿಯಾಲದಲ್ಲಿ ಉಚಿತ ಎಐ ಪದವಿ ಶಿಕ್ಷಣ ಕೇಂದ್ರ; ನ. 30ರಂದು ನಾರಾಯಣ ಭಟ್ ಜನ್ಮಶತಾಬ್ದಿ ಸ್ಮರಣಾರ್ಥ ಭೂಮಿಪೂಜೆ; 2027–28ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಯೋಜನೆ















