ಶಿಕ್ಷಣ
D.K.-ದ.ಕ.: 30 ಸ.ಹಿ.ಪ್ರಾ. ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ : ಪುತ್ತೂರಿಗೆ ಕೇವಲ 2 -ಬಂಟ್ವಾಳಕ್ಕೆ ಸಿಂಹಪಾಲು
ಮಂಗಳೂರು: ರಾಜ್ಯದಲ್ಲಿ ಒಟ್ಟು 1,419 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅವುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 30 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಶೈಕ್ಷಣಿಕ ವರ್ಷದಲ್ಲಿ 30 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳು ಆರಂಭಗೊಂಡಿದ್ದು ಇವುಗಳಲ್ಲಿ ಬಂಟ್ವಾಳ ಬ್ಲಾಕ್‌ಗೆ ಸಿಂಹಪಾಲು ದೊರೆತಿದೆ.
ಈ ಶಾಲೆಗಳಿಗೆ ಇಂಗ್ಲಿಷ್ ಭಾಷೆ ತರಬೇತಿ ಸಂಸ್ಥೆ ಮತ್ತು ಅಜೀಂ ಪ್ರೇಮ್ ಜೀ ಪ್ರತಿಷ್ಠಾನದೊಂದಿಗೆ ಕೈಜೋಡಿಸಿ ಪಠ್ಯಪುಸ್ತಕದೊಂದಿಗೆ ಶಿಕ್ಷಕರ ಕೈಪಿಡಿ, ಕಲಿಕಾ ಬೋಧನಾ ಸಾಮಗ್ರಿ, ಇ–ಪಠ್ಯವಸ್ತು ಒದಗಿಸಲಾಗುತ್ತದೆ. ಗಣಿತ ಮತ್ತು ಇಂಗ್ಲಿಷ್ ವಿಷಯಗಳನ್ನು ಎನ್‌ಸಿಇಆರ್‌ಟಿ ಪಠ್ಯಕ್ರಮದಂತೆ, ಪರಿಸರ ಅಧ್ಯಯನ ಮತ್ತು ಕನ್ನಡ ವಿಷಯಗಳನ್ನು ಕರ್ನಾಟಕ ಪಠ್ಯಪುಸ್ತಕ ಸಂಘದ ಪಠ್ಯಕ್ರಮದಂತೆ ಪಾಠ ಮಾಡಲು ಸರ್ಕಾರ ಸೂಚಿಸಿದೆ.
ಬಂಟ್ವಾಳ ಬ್ಲಾಕ್‌ಗೆ ಜಿಲ್ಲೆಯ 30 ಶಾಲೆಗಳಲ್ಲಿ ಗರಿಷ್ಠ ಅವಕಾಶ ದೊರೆತಿದ್ದು, 13 ಶಾಲೆಗಳು ದ್ವಿಭಾಷಾ ಮಾಧ್ಯಮ ಬೋಧನೆಗೆ ಆಯ್ಕೆಗೊಂಡಿವೆ. ಮಂಗಳೂರು ಉತ್ತರದಲ್ಲಿ ಆರು, ಮಂಗಳೂರು ದಕ್ಷಿಣದಲ್ಲಿ ನಾಲ್ಕು, ಸುಳ್ಯದಲ್ಲಿ ನಾಲ್ಕು, ಪುತ್ತೂರಿನಲ್ಲಿ ಎರಡು ಹಾಗೂ ಬೆಳ್ತಂಗಡಿ ಬ್ಲಾಕ್‌ನಲ್ಲಿ ಒಂದು ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಬೋಧನೆ ಆರಂಭವಾಗಿದೆ.
ಡಿಡಿಪಿಐ ವೆಂಕಟೇಶ ಪಟಗಾರ್ ರವರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ರೂಪಿಸಿರುವ ಈ ಕಾರ್ಯಕ್ರಮಕ್ಕೆ ಗ್ರಾಮೀಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆ ಇದೆ. ಜಿಲ್ಲೆಯಲ್ಲಿ ಕೆಪಿಎಸ್‌ಗಳಲ್ಲೂ ಪ್ರತಿವರ್ಷ ಗರಿಷ್ಠ ದಾಖಲಾತಿಗಳು ನಡೆಯುತ್ತಿವೆ ಎಂದು ತಿಳಿಸಿದರು.
ಈಗಾಗಲೇ ಜಿಲ್ಲೆಯಲ್ಲಿ 82 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಇದ್ದು, ಕಳೆದ ವರ್ಷ ಒಟ್ಟು 2,834 ಮಕ್ಕಳು ದಾಖಲಾಗಿದ್ದಾರೆ. ಹೊಸದಾಗಿ ದೊರೆತ 30 ಶಾಲೆಗಳಲ್ಲಿ ಈಗಾಗಲೇ ಇರುವ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮ ಬೋಧಿಸಲು ಹಾಲಿ ಇರುವ ಶಿಕ್ಷಕರನ್ನೇ ತರಬೇತುಗೊಳಿಸಲಾಗುತ್ತದೆ. ಈಗಾಗಲೇ ಡಯಟ್ ಮೂಲಕ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಅವರೇ ಇಂಗ್ಲಿಷ್ ಮಾಧ್ಯಮ ಬೋಧಿಸುತ್ತಾರೆ. ವಿದ್ಯಾರ್ಥಿಗಳ ದಾಖಲಾತಿಗೆ ಮಿತಿ ಇಲ್ಲ. ಪ್ರಸ್ತುತ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಶಿಕ್ಷಕರು, ಕೊಠಡಿ ಲಭ್ಯತೆ ಆಧರಿಸಿ ದಾಖಲಾತಿ ಮಿತಿಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಕನ್ನಡ ಮಾಧ್ಯಮಕ್ಕೆ ದಾಖಲಾತಿ ಕುಸಿತ:
ಇಂಗ್ಲಿಷ್ ಮಾಧ್ಯಮಕ್ಕೆ ಅನುಮತಿ ದೊರೆತ ಶಾಲೆಗಳಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಎರಡೂ ತರಗತಿಗಳು ಇರುತ್ತವೆ. ಆದರೆ, ಇಂಗ್ಲಿಷ್ ಮಾಧ್ಯಮ ಇರುವಲ್ಲಿ ಕನ್ನಡ ಮಾಧ್ಯಮಕ್ಕೆ ದಾಖಲಾತಿ ತೀವ್ರ ಕುಸಿತವಾಗುತ್ತಿದೆ. ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಕನ್ನಡ ಮಾಧ್ಯಮ ವಿಭಾಗದಲ್ಲಿದ್ದಾರೆ ಎಂದು ಶಿಕ್ಷಕರೊಬ್ಬರು ತಿಳಿಸಿದರು.
