ಮಂಗಳೂರು
ಮಂಗಳೂರಿನಲ್ಲಿ ಭಾರೀ ದುರ್ಘಟನೆ : ರಾತ್ರಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳ ಸಹಿತ ಒಂದೇ ಮನೆಯ ನಾಲ್ವರು ಮೃತ್ಯು
ಮಂಗಳೂರು : ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ಪಕ್ಕದ ಮನೆಯ ಗೋಡೆಯ ಮೇಲೆ ಬಿದ್ದು ಒಂದೇ ಮನೆಯ ನಾಲ್ವರು ದುರ್ಮರಣಕ್ಕಿಡಾದ ಧಾರುಣ ಘಟನೆ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ. ದಂಪತಿ ಹಾಗೂ ಅವರಿಬ್ಬರು ಮಕ್ಕಳು ಮೃತಪಟ್ಟವರು.

ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟವರು. ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿತವಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ.

ಅಬೂಬಕ್ಕರ್ ಹಾಗೂ ಯಾಸೀರ್ ಅವರ ಮನೆಗಳು ಅಕ್ಕಪಕ್ಕ ಇದೆ ಎಂದು ತಿಳಿದು ಬಂದಿದೆ. ಅಬೂಬಕ್ಕರ್ ಮನೆಯ ಗೋಡೆಯೂ ಯಾಸಿರ್ ಅವರ ಮನೆಯ ಗೋಡೆಗೆ ಬಿದ್ದು ಈ ಭಾರೀ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಮಣ್ಣಿನಡಿಯಿಂದ ಹೊರತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಬಿರುಸಿನ ಕಾರ್ಯಾಚರಣೆ ನಡೆಯುತ್ತಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಅಪರಾಧ
Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಪರಾಧ
Mangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಹೊಣೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು. ಎಫ್‌ಐಆರ್ ದಾಖಲಾದ ಸಂದರ್ಭದಲ್ಲಿ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಬಂಧನ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ
ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಫಾದರ್ ಸಿಪ್ರಿಯನ್ ಪಿಂಟೊ ವಿರುದ್ಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.
-
ಬಿಗ್ ನ್ಯೂಸ್24 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















