ದಕ್ಷಿಣ ಕನ್ನಡ
ಆರ್ಥಿಕ ಶಕ್ತಿ ತುಂಬುವ ದೇಶದ ಅತೀ ದೊಡ್ಡ ಸ್ವಸಹಾಯ ಸಂಘವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಸಮಾಜಘಾತುಕ ಶಕ್ತಿಗಳು ಅಪಪ್ರಚಾರ ಮಾಡುತ್ತಿವೆ : ಸೂಕ್ತ ಕ್ರಮಕ್ಕೆ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ –
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆರ್.ಬಿ.ಐ.ನ ನಿಯಮದಂತೆ ದೇಶದ ಪ್ರಮುಖ ರಾಷ್ಟ್ರೀಕೃತ ಹಾಗೂ ಅನುಸೂಚಿತ ಬ್ಯಾಂಕ್‌ಗಳಿಗೆ ಸಾಂಸ್ಥಿಕ ಬಿ.ಸಿ.ಯಾಗಿ ಸೇವೆಸಲ್ಲಿಸುತ್ತಿದೆ. ದೇಶದಲ್ಲೇ ಅತಿ ದೊಡ್ಡ ಸ್ವಸಹಾಯ ಸಂಘ ಆರ್ಥಿಕ ಸೇರ್ಪಡೆಯನ್ನು ನಿರ್ವಹಿಸುವ ಸಂಸ್ಥೆಯಾಗಿ ಗ್ರಾಮಾಭಿವೃದ್ಧಿ ಯೋಜನೆಯು ಗುರುತಿಸಿಕೊಂಡಿದೆ.
ಬ್ಯಾಂಕ್‌ಗಳಿಂದ ಸ್ವಸಹಾಯ ಸಂಘಗಳಿಗೆ ನೇರವಾಗಿ ಸಾಲ ಸೌಲಭ್ಯವನ್ನು ನೀಡುತ್ತಿರುವುದರಿಂದ ಶೇ. 13.5 ಬಡ್ಡಿದರದಲ್ಲಿ ಒಂದು ಸಂಘಕ್ಕೆ ಗರಿಷ್ಠ ರೂ. 25 ಲಕ್ಷದವರೆಗೆ ಸಾಲ ದೊರೆಯುತ್ತಿರುವುದು ದೇಶದಲ್ಲೇ ಒಂದು ಮಾದರಿ ಬಿ.ಸಿ. ವ್ಯವಸ್ಥೆಯಾಗಿದೆ. ಪ್ರಸ್ತುತ ದಕ್ಷಿಣ ಕನ್ನಡ ಮತ್ತು ಉಡುಪಿ ಉಭಯ ಜಿಲ್ಲೆಗಳಲ್ಲಿ 46,972 ಸ್ವಸಹಾಯ ಸಂಘಗಳಿದ್ದು ರೂ. 2761 ಕೋಟಿ ಮೊತ್ತದ ಹೊರ ಬಾಕಿ ಇರುತ್ತದೆ. ಇಪ್ಪತ್ತು ವರ್ಷಗಳಿಗಿಂತಲೂ ಹೆಚ್ಚು ಅವಧಿಯ ಸ್ವಸಹಾಯ ಸಂಘಗಳು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿವೆ.
ಈ ಸಂಘಗಳು ಅತ್ಯುತ್ತಮವಾಗಿ ತಮ್ಮ ಸಂಘಗಳ ಗುಣಮಟ್ಟವನ್ನು ಕಾಯ್ದುಕೊಂಡ ಕಾರಣ ಸದಸ್ಯರ ಅಭಿವೃದ್ಧಿಯೊಂದಿಗೆ ಸಮಾಜದ ಅಭಿವೃದ್ಧಿಯೂ ಆಗಿರುತ್ತದೆ. ಕಿರು ಆರ್ಥಿಕ ಸಾಲ ಸೌಲಭ್ಯವನ್ನು ಒದಗಿಸುವ ವ್ಯವಸ್ಥೆಯಲ್ಲಿರುವ ಉಳಿದ ಎಲ್ಲಾ ಸಂಸ್ಥೆಗಳು ಲಾಭದಾಯಕ ಉದ್ದೇಶಿತ ಸಂಸ್ಥೆಗಳಾಗಿದ್ದರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ನೋಂದಾಯಿತವಾದ ಸಂಸ್ಥೆಯಾಗಿದೆ.