ಇಂಗ್ಲಿಷ್ ಮಾಧ್ಯಮ ಬೋಧನೆಗೆ ಆಯ್ಕೆಯಾದ ಶಾಲೆಗಳು:
ಬಂಟ್ವಾಳ ಬ್ಲಾಕ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡುಪಡುಕೋಡಿ, ಜಿಎಚ್‌ಪಿ ಮಾದರಿ ಶಾಲೆ ಒಕ್ಕೆತ್ತೂರು, ಜಿಎಚ್‌ಪಿ ಮಾದರಿ ಶಾಲೆ ಕಡೇಶ್ವಾಲ, ಜಿಎಚ್‌ಪಿಎಸ್ ಶಾಲೆ ಶಂಭೂರು, ಜಿಎಚ್‌ಪಿ ಮಾದರಿ ಶಾಲೆ ಮಾಣಿ, ಜಿಎಚ್‌ಪಿಎಸ್ ಕವಳಕಟ್ಟೆ (ಉರ್ದು), ಜಿಎಚ್‌ಪಿಎಸ್ ಕೋಡಂಗೆ, ಜಿಎಚ್‌ಪಿ ಮಾದರಿ ಶಾಲೆ ತುಂಬೆ, ಜಿಎಚ್‌ಪಿಎಸ್ ಬ್ರಹ್ಮರಕೂಟ್ಲು, ಜಿಎಚ್‌ಪಿಎಸ್ ಮಿಥೂರ್, ಜಿಎಚ್‌ಪಿಎಸ್ ಮೂಳರಪಟ್ಣ (ಉರ್ದು), ಜಿಎಚ್‌ಪಿಎಸ್ ನಲ್ಕೆಮಾರ್.
ಬೆಳ್ತಂಗಡಿ ಬ್ಲಾಕ್: ಜಿಎಚ್‌ಪಿಎಸ್ ಕಾಶಿಪಟ್ಣ.
ಮಂಗಳೂರು ಉತ್ತರ ಬ್ಲಾಕ್: ಜಿಎಚ್‌ಪಿ ಮಾದರಿ ಶಾಲೆ ಮರಕಡ, ಜಿಎಚ್‌ಪಿಎಸ್ ಕರಂಬಾರ, ಜಿಎಚ್‌ಪಿಎಸ್ ಸ್ಯಾಂಡ್ಸ್‌ಪಿಟ್, ಜಿಎಚ್‌ಪಿಎಸ್ ಮನಂಪಾಡಿ, ಜಿಎಚ್‌ಪಿಎಸ್ ಕೆಂಜಾರು, ಜಿಎಚ್‌ಪಿಎಸ್ ಕರ್ನಿರೆ.
ಮಂಗಳೂರು ದಕ್ಷಿಣ ಬ್ಲಾಕ್: ಜಿಎಚ್‌ಪಿಎಸ್ ರಾಜಗುಡ್ಡೆ, ಜಿಎಚ್‌ಪಿಎಸ್ ನ್ಯೂಪಡ್ಪು, ಜಿಎಚ್‌ಪಿಎಸ್ ಕಿನ್ಯಾ, ಜಿಎಚ್‌ಪಿಎಸ್ ಉರುಮನೆ.
ಪುತ್ತೂರು ಬ್ಲಾಕ್: ಜಿಎಚ್‌ಪಿಎಸ್ ಕೋಡಿಂಬಾಡಿ, ಜಿಎಚ್‌ಪಿಎಸ್ ಸಾಮೆತಡ್ಕ.
ಸುಳ್ಯ ಬ್ಲಾಕ್: ಜಿಎಚ್‌ಪಿಎಸ್ ದೇವಚಲ್ಲ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಂಜ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆರಂತೋಡು, ಜಿಎಚ್‌ಪಿಎಸ್ ಅಜ್ಜಾವರ.
2023–24ನೇ ಸಾಲಿನಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ದಾಖಲಾದವರು
ಒಟ್ಟು ಶಾಲೆ; ಒಂದನೇ ತರಗತಿ
ಬಂಟ್ವಾಳ; 15; 682
ಬೆಳ್ತಂಗಡಿ; 21; 558
ಮಂಗಳೂರು ಉತ್ತರ; 09; 261
ಮಂಗಳೂರು ದಕ್ಷಿಣ; 16; 505
ಮೂಡುಬಿದಿರೆ; 05; 193
ಪುತ್ತೂರು; 12; 443
ಸುಳ್ಯ; 04; 192
ಒಟ್ಟು; 82; 2,834
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ಮಂಗಳೂರು14 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್21 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ19 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ20 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ19 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಅಂತರ ರಾಜ್ಯ13 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ20 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ19 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















