ಬಿಗ್ ನ್ಯೂಸ್
Patla Betta | ಪಟ್ಲಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ಸತತ ರೌಡಿಸಂ ಮೆರೆಯುತ್ತಿದ್ದ ನಾಲ್ವರು ಸ್ಥಳೀಯ ಜೀಪು ಚಾಲಕರ ಬಂಧನ
ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ (Patla Betta) ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರ ಬಂಧನವಾಗಿದೆ.
ಎರಡು ವರ್ಷದ ಹಿಂದೆ ಪುತ್ತೂರಿನ ಪ್ರವಾಸಿಗರಿಗೆ ಹಲ್ಲೆಗೆ ಮುಂದಾಗಿದ್ದ ಈ ತಂಡ ಇದೀಗ ಮತ್ತೆ ಬೈಕ್ ಸವಾರರಿಗೆ ಹಲ್ಲೆ ನಡೆಸಿದೆ. ಈ ಜೀಪು ಚಾಲಕರ ರೌಡಿಸಂನ್ನು ಕೇಳುವವರೇ ಇಲ್ಲದಾಗಿದೆ. ಹಾಸನ ಜಿಲ್ಲಾಡಳಿತ ಮೌನ ವಹಿಸಿರುವುದು ಎಲ್ಲಾ ಅನುಮಾನಕ್ಕೂ ಎಡೆಮಾಡಿಕೊಟ್ಟಿತು.
ಇತ್ತಿಚೆಗೆ ಪಟ್ಲಬೆಟ್ಟಕ್ಕೆ ತೆರಳಿದ ಮಂಗಳೂರಿನ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ಹಲ್ಲೆ ಮಾಡಿದ್ದರು. ಇದೀಗ ನಾಲ್ವರು ಜೀಪು ಚಾಲಕರ ಬಂಧನವಾಗಿದೆ.
ಪಟ್ಲ ಬೆಟ್ಟದ ಮೇಲಿನಿಂದ ಒಂದು ದಿಕ್ಕಿಗೆ ಕೊಡಗು ಜಿಲ್ಲೆಯ ಮಲ್ಲಳ್ಳಿ ಜಲಪಾತ, ಇನ್ನೊಂದು ಕಡೆ ವೀವ್ ಪಾಯಿಂಟ ಕಾಣಿಸುತ್ತದೆ. ಬೆಟ್ಟದ ಎದುರಿಗೆ ಪುಷ್ಪಗಿರಿ ವನ್ಯದಾಮದ ಜೋಡಿ ಬೆಟ್ಟಗಳು ತಲೆ ಎತ್ತಿ ನಿಂತಿವೆ. ಈ ಎಲ್ಲಾ ಬೆಟ್ಟಗಳ ಸಾಲನ್ನು ಕುಮಾರ ಧಾರ ನದಿ ಸೀಳಿಕೊಂಡು ಹೋಗಿವೆ.
ಹಾಸನ ಜಿಲ್ಲಾ ಕೇಂದ್ರದಿಂದ ಪಟ್ಟಬೆಟ್ಟ 80 ಕಿ.ಮೀ ದೂರದಲ್ಲಿದೆ. ಸುಬ್ರಹ್ಮಣ್ಯದಿಂದ 30ಕಿಮೀ ದೂರದಲ್ಲಿರುವ ಈ ಬೆಟ್ಟ ವೀಕ್ಷಣೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಪ್ರವಾಸಿಗರು ಆಗಮಿಸುತ್ತಾರೆ.
ಪಟ್ಲದಲ್ಲಿ ನಡೆಯುತ್ತಿದೆ ದಂಧೆ: ಸುಮಾರು 5 ವರ್ಷಗಳಿಂದ ಈಚೆಗೆ ಭಾರಿ ಪ್ರಸಿದ್ದ ಪಡೆದ ಈ ಬೆಟ್ಟದಲ್ಲಿ ಈಗೀಗ ಬಾರಿ ದೊಡ್ಡ ದಂಧೆಯೇ ಆಗುತ್ತಿದೆ.
ಅಲ್ಲಿ ಬಿಳಿ ಬೋರ್ಡ್ ನ ಖಾಸಗಿ ಪಿಕಪ್ ಗಳನ್ನು ಹೊಂದಿರುವ ವಾಹನ ಮಾಲಿಕರು ಬೆಟ್ಟಕ್ಕೆ ಖಾಸಗಿ ವಾಹನಗಳ ಮೂಲಕ ಸಂಚರಿಸಲು ಅವಕಾಶ ನೀಡುತ್ತಿಲ್ಲ. ತಮ್ಮ ಖಾಸಗಿ ಬಿಳಿ ನಂಬರ್ ಪ್ಲೇಟ್ ಹೊಂದಿರುವ ಪಿಕಪ್ ನಲ್ಲೇ ಬಾಡಿಗೆ ನಡೆಸಿ ಮತ್ತು ಅಪಾಯಕಾರಿ ರೀತಿ ಜನರನ್ನು ತುಂಬಿಸಿ ಕಾನೂನು ಉಲ್ಲಂಘಿಸಿದರೂ ಸಂಬಂಧಪಟ್ಟ ಇಲಾಖೆ ಮೌನವಾಗಿರುವುದೇ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.ಗೂಡ್ಸ್ ವಾಹನದಲ್ಲಿ ಪ್ರವಾಸಿಗರನ್ನು ಸಾಗಿಸಿ ಏನಾದರು ಅವಘಡ ಸಂಭವಿಸಿದರೆ ಇನ್ಸೂರೆನ್ಸ್ ಕ್ಲೈಮ್ ಆಗುವುದಿಲ್ಲ. ಇಷ್ಟು ಅನಾಹುತವಾತದರೂ ಹಾಸನ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಮೌನವಹಿಸಿರುವುದೇ ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.