ಯೋಜನೆ ಬ್ಯಾಂಕ್‌ನಿಂದ ಗ್ರಾಮೀಣ ಜನತೆಗೆ ಆರ್ಥಿಕ ಸಾಲ ಸೌಲಭ್ಯವನ್ನು ಸ್ವಸಹಾಯ ಸಂಘಗಳ ಮಾದರಿಯಲ್ಲಿ ನೀಡುತ್ತಿರುವುದು ವಿಶೇಷವಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯು ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುವುದರಿಂದ ಇದು ಲಾಭ ಉದ್ದೇಶಿತ ಸಂಸ್ಥೆ ಆಗಿಲ್ಲ. ಬದಲಾಗಿ ತನ್ನ ಆದಾಯದಲ್ಲಿ ಮಿಗತೆ ಬಂದರೆ ಅದನ್ನು ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಅರ್ಪಿಸುತ್ತಿದೆ.
ಪ್ರಸ್ತುತ ವರ್ಷದಲ್ಲಿ ಪ್ರತಿ ತಿಂಗಳು 40 ಸಾವಿರ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು, 17 ಸಾವಿರ ವೃದ್ಧಾಪ್ಯ ಕಡುಬಡವರಿಗೆ ಪ್ರತಿ ತಿಂಗಳು ಮಾಸಾಶನವನ್ನು ನೀಡುತ್ತಿದೆ. ಈ ವರ್ಷ ಒಂದು ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳ ಶಿಕ್ಷಕರ ಕೊರತೆಯನ್ನು ತುಂಬಿದೆ.
ಕೆರೆ ಪುನರ್‌ಜೀವನ, ವಾತ್ಸಲ್ಯ ಕಾರ್ಯಕ್ರಮ, ಶುದ್ದಗಂಗಾ, ಹಿಂದೂ ರುದ್ರಭೂಮಿ ಯೋಜನೆ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಭಜನಾ ಮಂಡಳಿಗಳಿಗೆ, ಮದ್ಯವರ್ಜನ ಶಿಬಿರ, ವಿಕಲ ಚೇತನರಿಗೆ, ವೃದ್ಧರಿಗೆ ಸಲಕರಣೆ, ಪ್ರಾಕೃತಿಕ ವಿಕೋಪಗಳಿಗೆ ಧನಸಹಾಯ, ಕೃಷಿ ಅನುದಾನ ಕಾರ್ಯಕ್ರಮ, ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಸಹಕಾರ ನೀಡುವ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷ ರೀತಿಯಲ್ಲಿ ಸಾಮಾಜ ಸೇವೆಯನ್ನು ಸಲ್ಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ವಿಶೇಷ ಕೊಡುಗೆಯನ್ನು ನೀಡುತ್ತಿದೆ. ಪ್ರಗತಿರಕ್ಷಾ ಕವಚ ಮತ್ತು ಸುರಕ್ಷಾ ವಿಮಾ ಯೋಜನೆಗಳ ಮೂಲಕ ಬಡವರಿಗೆ ಜೀವವಿಮೆ ಭದ್ರತೆ ಹಾಗೂ ಆರೋಗ್ಯ ವಿಮಾ ಭದ್ರತೆಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಹೀಗೆ ಗ್ರಾಮೀಣ ಕರ್ನಾಟಕದ ರೈತರ, ಬಡವರ, ಮಹಿಳೆಯರ ಕಲ್ಪವೃಕ್ಷವಾಗಿ ಗ್ರಾಮಾಭಿವೃದ್ಧಿ ಯೋಜನೆಯು ಕಳೆದ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿದೆ.
