ಶಿಕ್ಷಣ
Ambika-ಅಂಬಿಕಾ ಮಹಾವಿದ್ಯಾಲಯದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ; ಸಾಧನೆಯ ಮೂಲಕ ಯಶಸ್ಸನ್ನು ಒಲಿಸಿಕೊಳ್ಳಬೇಕು : ಸುಬ್ರಹ್ಮಣ್ಯ ನಟ್ಟೋಜ
ಪುತ್ತೂರು: ಸಾಧನೆಯ ಮೂಲಕ ನಮ್ಮನ್ನು ನಾವು ಸಮಾಜದಲ್ಲಿ ಗುರುತು ಮಾಡಿಕೊಳ್ಳಬೇಕು. ಹಠದಿಂದ ಗುರಿಯೆಡೆಗೆ ಅಡಿಯಿಟ್ಟರೆ ಯಶಸ್ಸು ನಮ್ಮದಾಗುತ್ತದೆ. ಹಾಗಾಗಿ ಸಾಧನೆಯ ಹಾದಿಯಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಅವೆಲ್ಲವನ್ನೂ ಮೀರಿನಿಂತು ಗೆಲ್ಲುವ ಛಲ ಹೊಂದಿರಬೇಕಾದದ್ದು ಅತ್ಯಂತ ಅಗತ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು.
ದೇಶದ ಆಸ್ತಿಗಳಾಗಿ ವಿದ್ಯಾರ್ಥಿಗಳು ಮೂಡಿಬರಬೇಕು. ಸನಾತನ ಧರ್ಮ ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಹೊತ್ತು ಮುಂದುವರೆಯಬೇಕು. ದೇಶಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸುವ ತ್ಯಾಗಬುದ್ಧಿ ನಮ್ಮಲ್ಲಿರಬೇಕು. ನಮ್ಮ ಜೀವನವೇ ನಮ್ಮ ದೇಶಕ್ಕಾಗಿ ಎಂಬ ಸ್ಪಷ್ಟ ಚಿಂತನೆಯೊಂದಿಗೆ ನಾವು ಬೆಳೆಯಬೇಕು. ಶಿಕ್ಷಣ ಸಂಸ್ಥೆಯಲ್ಲಿ ಕಲಿತದ್ದನ್ನು ಸಮಾಜಮುಖಿಯಾಗಿ ಬಳಸಿಕೊಂಡು ಉನ್ನತ ನಾಗರಿಕರೆನಿಸಬೇಕು ಎಂದು ಕರೆನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಜೀವನದ ಹಾದಿಯಲ್ಲಿ ಏಟುಗಳು ಬೀಳುತ್ತಿರುತ್ತವೆ. ಅವುಗಳಿಂದ ತಪ್ಪಿಸಿಕೊಂಡು ಜಾಣ್ಮೆಯಿಂದ ಮುನ್ನಡೆಯುವ ತಂತ್ರಗಾರಿಕೆಗಳನ್ನು ಕರಗತಮಾಡಿಕೊಳ್ಳಬೇಕು. ದೃಢ ಮನಸ್ಸಿದ್ದಾಗ ಮಾತ್ರ ಉನ್ನತ ಸಾಧನೆ ಸಾಧ್ಯವಾಗಬಹುದು ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ವಿದ್ಯಾರ್ಥಿಗಳಿಗೆ ತಪ್ಪು ಒಪ್ಪುಗಳ ಅರಿವನ್ನು ಮೂಡಿಸುವ ಶಿಕ್ಷಣವನ್ನು ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಸಂಸ್ಥೆಯಿಂದಾಗಿದೆ. ತಮಗೆ ದೊರೆತಿರುವ ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಸಾಧನೆಯೆಡೆಗೆ ವಿದ್ಯಾರ್ಥಿಗಳು ಅಡಿಯಿರಿಸಬೇಕು. ವಿದ್ಯಾರ್ಥಿಗಳು ಹಾಗೂ ಬೋಧಕರು ಪರಸ್ಪರ ಅರಿತುಕೊಂಡು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದಾಗ ಸುಲಲಿತ ವ್ಯವಸ್ಥೆ ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಳೆದ ಮೂರು ವರ್ಷಗಳಿಂದ ಕಾಲೇಜಿನ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ಸಂಸ್ಥೆಯಲ್ಲಿನ ಪೂರ್ಣಕಾಲಿಕ ಹುದ್ದೆಗೆ ವಿದಾಯಹೇಳುತ್ತಿರುವ ವಿದ್ವಾನ್ ತೇಜಶಂಕರ ಸೋಮಯಾಜಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸಂಸ್ಥೆಯಲ್ಲಿ ದೇಶ ಹಾಗೂ ಧರ್ಮದ ಬಗೆಗೆ ಒಡಮೂಡಿಸಲಾಗುತ್ತಿರುವ ಜಾಗೃತಿಯ ಬಗೆಗೆ ಸೋಮಯಾಜಿ ಸಂತಸ ವ್ಯಕ್ತಪಡಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿಗಳ ಬಗೆಗೆ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಪ್ರಿಯಾಲ್ ಆಳ್ವಾ, ಪ್ರಥಮ ಬಿ.ಕಾಂ ವಿದ್ಯಾರ್ಥಿ ಪ್ರದ್ಯುಮ್ನ ಹಾಗೂ ಪ್ರಥಮ ಬಿ.ಎ ವಿದ್ಯಾರ್ಥಿನಿ ಅಕ್ಷಿತಾ ಅನಿಸಿಕೆ ವ್ಯಕ್ತಪಡಿಸಿದರು. ಅಂತಿಮ ಪದವಿ ವಿದ್ಯಾರ್ಥಿಗಳಾದ ಅನ್ಮಯ್ ಭಟ್, ಶ್ರೀರಾಮ, ಚೈತನ್ಯಾ ಸಿ ಹಾಗೂ ಪಂಚಮಿ ಬಾಕಿಲಪದವು ಅಭಿಪ್ರಾಯ ಹಂಚಿಕೊAಡರು. ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಕೀರ್ತನಾ ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕ ಗಿರೀಶ್ ಭಟ್ ಕುವೆತ್ತಂಡ ಸ್ವಾಗತಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅನನ್ಯಾ ವಿ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಜಯಂತಿ ಪಿ. ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ18 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು16 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು14 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ18 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ18 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ17 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ18 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ19 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















