ನಿಧನ ವಾರ್ತೆ
Mecca-ಮೆಕ್ಕಾ ಬಿಸಿಲ ತಾಪಕ್ಕೆ ಸಾವಿನ ಸಂಖ್ಯೆ 1300ಕ್ಕೆ ಏರಿಕೆ – ಮೃತಪಟ್ಟ 98 ಯಾತ್ರಿಕರು ಭಾರತೀಯರು
ಮೆಕ್ಕಾ: ಬಿಸಿಲಿನ ಬೇಗೆಯಿಂದ ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಈ ವರ್ಷ 1,301 ಹಜ್ ಯಾತ್ರಿಕರು ಬಿಸಿಲಿನ ಬೇಗೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸೌದಿ ಆರೋಗ್ಯ ಸಚಿವ ಫಹದ್ ಬಿನ್ ಅಬ್ದುರ್ರಹ್ಮಾನ್ ಅಲ್-ಜಲಾಜೆಲ್ ಅವರು ಭಾನುವಾರ ನೀಡಿರುವ ಮಾಹಿತಿ ಪ್ರಕಾರ ಮೃತಪಟ್ಟ 1,301ರಲ್ಲಿ 83% ಯಾತ್ರಿಕರು ಅನಧಿಕೃತವಾಗಿ ಬಂದವರು ಅಂದರೆ ನೋಂದಣಿ ಮಾಡಿಕೊಳ್ಳದೆ ಬಂದವರಾಗಿದ್ದು ಇಲ್ಲಿ ಅವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ಮೃತಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.
ಘಟನೆ ಕುರಿತು ಹೇಳಿಕೆ ನೀಡಿರುವ ಸಚಿವರು, 95 ಯಾತ್ರಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಕೆಲವರನ್ನು ರಾಜಧಾನಿ ರಿಯಾದ್ನಲ್ಲಿ ಚಿಕಿತ್ಸೆಗಾಗಿ ವಿಮಾನದಲ್ಲಿ ಕಳುಹಿಸಲಾಗಿದೆ ಎಂದು ಹೇಳಿದರು. ಸೌದಿಯಲ್ಲಿ ಹಜ್ ಯಾತ್ರಿಕರು ಮೃತಪಟ್ಟರೆ ಅಂತವರನ್ನು ಗುರುತಿಸುವುದು ಅತ್ಯಂತ ಕಷ್ಟಕರವಾದ ಕೆಲಸವಾಗಿದೆ ಏಕೆಂದರೆ ಮೃತ ವ್ಯಕ್ತಿಗಳು ನೋಂದಣಿ ಮಾಡದೇ ಬಂದಿರುವುದರಿಂದ ಅವರ ಬಳಿ ಯಾವುದೇ ಅಧಿಕೃತ ದಾಖಲೆಗಳು ಇರುವುದಿಲ್ಲ ಹಾಗಾಗಿ ಗುರುತು ಪತ್ತೆಹಚ್ಚುವ ಕೆಲಸ ಕಷ್ಟ ಎಂದು ಹೇಳಿದ್ದಾರೆ. ಗುರುತು ಪತ್ತೆ ಹಚ್ಚಲಾಗದ ಯಾತ್ರಾರ್ಥಿಗಳನ್ನು ಮೆಕ್ಕಾದಲ್ಲಿ ಸಮಾಧಿ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಮೃತರಲ್ಲಿ ಈಜಿಪ್ಟ್ ನಾಗರಿಕರೇ ಹೆಚ್ಚು:
ಬಿಸಿಲಿನ ತಾಪಕ್ಕೆ ಮೆಕ್ಕಾದಲ್ಲಿ ಮೃತಪಟ್ಟವರಲ್ಲಿ 660ಕ್ಕೂ ಹೆಚ್ಚು ಈಜಿಪ್ಟ್ ನಾಗರಿಕರು ಸೇರಿದ್ದಾರೆ ಎಂದು ಕೈರೋದಲ್ಲಿ ಸೌದಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ 31 ಮಂದಿಯನ್ನು ಹೊರತುಪಡಿಸಿ ಎಲ್ಲರೂ ಅನಧಿಕೃತ ಯಾತ್ರಿಗಳು. ಸೌದಿ ಅರೇಬಿಯಾದಲ್ಲಿ ಹಲವಾರು ಅನಧಿಕೃತ ಹಜ್ ಯಾತ್ರಾರ್ಥಿಗಳು ಸಾವನ್ನಪ್ಪಿದ ನಂತರ, ಅನಧಿಕೃತ ಯಾತ್ರಿಕರಿಗೆ ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಸಹಾಯ ಮಾಡುತ್ತಿದ್ದ 16 ಟ್ರಾವೆಲ್ ಏಜೆನ್ಸಿಗಳ ಪರವಾನಗಿಯನ್ನು ಈಜಿಪ್ಟ್ ರದ್ದುಗೊಳಿಸಿದೆ. ಅಡಿಕ್ರಿಗಳ ಮಾಹಿತಿ ಪ್ರಕಾರ ಮೆಕ್ಕಾದ ಅಲ್-ಮುಯಿಸ್ಸಾಮ್ ಪ್ರದೇಶದಲ್ಲಿ ಇರುವ ತುರ್ತು ಸಂಕೀರ್ಣದಲ್ಲಿ ಹೆಚ್ಚಿನ ಸಾವು ಸಂಭವಿಸಿವೆ ಎಂದು ಹೇಳಿದ್ದಾರೆ.
ಮೃತರಲ್ಲಿ ಕಾಲ್ನಡಿಗೆ ಮಾಡಿದವರು ಸಂಖ್ಯೆ ಜಾಸ್ತಿ:
ಸೌದಿ ಅಧಿಕಾರಿಗಳು ನೋಂದಣಿ ಮಾಡದೇ ಬರುತ್ತಿರುವ ಯಾತ್ರಿಕರ ಮೇಲೆ ಕಠಿಣ ಕ್ರಮ ಕೈಗೊಂಡಿದ್ದರೂ ಇದರ ಹೊರತಾಗಿಯೂ, ಹೆಚ್ಚಿನ ಸಂಖ್ಯೆಯ ಈಜಿಪ್ಟ್ ಯಾತ್ರಿಕರು ಮೆಕ್ಕಾ ಮತ್ತು ಅದರ ಸುತ್ತಮುತ್ತಲಿನ ಪವಿತ್ರ ಸ್ಥಳಗಳನ್ನು ತಲುಪುವಲ್ಲಿ ಯಶಸ್ವಿಯಾದರು. ಈ ಯಾತ್ರಾರ್ಥಿಗಳಲ್ಲಿ ಹೆಚ್ಚಿನವರು ಕಾಲ್ನಡಿಗೆಯಲ್ಲಿ ಮೆಕ್ಕಾವನ್ನು ತಲುಪಿದರು, ಇದರಿಂದಾಗಿ ಅವರು ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ನಿಧನ ವಾರ್ತೆ
Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.
ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.
ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Sullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
-
ನಿಧನ ವಾರ್ತೆ18 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಮಂಗಳೂರು21 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ23 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಸ್ಥಳೀಯ24 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized16 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ18 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್18 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಮಂಗಳೂರು17 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್


