ಕೆಲವು ತಿಂಗಳುಗಳಿಂದ ಗ್ರಾಮಾಭಿವೃದ್ಧಿ ಯೋಜನೆಯ ಸಾಲವನ್ನು ಯಾರೂ ಕಟ್ಟಬೇಡಿ, ಲೈಸೆನ್ಸ್ ಇಲ್ಲದೆ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ ಇತ್ಯಾದಿ ಸುಳ್ಳು ಸುದ್ದಿಗಳನ್ನು ಗ್ರಾಮೀಣ ಮುಗ್ಧ ಜನತೆಗೆ ಕೆಲವು ಸಮಾಜಘಾತುಕ ಶಕ್ತಿಗಳು ಮಾಡುತ್ತಿದ್ದಾರೆ. ಇವುಗಳಿಂದ ಕರಾವಳಿ ಪ್ರದೇಶದ ಸಜ್ಜನರು ತೀವ್ರ ನೊಂದಿದ್ದಾರೆ. ಸಮಾಜಘಾತುಕ ಶಕ್ತಿಗಳ ಅಪಪ್ರಚಾರದ ಬಗ್ಗೆ ಸಂಘದ ಸದಸ್ಯರು, ಸಾರ್ವಜನಿಕರು ಈಗಾಗಾಲೇ ಹಲವಾರು ಪೊಲೀಸ್ ಠಾಣೆಗಳಲ್ಲಿ ದೂರನ್ನು ದಾಖಲಿಸಿದ್ದಾರೆ.
ಅಪಪ್ರಚಾರ ಮಾಡುತ್ತಿದ್ದ ಒಂದು ವ್ಯವಸ್ಥಿತ ಗುಂಪನ್ನು ಪಡುಬಿದ್ರೆಯ ಯೆಲ್ಲೂರಿನ ಜನತೆ ಪೊಲೀಸರಿಗೆ ಒಪ್ಪಿಸಿದ್ದು ಇತ್ತೀಚೆಗೆ ವರದಿಯಾಗಿದೆ.ರಾಷ್ಟ್ರೀಕೃತ ಬ್ಯಾಂಕ್‌ಗಳು ದೇಶದ ಆರ್ಥಿಕ ಕಣ್ಣುಗಳು. ಉಭಯ ಕರಾವಳಿ ಜಿಲ್ಲೆಯ ಸ್ವಸಹಾಯ ಸಂಘಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಬ್ಯಾಂಕ್ ಆಫ್ ಬರೋಡಾದಿಂದ ಯೋಜನೆಯ ಮೂಲಕ ಬಿ.ಸಿ. ಮಾದರಿಯಲ್ಲಿ ಸಾಲ ದೊರೆಯುತ್ತಿದ್ದು ಇಂತಹ ಸಾಲಗಳನ್ನು ಕಟ್ಟಬೇಡಿ ಎಂದು ಪ್ರಚೋದನೆ ನೀಡುವುದು ಒಂದು ದೇಶದ್ರೋಹದ ಮತ್ತು ದೇಶದ ಅರ್ಥ ವ್ಯವಸ್ಥೆಯನ್ನು ಹಾಳು ಮಾಡುವ ಕೃತ್ಯವಾಗಿದೆ ಎಂದು ಜನರು ಖಂಡಿಸಿದ್ದಾರೆ.
ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆ ಎಂಬ ವ್ಯವಸ್ಥೆಯನ್ನು ಹಾಳು ಮಾಡುವ ಯಾವುದೇ ಹುನ್ನಾರ, ಪ್ರಯತ್ನಗಳಿಗೆ ಅವಕಾಶ ಮಾಡಿಕೊಡಬಾರದು.
ಈ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕೆಂದು ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸಜ್ಜನ ನಾಗರೀಕರು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ಎಸ್.ಬಿ.ಐ. ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡಾದ ಮುಖ್ಯ ವ್ಯವಸ್ಥಾಪಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















