ಬಿಗ್ ನ್ಯೂಸ್
Heavy rains-ಇಂದು ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ; ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ರೆಡ್, ಆರೆಂಜ್, ಯೆಲ್ಲೋ ಅಲರ್ಟ್
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜೂ.22ರಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಹವಾಮಾನ ಇಲಾಖೆಯು ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ನೀಡಿದೆ.
ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಸಾಕಷ್ಟು ವ್ಯಾಪಕವಾದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಪ್ರತ್ಯೇಕವಾಗಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಸಾಧಾರಣ ಮಳೆ:
ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೀನುಗಾರಿಕೆಗೆ ಹೋಗದಿರಲು ಸೂಚನೆ:
ಗುಡುಗು, ಮಿಂಚು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಐಎಂಡಿ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಕಾರಣಕ್ಕೆ ಜೂ. 24ರವರೆಗೆ ಮೀನುಗಾರಿಕೆಗೆ ಹೋಗದಂತೆ ಸೂಚನೆ ನೀಡಲಾಗಿದೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
ಬಿಗ್ ನ್ಯೂಸ್
ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.
ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.
ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್ ಹಾಲು
46- 54 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
47- 55 ರೂ.
-
ದಕ್ಷಿಣ ಕನ್ನಡ20 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ19 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ18 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್13 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ18 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಶಿಕ್ಷಣ17 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ಬಿಗ್ ನ್ಯೂಸ್18 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
-
ರಾಜಕೀಯ19 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ




















