ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ
ಶಾಲಾ ಜೀವನದಲ್ಲಿಯೇ ಮಕ್ಕಳಿಗೆ ಚುನಾವಣಾ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚುನಾವಣೆಯ ಮೂಲಕ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು.

ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಆಕಾಶ್ ಪ್ರಭು (ಎಂ ಗುರುಪ್ರಸಾದ್ ಪ್ರಭು ಮತ್ತು ಶ್ರೀಮತಿ ಅಶ್ವಿನಿ ಪ್ರಭು ದಂಪತಿಗಳ ಪುತ್ರ) ಹಾಗೂ ಉಪನಾಯಕಿಯಾಗಿ 9 ನೇ ತರಗತಿಯ ಕುಮಾರಿ ಸುಪ್ರಜಾ ರಾವ್ (ಶ್ರೀ ಪ್ರಶಾಂತ್ ರಾವ್ ಮತ್ತು ಶ್ರೀಮತಿ ಸುಮನಾ ಕೆ ದಂಪತಿಗಳ ಪುತ್ರಿ) ಆಯ್ಕೆಯಾದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ಸಾಕ್ಷಿನ್ ಆರ್ ರೈ (ಶ್ರೀ ರವೀಂದ್ರನಾಥ್ ರೈ ಮತ್ತು ಶ್ರೀಮತಿ ಜ್ಯೋತಿಲಕ್ಷ್ಮಿ ಜಿ ದಂಪತಿಗಳ ಪುತ್ರ) ಹಾಗೂ ಉಪನಾಯಕನಾಗಿ 6 ನೇ ತರಗತಿಯ ಸ್ಕಂದನ್ ಎಸ್ (ನಾಗರಾಜ್ ಎಸ್ ಮತ್ತು ಶ್ರೀಮತಿ ಲಿಖಿತಾ ಪಿ ದಂಪತಿಗಳ ಪುತ್ರ) ಆಯ್ಕೆಯಾದರು. ಸಭಾಪತಿಯಾಗಿ ಕು. ವರ್ಣಾ.ಕೆ, ಪ್ರತಿಪಕ್ಷ ನಾಯಕರಾಗಿ ಸಾರ್ಥಕ್, ಗೃಹ ಸಚಿವರಾಗಿ ಯಶಸ್, ಶಮನ್ ; ಶಿಕ್ಷಣ ಸಚಿವರಾಗಿ ಲಿಕೀತನ್, ಗಣೇಶ್ ಪಟೇಲ್; ಹಣಕಾಸು ಸಚಿವರಾಗಿ ವಿಕಾಸ್, ಚಂದನ್ ; ಆರೋಗ್ಯ ಸಚಿವರಾಗಿ ನಿಖಿಲ್, ದೈವಿಕ್ ; ಕ್ರೀಡಾ ಸಚಿವರಾಗಿ ಮನ್ವಿತ್, ಚಿಂತನಾ ; ಸಾಂಸ್ಕೃತಿಕ ಸಚಿವರಾಗಿ ಕೃತಿ, ಅಭಿನವ್ ; ನೀರಾವರಿ ಸಚಿವರಾಗಿ ನಂದಕಿಶೋರ್, ಅಭಿಷೇಕ್ ; ಆಹಾರ ಸಚಿವರಾಗಿ ಶಾನ್ವಿ, ಆರಾಧನ್ ; ಪ್ರಸಾರಖಾತೆ ಸಚಿವರಾಗಿ ಚಿನ್ಮಯಿ, ಅವನಿ. ಎಸ್. ರೈ ; ದಾಖಲೆ ನಿರ್ವಾಹಕರಾಗಿ ದೇಶಿಕ್ ಆಯ್ಕೆಯಾದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಶ್ರೀ ಭಾಸ್ಕರ ಗೌಡ ಮತ್ತು ಶ್ರೀ ರಾಧಾಕೃಷ್ಣ ರೈ ಇವರ ನೇತೃತ್ವದಲ್ಲಿ 5ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತದಾನ ಪ್ರಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಶಾಲಾ ಶಿಕ್ಷಕ ವೃಂದ ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.
ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.
‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ -ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಬಾಲಕಿಯರ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ೪೪ ಕೆ.ಜಿ, ದ್ರಿಶ್ಯ 68 ಕೆ .ಜಿ ವಿಭಾಗ ಬೆಳ್ಳಿ ಪದಕ, ಪ್ರಥಮ ವಾಣಿಜ್ಯ ವಿಭಾಗದ ಸಾನ್ವಿ 64 ಕೆ. ಜಿ ವಿಭಾಗ ಕಂಚಿನ ಪದಕ. ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಘನಶ್ಯಾಮ್ ೫೦ ಕೆ.ಜಿ ವಿಭಾಗ ಬೆಳ್ಳಿ ಪದಕ ಪಡೆದಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Vivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 14 ವರ್ಷಗಳ ಬೋಧನಾನುಭವ ಹೊಂದಿರುವ ಸಹಾಯಕ ಪ್ರಾಧ್ಯಾಪಕ ಪ್ರಮೋದ್ ಕುಮಾರ್.ಪಿ.ಎಮ್ ಅರೇಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಎಂಡ್ ಕ್ಲಾಸಿಫಿಕೇಶನ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್(Areca Plant Disease identification and classification using deep learning techniques) ಎನ್ನುವ ವಿಷಯದ ಬಗ್ಗೆ ತಿಪಟೂರಿನ ಕಲ್ಪತರು ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯ ಡಾ.ರವಿಪ್ರಕಾಶ್.ಎಮ್.ಎಲ್ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಶ್ರೀಮತಿ ಅಕ್ಷಯ.ಡಿ.ಶೆಟ್ಟಿ ಇವರು ಡಿಸೈನ್ ಎಂಡ್ ವ್ಯಾಲಿಡೇಶನ್ ಆಫ್ ಗ್ಯಾಲ್ವೇನಿಕ್ ಸ್ಕಿನ್ ರೆಸ್ಪೊನ್ಸ್ ಡಿವೈಸ್ ಫಾರ್ ಟ್ರೀಟ್‌ಮೆಂಟ್ ಆಫ್ ನ್ಯೂರೋಲಾಜಿಕಲ್ ಎಂಡ್ ಸೈಕಿಯಾಟ್ರಿಕ್ ಡಿಸಾರ್ಡರ್ಸ್ (Design and Validation of galvanic skin response (GSR) device for treatment of neurological and psychiatric disorders) ಎನ್ನುವ ವಿಷಯದ ಬಗ್ಗೆ ಎಸ್.ಇ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರೊಫೆಸರ್ ಹಾಗೂ ಡೀನ್(ಆರ್&ಡಿ) ಆಗಿರುವ ಡಾ.ಉಷಾ ದೇಸಾಯಿ ಮತ್ತು ಸೆಂಟ್ರಲ್ ಯುನಿವರ್ಸಿಟಿ ಹರ್ಯಾಣದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಡಾ. ಆಕಾಶ್ ಸಕ್ಸೇನ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.
ಇವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದಲ್ಲಿ 9 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಸಾಧನೆಗೆ ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್.ಎಸ್.ಕೆ ತಿಳಿಸಿದ್ದಾರೆ.
-
ನಿಧನ ವಾರ್ತೆ9 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized23 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ8 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಸ್ಥಳೀಯ9 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಮಂಗಳೂರು6 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ನಿಧನ ವಾರ್ತೆ3 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ರಾಜಕೀಯ8 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಬಿಗ್ ನ್ಯೂಸ್3 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