ಒಂದು ವೇಳೆ ಖಾಸಗಿ ವಾಹನಗಳ ಮೂಲಕ ಸಂಚರಿಸಿದರೇ ಏನೇನೋ ನೆಪವೊಡ್ಡಿ ಜಗಳಕ್ಕೆ ಬರುತ್ತಾರೆ ಮತ್ತು ಹಲ್ಲೆಗೆ ಮುಂದಾಗುತ್ತಾರೆ.
ಕೇವಲ 2 ಕಿಮೀ ಗೆ ಒಬ್ಬೊಬ್ಬ ಪ್ರವಾಸಿಗರತ್ರ ಸಾವಿರಾರು ರೂಪಾಯಿ ತೆಗೆದುಕೊಂಡು ಪಿಕಪ್ ನಲ್ಲಿ ಅಪಾಯಕಾರಿ ರೀತಿ ತುಂಬಿಸಿಕೊಂಡು ದೂರದ ಬೆಟ್ಟ ವೀಕ್ಷಣೆಗೆ ಕರೆದುಕೊಂಡು ಹೋಗುತ್ತಾರೆ.
ಬೆಟ್ಟದ ರಸ್ತೆಯು ಬಾರಿ ಅಪಾಯಕಾರಿ ಸ್ಥಿತಿಯಲ್ಲಿದೆ, ಕೇವಲ ಪಿಕಪ್ ವಾಹನಕ್ಕೆ ಸಂಚರಿಸಲು ಮಾತ್ರ ಸಾಧ್ಯವಾಗುವಂತೆ ರಸ್ತೆ ಇಟ್ಟುಕೊಂಡಿದ್ದಾರೆ ಮತ್ತು ಪ್ರವೇಶ ಸ್ಥಳದಲ್ಲೇ ದೊಡ್ಡ ಹೊಂಡ ಮಾಡಿ ಪ್ರವಾಸಿಗರು ತಮ್ಮ ಸ್ವಂತ ವಾಹನದಲ್ಲಿ ಪ್ರವೇಶಿಸಲು ಹೆದರುವಂತೆ ಮಾಡುತ್ತಾರೆ ಎಂದು ಆರೋಪಿಸುತ್ತಾರೆ ಪ್ರವಾಸಿಗರು.
ರಸ್ತೆಯಲ್ಲಿ ಹಲವು ಪಿಕಪ್ ಗಳು ಮಗುಚಿ ಬಿದ್ದು, ಪ್ರವಾಸಿಗರಿಗೆ ಗಾಯಗಳಾದ ಘಟನೆಯೂ ನಡೆದಿದೆ ಎನ್ನುತ್ತಾರೆ ಬೆಂಗಳೂರಿನ ಪ್ರವಾಸಿಗರೊಬ್ಬರು.
ಅರಣ್ಯ ಇಲಾಖೆ ಪ್ರಕಾರ ಪಟ್ಲ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿದೆ. ಆದರೆ ಅಲ್ಲಿ ಒಬ್ಬನೇ ಒಬ್ಬ ಅರಣ್ಯ ಇಲಾಖೆ ಸಿಬ್ಬಂದಿಯಾಗಲಿ ಪೊಲೀಸ್ ಸಿಬ್ಬಂದಿಯಾಗಲಿ ಇಲ್ಲಿ ಇಲ್ಲದಿರುವುದೇ ಈ ದಂಧೆಕೋರರಿಗೆ ಸ್ವರ್ಗದಂತಾಗಿದೆ.
ಪಿಕಪ್ ವಾಹನದವರು ಪ್ರವಾಸಿಗರೊಂದಿಗೆ ನಡೆದುಕೊಳ್ಳುವ ರೀತಿಯ ವಿರುದ್ಧ ದೂರು ನೀಡಲು ಅಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯೂ ಇದೆ. ಅಲ್ಲಿ ಪೊಲೀಸ್ ಠಾಣೆಯ ಮಾಹಿತಿ ಬೋರ್ಡ್ ಕೂಡ ಇಲ್ಲ. ಸ್ಥಳಿಯ ಪೊಲೀಸ್ ಸಿಬ್ಬಂದಿಯೂ ಅಲ್ಲಿ ಭದ್ರತೆಗಿಲ್ಲ.
ಪ್ರಸಿದ್ಧ ಪ್ರವಾಸಿ ತಾಣವನ್ನು ಈ ದಂಧೆಯಿಂದ ಮುಕ್ತಗೊಳಿಸಿ ಸೂಕ್ತ ರಕ್ಷಣೆ ಸಿಕ್ಕಿದರೆ ಬರುವ ಪ್ರವಾಸಿಗರ ಸಂಖ್ಯೆಯೂ ಜಾಸ್ತಿಯಾಗಬಹುದು.
ಸ್ವಲ್ಪ ದೂರ ರಸ್ತೆಯನ್ನು ಕಾಂಕ್ರಿಟಿಕರಣಗೊಳಿಸಿದರೆ ಪ್ರವಾಸಿಗರಿಗೂ ಮುಕ್ತವಾಗಿ ಈ ಬೆಟ್ಟದ ಸೊಬಗನ್ನು ವೀಕ್ಷಿಸಿಬಹುದು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ರಾಜಕೀಯ22 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು6 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















