Connect with us

ಸ್ಥಳೀಯ

Ujire-“ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ”

Published

on

Ad Widget

Ad Widget

Ad Widget

Ad Widget

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡುತ್ತಾ ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಬಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು.

Ad Widget

Ad Widget

Ad Widget

Ad Widget

ಇದರಿಂದ ಸ್ವಂತ ಉದ್ಯೋಗ ಪ್ರಾರಂಬಿಸಲು ಅನುಕೂಲವಾಗುತ್ತದೆ, ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ಹೇಳಿದರು. ತರಬೇತಿ ಪಡೆದ ಎಲ್ಲರಿಗೂ ಶುಭ ಹಾರೈಸಿ ಆರ್ಶೀವದಿಸಿದರು.

Ad Widget

Ad Widget alt="Ad Widget"/>

Ad Widget

ಈ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕರಾದ ರಂಜನ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ. ಎನ್. ಜನಾರ್ಧನ್, ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ ಬಿ.ಪಿ ಉಪಸ್ಥಿತರಿದ್ದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್ ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ ಕೆ. ಕರುಣಾಕರ ಜೈನ್ ವಂದಿಸಿದರು. ತರಬೇತಿಯಲ್ಲಿ ಒಟ್ಟು 65 ಜನ ಅಭ್ಯರ್ಥಿಗಳನ್ನು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Ad Widget

Ad Widget <> Ad Widget

Ad Widget
Click to comment

Leave a Reply

ದಕ್ಷಿಣ ಕನ್ನಡ

ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ ಉದ್ಘಾಟನೆಗೊಂಡಿತು.

Ad Widget

Ad Widget

Ad Widget

Ad Widget

ಮಂಗಳೂರಿನ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವಕ್ಕೆ ಸಾಕ್ಷಿಯಾಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದ್ದು, ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ದೀಪೋತ್ಸವಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್‌ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಸ್ತಾವನೆಗೈದು, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು. ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.

Continue Reading

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!